ತಾಯಿ ಎದುರಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಆ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ತಾಯಿ ಎದುರಲ್ಲೇ ಅಪ್ರಾಪ್ತ ಬಾಲಕಿ ಮೇಲೆ ಐವರು ಕಾಮುಕರಿಂದ ಸಾಮೂಹಿಕ ಅತ್ಯಾಚಾರ
ಸಾಂದರ್ಭಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Oct 11, 2022 | 1:55 PM

ದಿಯೋಘರ್: ತಾಯಿಯ ಮುಂದೆಯೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ (Rape) ನಡೆಸಿರುವ ಅಮಾನವೀಯ ಘಟನೆ ಜಾರ್ಖಂಡ್‌ನ (Jharkhand Crime News) ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ತಾಯಿಯ ಎದುರೇ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಇಬ್ಬರನ್ನು ಬಂಧಿಸಲಾಗಿದ್ದು, ದಿಯೋಘರ್ ಪೊಲೀಸರು ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ದುಮ್ಕಾ ಜಿಲ್ಲೆಯ ನಿವಾಸಿಗಳಾದ ಬಾಲಕಿ ಮತ್ತು ಆಕೆಯ ತಾಯಿ ಭಾನುವಾರ ದಿಯೋಘರ್‌ನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗಿದ್ದರು. ಆ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ಹಿಂದಿರುಗುತ್ತಿದ್ದಾಗ ಮಧುಪುರ್ ಬಳಿ ಅಪರಿಚಿತರು ಅಡ್ಡಗಟ್ಟಿದ್ದರು.

ಆ ವೇಳೆ ಆ ಐವರು ಅಪರಿಚಿತರು ಆ ಮಹಿಳೆಯ ಎದುರಲ್ಲೇ ಅವರ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ತಾಯಿ ಸೋಮವಾರ ಪೊಲೀಸರಿಗೆ ದೂರು ನೀಡಿದ್ದು, ಈ ಪ್ರಕರಣದ 5 ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರ: ನಾಲ್ವರು ಅಪರಿಚಿತರ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲು

ದೂರಿನ ಪ್ರಕಾರ, ಎರಡು ಬೈಕ್​ಗಳಲ್ಲಿ ಬಂದ 5 ಜನರು ತಾಯಿ- ಮಗಳ ದಾರಿ ತಪ್ಪಿಸಿದರು. ನಂತರ ಅವರ ಮಗಳನ್ನು ಬಲವಂತವಾಗಿ ಪಕ್ಕಕ್ಕೆ ಕರೆದೊಯ್ದರು. ಅವರನ್ನು ಆ ಬಾಲಕಿಯ ತಾಯಿ ತಡೆಯಲು ಮುಂದಾದಾಗ ಆಕೆಯನ್ನು ಥಳಿಸಿ ನಂತರ ಆಕೆಯ ಎದುರೇ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ದಿಯೋಘರ್ ಪೊಲೀಸ್ ಅಧೀಕ್ಷಕ (ಎಸ್‌ಪಿ) ಸುಭಾಷ್ ಚಂದ್ರ ಜಾಟ್ ಈ ಬಗ್ಗೆ ಮಾಹಿತಿ ನೀಡಿದ್ದು, ಅತ್ಯಾಚಾರಕ್ಕೊಳಗಾದ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರ ವರದಿ ಸಿಕ್ಕ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಪೊಲೀಸರು ಆರೋಪಿಗಳನ್ನು ಗುರುತಿಸಿದ್ದು, ಉಳಿದ ಮೂವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು