AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಪ್ರಿಯಕರನನ್ನು ರಾತ್ರಿ ಕಬ್ಬಿನ ಗದ್ದೆಗೆ ಕರೆಸಿ ಕೊಂದ ಯುವತಿಯರು

Shocking News: ತಮ್ಮ ಪ್ರೇಮಿಯನ್ನು ರಾತ್ರಿ ವೇಳೆ ಕಬ್ಬಿನ ಗದ್ದೆಗೆ ಕರೆಸಿದ ಗೆಳತಿಯರಿಬ್ಬರು ವಿಪರೀತ ಚಿತ್ರಹಿಂಸೆ ನೀಡಿ ಸಾಯಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಷ್ಟಕ್ಕೂ ಇಬ್ಬರು ಯುವತಿಯರ ಮುದ್ದಿನ ಹುಡುಗ ಕೊಲೆಯಾಗಲು ಕಾರಣವೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Crime News: ಪ್ರಿಯಕರನನ್ನು ರಾತ್ರಿ ಕಬ್ಬಿನ ಗದ್ದೆಗೆ ಕರೆಸಿ ಕೊಂದ ಯುವತಿಯರು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 29, 2024 | 6:54 PM

Share

ನೊಯ್ಡಾ: ಉತ್ತರ ಪ್ರದೇಶದ ಅಂಬೇಡ್ಕರ್ ನಗರ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ಆತನ ಇಬ್ಬರು ಪ್ರೇಯಸಿಯರು ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಅಪರಾಧ ಇಡೀ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಸುಳ್ಳು ಹೇಳಿ ಆ ಯುವಕನನ್ನು ಕಬ್ಬಿನ ಗದ್ದೆಗೆ ಕರೆದೊಯ್ದ ಆತನ ಇಬ್ಬರು ಪ್ರೇಯಸಿಯರು ಅಲ್ಲಿ ಚೀನಾ ಟಾರ್ಚ್‌ನಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ.

ಈ ಪ್ರಕರಣದಲ್ಲಿ ಆರೋಪಿಗಳಾದ ಯುವತಿಯರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಪೊಲೀಸರನ್ನು ಬೆಚ್ಚಿ ಬೀಳಿಸಿದ್ದು ಮಾತ್ರವಲ್ಲದೆ ಸಮಾಜದಲ್ಲಿ ಚರ್ಚೆಗೆ ಗ್ರಾಸವಾಗಿದೆ. 3 ದಿನಗಳ ಹಿಂದೆ ಕಬ್ಬಿನ ಗದ್ದೆಯಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ಯುವಕನ ಶವವನ್ನು ಪೊಲೀಸರು ಪತ್ತೆ ಮಾಡಿದ್ದರು. ಈ ಪ್ರಕರಣ ಅಂಬೇಡ್ಕರ್ ನಗರದ ಸಮ್ಮನಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆ ಶವವನ್ನು ಗುರುತಿಸಿ ತನಿಖೆ ಆರಂಭಿಸಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಈ ಪ್ರಕರಣವೊಂದು ಪ್ರೇಮ ಪ್ರಕರಣ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಪೊಲೀಸರು ಆಳವಾಗಿ ತನಿಖೆ ನಡೆಸಿದಾಗ ಯುವಕನನ್ನು ಆತನ ಇಬ್ಬರು ಗೆಳತಿಯರೇ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಆರೋಪಿ ಯುವತಿಯರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವರು ತಮ್ಮ ಅಪರಾಧವನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ: Viral News: 1 ಕೆಜಿ ಜಿಲೇಬಿಯಿಂದ ಕೆಲಸವನ್ನೇ ಕಳೆದುಕೊಂಡ ಪೊಲೀಸ್; ಏನಿದು ವಿಚಿತ್ರ ಘಟನೆ?

ಈ ಕೊಲೆಯ ಹಿಂದಿನ ಕಾರಣ ತುಂಬಾ ಆಘಾತಕಾರಿಯಾಗಿದೆ. ಮೃತ ಯುವಕ ಸಂದೀಪ್ ಚೌಹಾಣ್, ಜಲಾಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಂಜಾ ಇಸ್ಮಾಯಿಲ್‌ಪುರ ಗ್ರಾಮದ ನಿವಾಸಿಯಾಗಿದ್ದು, ಅದೇ ಗ್ರಾಮದ ಇಬ್ಬರು ಯುವತಿಯರೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಪ್ರೀತಿಸುವುದಾಗಿ ತಮ್ಮಿಬ್ಬರನ್ನೂ ನಂಬಿಸಿ, ಮೋಸ ಮಾಡಿರುವುದು ಆ ಯುವತಿಯರಿಗೆ ಗೊತ್ತಾಗಿದೆ. ಅವರಿಬ್ಬರಿಗೂ ಆ ಯುವಕ ಸಂದೀಪ್ ಬ್ಲಾಕ್​ಮೇಲ್ ಮಾಡುತ್ತಿದ್ದ.

ಪೊಲೀಸರಿಗೆ ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಅದರ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಪೊಲೀಸರು ಇಬ್ಬರೂ ಮಹಿಳೆಯರನ್ನು ವಿಚಾರಣೆಗೆ ಒಳಪಡಿಸಿದ್ದು, ಸಂದೀಪ್ ಅವರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆಂದು ತಿಳಿದುಬಂದಿದೆ. ಈ ಬ್ಲ್ಯಾಕ್‌ಮೇಲಿಂಗ್‌ನಿಂದ ನೊಂದ ಇಬ್ಬರೂ ಸೇರಿ ಸಂದೀಪ್‌ನನ್ನು ಕೊಲ್ಲಲು ಯೋಜನೆ ರೂಪಿಸಿದ್ದರು.

ಇದನ್ನೂ ಓದಿ: Bengaluru Crime: ಬೆಳಗ್ಗೆ ಎದ್ದಾಗ ಕತ್ತು ಸೀಳಿದ ಗೆಳತಿಯ ಶವ ಕಂಡು ಯುವತಿ ಶಾಕ್; ಬೆಂಗಳೂರಿನಲ್ಲೊಂದು ಬರ್ಬರ ಹತ್ಯೆ

ಆಗಸ್ಟ್ 26 ರಂದು ರಾತ್ರಿ ಕಬ್ಬಿನ ಗದ್ದೆಯಲ್ಲಿ ಭೇಟಿಯಾಗಲು ಇಬ್ಬರೂ ಯುವತಿಯರು ಸಂದೀಪ್‌ಗೆ ಕರೆ ಮಾಡಿದ್ದರು. ಸಂದೀಪ್ ಅಲ್ಲಿಗೆ ಬಂದಾಗ ಇಬ್ಬರೂ ಸೇರಿ ಚೈನೀಸ್ ಟಾರ್ಚ್ ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಕೊಲೆ ಮಾಡಿದ ಬಳಿಕ ಶವವನ್ನು ಅದೇ ಸ್ಥಳದಲ್ಲಿ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾರೆ. ಈ ಪ್ರಕರಣದ ಕುರಿತು ಪೊಲೀಸರು ಆಳವಾದ ತನಿಖೆ ನಡೆಸಿದಾಗ ಸಂದೀಪ್ ಹತ್ಯೆಯ ಹಿಂದಿನ ಸತ್ಯಾಂಶ ಬೆಳಕಿಗೆ ಬಂದಿದೆ. ಸಂದೀಪ್‌ನ ಬ್ಲ್ಯಾಕ್‌ಮೇಲ್​ನಿಂದ ಬೇಸತ್ತು ಈ ಕ್ರಮ ಕೈಗೊಂಡಿರುವುದಾಗಿ ಆರೋಪಿ ಮಹಿಳೆಯರು ತಪ್ಪೊಪ್ಪಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ