Crime News: ಆಟೋ ಹತ್ತಿದ ನರ್ಸಿಂಗ್ ವಿದ್ಯಾರ್ಥಿನಿಗೆ ಅಮಲು ಬರುವ ನೀರು ಕುಡಿಸಿ ಅತ್ಯಾಚಾರವೆಸಗಿದ ಚಾಲಕ

Shocking News: ದೇಶಾದ್ಯಂತ ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಪಶ್ಚಿಮ ಬಂಗಾಳದಲ್ಲಿ ನಡೆದಿರುವ ವೈದ್ಯೆ ಮೇಲಿನ ಅತ್ಯಾಚಾರ ಪ್ರಕರಣವನ್ನು ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ನಡೆಯುತ್ತಿವೆ. ಇದರ ಬೆನ್ನಲ್ಲೇ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಮತ್ತೊಂದು ಭಯಾನಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

Crime News: ಆಟೋ ಹತ್ತಿದ ನರ್ಸಿಂಗ್ ವಿದ್ಯಾರ್ಥಿನಿಗೆ ಅಮಲು ಬರುವ ನೀರು ಕುಡಿಸಿ ಅತ್ಯಾಚಾರವೆಸಗಿದ ಚಾಲಕ
ಸಾಂದರ್ಭಿಕ ಚಿತ್ರ
Follow us
|

Updated on: Aug 28, 2024 | 4:02 PM

ಮುಂಬೈ: ಪಶ್ಚಿಮ ಬಂಗಾಳದ ಕೊಲ್ಕತ್ತಾದ ಭಯಾನಕತೆಯ ಬಗ್ಗೆ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ, ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಲ್ಲಿ 19 ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ಕಾಲೇಜಿನಿಂದ ಮನೆಗೆ ಹೋಗುತ್ತಿದ್ದಾಗ ಆಕೆಗೆ ಡ್ರಗ್ಸ್ ಬೆರೆಸಿದ ನೀರು ಕುಡಿಸಿ ಅತ್ಯಾಚಾರ ನಡೆಸಲಾಗಿದೆ. ಆ ಯುವತಿ ಕಾಲೇಜಿನಿಂದ ಮನೆಗೆ ಆಟೋ ರಿಕ್ಷಾದಲ್ಲಿ ಹಿಂತಿರುಗುತ್ತಿದ್ದಾಗ ಬಾಯಾರಿಕೆಯಾಗಿ ಆಟೋ ಚಾಲಕನ ಬಳಿ ನೀರು ಕೇಳಿದ್ದಾಳೆ. ಆಗ ಆತ ಆಕೆಗೆ ಡ್ರಗ್ಸ್ ಬೆರೆಸಿದ ನೀರು ನೀಡಿದ್ದಾನೆ. ಅದನ್ನು ಕುಡಿದ ಆಕೆ ಸ್ವಲ್ಪ ಹೊತ್ತಿನಲ್ಲೇ ಪ್ರಜ್ಞೆ ಕಳೆದುಕೊಂಡಿದ್ದಾಳೆ. ಬಳಿಕ ಅವನು ಅವಳನ್ನು ಏಕಾಂತ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ.

ಆ ಯುವತಿ ತನ್ನ ಕಾಲೇಜಿನಿಂದ ಮನೆಗೆ ತೆರಳಲು ಆಟೋವನ್ನು ಬುಕ್ ಮಾಡಿದಾಗ ಈ ಘಟನೆ ನಡೆದಿದೆ. ಪ್ರಯಾಣದ ವೇಳೆ ಚಾಲಕ ಆಕೆಯನ್ನು ಸಾಕಷ್ಟು ಜನರಿಲ್ಲದ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿ, ಆಕೆಯ ಮೇಲೆ ಹಲ್ಲೆ ನಡೆಸಿ ಆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಪ್ರಜ್ಞೆ ಬಂದ ನಂತರ ಸಂತ್ರಸ್ತೆ ತನ್ನ ಕುಟುಂಬ ಸದಸ್ಯರನ್ನು ಸಂಪರ್ಕಿಸಿದ್ದಾಳೆ.

ಇದನ್ನೂ ಓದಿ: Kolkata Murder: ಪಶ್ಚಿಮ ಬಂಗಾಳದಲ್ಲಿ ಪ್ರಜಾಪ್ರಭುತ್ವದ ಕೊಲೆ; ಮಮತಾ ಬ್ಯಾನರ್ಜಿ ವಿರುದ್ಧ ಜೆಪಿ ನಡ್ಡಾ ಟೀಕೆ

ಆಗಸ್ಟ್ 26ರಂದು ಆ ಯುವತಿಯ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಈ ಘಟನೆಯು ರತ್ನಗಿರಿಯಲ್ಲಿ ವ್ಯಾಪಕವಾದ ಪ್ರತಿಭಟನೆಯನ್ನು ಉಂಟುಮಾಡಿತು. ಪ್ರತಿಭಟನಾಕಾರರು ರಸ್ತೆಮಾರ್ಗಗಳನ್ನು ತಡೆದು ನ್ಯಾಯಕ್ಕಾಗಿ ಒತ್ತಾಯಿಸಿದರು.

ಇದೀಗ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿ ಆಟೋ ಚಾಲಕನಿಗಾಗಿ ಶೋಧ ನಡೆಸುತ್ತಿದ್ದಾರೆ. ಸಂತ್ರಸ್ತೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರತ್ನಗಿರಿಯ ನರ್ಸಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 64 (1) ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಚಂಪಕ್ ಮೈದಾನದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಬಾಲಕಿ ಮನೆಗೆ ಹೋಗುತ್ತಿದ್ದ ಆಟೋರಿಕ್ಷಾವನ್ನು ತೋರಿಸುವ ಸಿಸಿಟಿವಿ ಫೂಟೇಜ್ ಕೂಡ ಹೊರಹೊಮ್ಮಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ