AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ

Crime News: ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾಳಿ ದೇವಿಯ ಮೂರ್ತಿಯ ಪಾದದ ಮೇಲೆ ತಲೆ ಇಟ್ಟ ರೀತಿಯನ್ನು ನೋಡಿದರೆ ಇದು ನರಬಲಿ ಇರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.

Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ
ಕಾಳಿ ಮಾತೆಯ ವಿಗ್ರಹದ ಬಳಿ ತಲೆ ಪತ್ತೆ
TV9 Web
| Edited By: |

Updated on: Jan 11, 2022 | 1:48 PM

Share

ಹೈದರಾಬಾದ್: ತೆಲಂಗಾಣದ ರಸ್ತೆ ಬದಿಯ ಪೂಜಾ ಸ್ಥಳದಲ್ಲಿ ಕಾಳಿ ಮಾತೆಯ ವಿಗ್ರಹದ ಪಾದದ ಬುಡದಲ್ಲಿ ವ್ಯಕ್ತಿಯ ಕತ್ತರಿಸಿದ ತಲೆ ಪತ್ತೆಯಾಗಿದ್ದು, ಆ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಸ್ತೆ ಬದಿಯಲ್ಲಿ ಕತ್ತರಿಸಿದ ರುಂಡ ಇಟ್ಟಿರುವ ಆಘಾತಕಾರಿ ಘಟನೆಯಿಂದ ಸುತ್ತಮುತ್ತಲಿನ ಜನರು ಶಾಕ್ ಆಗಿದ್ದು, ಆ ಕೊಲೆಯಾದ ವ್ಯಕ್ತಿ ಯಾರೆಂದು ಪತ್ತೆಹಚ್ಚಲು ಹಾಗೂ ಕೊಲೆಗಾರರನ್ನು ಹುಡುಕಲು ಪೊಲೀಸರು 8 ತಂಡಗಳನ್ನು ರಚಿಸಿದ್ದಾರೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾಳಿ ದೇವಿಯ ಮೂರ್ತಿಯ ಪಾದದ ಮೇಲೆ ತಲೆ ಇಟ್ಟ ರೀತಿಯನ್ನು ನೋಡಿದರೆ ಇದು ನರಬಲಿ ಇರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ಇದು ಕೊಲೆಯೋ ಅಥವಾ ನರಬಲಿಯೋ ಎಂಬುದು ತನಿಖೆಯ ಬಳಿಕ ಖಚಿತವಾಗಲಿದೆ.

ಸುಮಾರು 30ರ ಆಸುಪಾಸಿನ ವ್ಯಕ್ತಿಯನ್ನು ಬೇರೆಡೆ ಹತ್ಯೆಗೈದು ಕಾಳಿ ಮಾತೆಯ ಪಾದದಡಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಆತನ ದೇಹವನ್ನು ಬೇರೆಡೆ ತೆಗೆದುಕೊಂಡು ಹೋಗಲಾಗಿರುವ ಅನುಮಾನ ವ್ಯಕ್ತವಾಗಿದೆ ಎಂದು ದೇವರಕೊಂಡದ ಉಪ ಪೊಲೀಸ್ ವರಿಷ್ಠಾಧಿಕಾರಿ ಆನಂದರೆಡ್ಡಿ ತಿಳಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮೃತಪಟ್ಟ ವ್ಯಕ್ತಿಯ ಶವವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ ಮತ್ತು ದೇಹದ ಉಳಿದ ಅರ್ಧ ಭಾಗವನ್ನು ಪತ್ತೆಹಚ್ಚಲು ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಳಿ ದೇವಿಯ ಪ್ರತಿಮೆಯ ಪಾದದಲ್ಲಿ ತಲೆ ಕತ್ತರಿಸಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸರು ಕೂಡ ವ್ಯಕ್ತಿಯ ಗುರುತನ್ನು ಖಚಿತಪಡಿಸಲು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಸ್ತೆ ಬದಿಯ ಕಾಳಿ ಮಾತೆಯ ಪೂಜಾ ಸ್ಥಳದಲ್ಲಿನ ಅರ್ಚಕರು ತಾವು ಪೂಜಿಸುವ ದೇವಿಯ ವಿಗ್ರಹದ ಪಾದದಲ್ಲಿ ಕತ್ತರಿಸಿದ ತಲೆಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು