ತರಕಾರಿ ಜೊತೆ ಹೃದಯ ಬೇಯಿಸಿ, ಅಡುಗೆ ಮಾಡಿ ಬಡಿಸಿದ ಕೊಲೆಗಾರ!

ಕೆಲವೊಮ್ಮೆ ಮನುಷ್ಯರು ಮಾನವೀಯತೆಯನ್ನೇ ಮರೆತುಬಿಡುತ್ತಾರೆ. ಇತ್ತೀಚೆಗೆ ಒಬ್ಬರ ಜೀವನ ತೆಗೆಯುವುದು ತೀರಾ ಸಾಮಾನ್ಯ ಎನಿಸಿಬಿಟ್ಟಿದೆ. ಅಮೆರಿಕಾದಲ್ಲಿ ಕೊಲೆಯೊಂದನ್ನು ಮಾಡಿದ ವ್ಯಕ್ತಿಯೊಬ್ಬ ಆ ಮೃತದೇಹವನ್ನು ಕತ್ತರಿಸಿ, ಆ ದೇಹದ ಹೃದಯವನ್ನು ಬೇಯಿಸಿ ಅಡುಗೆ ತಯಾರಿಸಿ ಬಡಿಸಿರುವ ಭಯಾನಕ ಘಟನೆ ನಡೆದಿದೆ.

ತರಕಾರಿ ಜೊತೆ ಹೃದಯ ಬೇಯಿಸಿ, ಅಡುಗೆ ಮಾಡಿ ಬಡಿಸಿದ ಕೊಲೆಗಾರ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Nov 29, 2023 | 1:36 PM

ವಾಷಿಂಗ್ಟನ್: ಕೊಲೆ ಮಾಡಿದ ನಂತರ ಆ ದೇಹವನ್ನು ಬಿಸಾಡುವ ಮೊದಲು ಆ ಶವವನ್ನು ಕತ್ತರಿಸಿ, ಅದರಲ್ಲಿರುವ ಹೃದಯವನ್ನು ಹೊರಗೆ ತೆಗೆದು, ಅದನ್ನು ಆಲೂಗಡ್ಡೆಯ ಜೊತೆ ಬೇಯಿಸಿ, ಮನೆಯವರಿಗೆ ಸಾಂಬಾರ್ ಮಾಡಿ ಬಡಿಸಿರುವ ವಿಚಿತ್ರ ಮತ್ತು ಭಯಾನಕ ಘಟನೆಯೊಂದು ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಒಕ್ಲಹೋಮ ರಾಜ್ಯದಲ್ಲಿ ತ್ರಿವಳಿ ಕೊಲೆಯ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಈ ಘಟನೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

ಕೊಲೆ ಮಾಡಿದ ನಂತರ ಮೃತದೇಹದ ಹೃದಯವನ್ನು ಆಕೆಯ ದೇಹದಿಂದ ಕತ್ತರಿಸಿ, ಆಲೂಗಡ್ಡೆಯೊಂದಿಗೆ ಬೇಯಿಸಿ ಅಡುಗೆ ಮಾಡಿ ಬಡಿಸಿದ್ದಾನೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ. ಆರೋಪಿಯನ್ನು ಲಾರೆನ್ಸ್ ಪಾಲ್ ಆಂಡರ್ಸನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ; ಅಪಘಾತವೆಂದು ಬಿಂಬಿಸಲು ಮಾಡಿದ್ದರೂ ಖತರ್ನಾಕ್​ ಪ್ಲ್ಯಾನ್​

ಒಕ್ಲಹೋಮದ ಸ್ಥಳೀಯ ಮಾಧ್ಯಮಗಳು ಮಾಡಿರುವ ವರದಿ ಪ್ರಕಾರ, ಕೊಲೆ ಮಾಡಿದ ಬಳಿಕ ಆತ ಶವದಿಂದ ಕೆಲವು ಅಂಗಗಳನ್ನು ಹೊರಗೆ ತೆಗೆದಿದ್ದಾನೆ. ಅದರಲ್ಲಿ ಹೃದಯವನ್ನು ಕತ್ತರಿಸಿ, ಆಲೂಗಡ್ಡೆಯೊಂದಿಗೆ ಬೇಯಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆತ ಮೃತ ಮಹಿಳೆಯ ಹೃದಯವನ್ನು ತನ್ನ ಚಿಕ್ಕಪ್ಪನ ಮನೆಗೆ ತಂದು ಅಲ್ಲಿ ಅದನ್ನು ಆಲೂಗಡ್ಡೆಯೊಂದಿಗೆ ಬೇಯಿಸಿ ಚಿಕ್ಕಪ್ಪ ಮತ್ತು ಅವರ ಹೆಂಡತಿಗೆ ಬಡಿಸಿದ್ದಾನೆ ಎಂದು ತನಿಖಾಧಿಕಾರಿಗಳು ಚಿಕಾಶಾದ ಗ್ರೇಡಿ ಕೌಂಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಾದ ಬಳಿಕ ಆಂಡರ್ಸನ್ ಆ ಮನೆಯಲ್ಲಿದ್ದ ಚಿಕ್ಕಪ್ಪ ಮತ್ತು ಅವರ ನಾಲ್ಕು ವರ್ಷದ ಮೊಮ್ಮಗಳನ್ನು ಕೂಡ ಕೊಂದಿದ್ದಾನೆ. ತನ್ನ ಚಿಕ್ಕಪ್ಪನಿಗೆ ಚಾಕುವಿನಿಂದ ತಿವಿದು ತೀವ್ರವಾಗಿ ಗಾಯಗೊಳಿಸಿದ್ದಾನೆ.

ಇದನ್ನೂ ಓದಿ: ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ

ಈ ಮೊದಲು ಕೂಡ ಕೊಲೆ ಮಾಡಿರುವ ಆರೋಪ ಹೊತ್ತಿರುವ ಆಂಡರ್ಸನ್ ಹಲವು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ. ಇತ್ತೀಚೆಗೆ ಆತ ಉತ್ತಮ ನಡವಳಿಕೆಯ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಕೆಲವೇ ವಾರಗಳ ನಂತರ ಈ ಅಪರಾಧ ಸಂಭವಿಸಿದೆ. 2017ರಲ್ಲಿ ಮಾದಕವಸ್ತು ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ