Shocking News: ಗಂಡನ ಸಾವಿನ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ!

|

Updated on: Feb 01, 2023 | 5:35 PM

ಜನವರಿ 30ರಂದು ನಾಸಿಕ್ ನಗರದಿಂದ 65 ಕಿ.ಮೀ ದೂರದಲ್ಲಿರುವ ಚಂದವಾಡ ತಾಲೂಕಿನ ಶಿವರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

Shocking News: ಗಂಡನ ಸಾವಿನ ಬಗ್ಗೆ ಪ್ರಶ್ನಿಸಿದ ಮಹಿಳೆಗೆ ಥಳಿಸಿ, ಚಪ್ಪಲಿ ಹಾರ ಹಾಕಿ ಮೆರವಣಿಗೆ!
ಸಾಂದರ್ಭಿಕ ಚಿತ್ರ
Follow us on

ಮುಂಬೈ: ತನ್ನ ಗಂಡನ ಸಾವಿನ ಬಗ್ಗೆ ವಿಚಾರಿಸಿದ ವಿಧವೆಯೊಬ್ಬಳನ್ನು ಥಳಿಸಿ, ಆಕೆಯ ಮುಖಕ್ಕೆ ಮಸಿ ಬಳಿದು, ಚಪ್ಪಲಿ ಹಾರ ಹಾಕಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಅಮಾನವೀಯ ಘಟನೆಯೊಂದು ಮಹಾರಾಷ್ಟ್ರದ (Maharashtra) ನಾಸಿಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಆ ಮಹಿಳೆಯ ಗಂಡ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರಿಂದ ಆಕೆ ಆತನ ಸಾವಿನ ಬಗ್ಗೆ ಪ್ರಶ್ನೆ ಎತ್ತಿದ್ದಳು.

ಇದರಿಂದ ಆಕೆಯ ಬಾಯಿಯನ್ನು ಮುಚ್ಚಿಸಲು ಆಕೆಯನ್ನು ಥಳಿಸಿ, ಚಪ್ಪಲಿ ಹಾರ ಹಾಕಿ, ಮಸಿ ಬಳಿದು ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಗಿದೆ. ಜನವರಿ 30ರಂದು ನಾಸಿಕ್ ನಗರದಿಂದ 65 ಕಿ.ಮೀ ದೂರದಲ್ಲಿರುವ ಚಂದವಾಡ ತಾಲೂಕಿನ ಶಿವರೆ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಆ ಮಹಿಳೆ ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಳು. ಇದಾದ ನಂತರ ಆಕೆಯ ಪತಿ ಅವಳನ್ನು ತನ್ನ ಪೋಷಕರ ಮನೆಗೆ ಡ್ರಾಪ್ ಮಾಡಿದ್ದರು. ತಮ್ಮ ಹೆಣ್ಣುಮಕ್ಕಳೊಂದಿಗೆ 2 ಬಾರಿ ಆತ ತನ್ನ ಹೆಂಡತಿಯನ್ನು ಭೇಟಿಯಾಗಲು ಬಂದಿದ್ದರು. ಆದರೆ, ಬಳಿಕ ಆಕೆ ತನ್ನ ತಂದೆ-ತಾಯಿಯ ಮನೆಯಲ್ಲಿದ್ದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಆಕೆಯ ಅತ್ತೆಯ ಮನೆಯವರು ತಿಳಿಸಿದ್ದರು. ತನ್ನ ಗಂಡ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಆಕೆಗೆ ಅನುಮಾನ ಮೂಡಿಸಿತ್ತು.

ಈ ಬಗ್ಗೆ ತನ್ನ ಅನುಮಾನ ಹೊರಹಾಕಿದ್ದರಿಂದ ಆ ಮಹಿಳೆಯ ಅತ್ತಿಗೆ ಇತರೆ ಮಹಿಳೆಯರೊಂದಿಗೆ ಸೇರಿ ಆಕೆಗೆ ಅವಮಾನ ಮಾಡಿ, ಹಲ್ಲೆ ನಡೆಸಿದ್ದಾರೆ. ವಿಷಯ ತಿಳಿದ ಬಳಿಕ ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿ ಆಕೆಯನ್ನು ರಕ್ಷಿಸಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ