AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಅಣ್ಣನಿಗೆ ರಾಖಿ ಕಟ್ಟಲು ಹೋಗುತ್ತೇನೆ ಎಂದ ಪತ್ನಿಯ ಮೂಗು ಕತ್ತರಿಸಿದ ಗಂಡ

Crime News Today: ಉತ್ತರಪ್ರದೇಶದ ಹರ್ದೋಯ್‌ನಲ್ಲಿರುವ ತನ್ನ ಸಹೋದರನಿಗೆ ರಾಖಿ ಕಟ್ಟಲು ತನ್ನ ತಾಯಿಯ ಮನೆಗೆ ಹೋಗಬೇಕೆಂದು ಹಠ ಹಿಡಿದ ಹೆಂಡತಿಯ ಮೇಲೆ ಕೋಪಗೊಂಡ ಗಂಡ ಆಕೆಯ ಮೂಗನ್ನು ಕತ್ತರಿಸಿದ್ದಾನೆ. ಇದೀಗ ಆಕೆಯ ಗಂಡ ಜೈಲು ಸೇರಿದ್ದಾನೆ.

Shocking News: ಅಣ್ಣನಿಗೆ ರಾಖಿ ಕಟ್ಟಲು ಹೋಗುತ್ತೇನೆ ಎಂದ ಪತ್ನಿಯ ಮೂಗು ಕತ್ತರಿಸಿದ ಗಂಡ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Aug 19, 2024 | 10:04 PM

Share

ನೊಯ್ಡಾ: ಉತ್ತರ ಪ್ರದೇಶದ ಹರ್ದೋಯ್​ಯಲ್ಲಿ ತನ್ನ ಸಹೋದರನಿಗೆ ರಾಖಿ ಕಟ್ಟಲು ತನ್ನ ತಾಯಿಯ ಮನೆಗೆ ಹೋಗಬೇಕೆಂದು ಒತ್ತಾಯಿಸಿದ ನಂತರ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಮೂಗನ್ನು ಕತ್ತರಿಸಿದ್ದಾನೆ. ಈ ಘಟನೆಯ ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಅಲ್ಲಿಂದ ಲಕ್ನೋದ ಟ್ರಾಮಾ ಸೆಂಟರ್‌ಗೆ ವರ್ಗಾಯಿಸಲಾಯಿತು.

ಈ ಕುರಿತು ವಿಡಿಯೋ ಮಾಡಿರುವ ಆ ಮಹಿಳೆ ತನ್ನ ಮೇಲೆ ಗಂಡ ಮಾಡಿದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ತನ್ನ ಪತಿ ತನ್ನ ಮೂಗು ಕತ್ತರಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ತನಗೆ ಇನ್ನು ಬದುಕಲು ಇಷ್ಟವಿಲ್ಲ ಎಂದು ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದು. ತನ್ನ ಪತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಯಸುವುದಾಗಿಯೂ ಆಕೆ ಹೇಳಿದ್ದಾಳೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನ, ತಾನು ಸಾಯುವ ಮೊದಲು ತಮ್ಮನಿಗೆ ರಾಖಿ ಕಟ್ಟಿದ ಅಕ್ಕ

ವರದಿಗಳ ಪ್ರಕಾರ, ಬನಿಯಾನಿ ಪೂರ್ವದ ನಿವಾಸಿ ರಾಹುಲ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ ಅನಿತಾ ರಕ್ಷಾ ಬಂಧನದ ಸಂದರ್ಭದಲ್ಲಿ ಬೆಹಟಗೋಕುದಲ್ಲಿರುವ ತನ್ನ ತಾಯಿಯ ಮನೆಗೆ ಹೋಗುವಂತೆ ಕೇಳಿಕೊಂಡ ನಂತರ ಜಗಳವಾಡಿದ್ದಾನೆ. ಈ ವಿಷಯ ವಿಕೋಪಕ್ಕೆ ಹೋಗಿದ್ದು, ಕೋಪಗೊಂಡ ಆತ ತನ್ನ ಪತ್ನಿಯ ಮೂಗನ್ನೇ ಕತ್ತರಿಸಿದ್ದಾನೆ.

ಇದನ್ನೂ ಓದಿ: Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಆ ಮಹಿಳೆಯ ಕಿರುಚಾಟವನ್ನು ಕೇಳಿ, ಅವಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಆಕೆಯ ಅತ್ತೆಯು ಗಂಭೀರ ಸ್ಥಿತಿಯಲ್ಲಿದ್ದ 25 ವರ್ಷದ ಅನಿತಾ ಅವರನ್ನು ಹಾರ್ಡೋಯ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರು. ಅಲ್ಲಿಂದ ಅವರನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ಗಾಯಗೊಂಡ ಮಹಿಳೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಹರ್ದೋಯ್ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಈ ವಿಷಯವು ತನಿಖೆಯಲ್ಲಿದೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ