ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ಬಾಲಕಿಯ ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಕಾರಿನಲ್ಲಿ ಬಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆ ಕಾರು ನಿಲ್ಲಿಸಿದ್ದ ಜಾಗದಲ್ಲಿ ದುರ್ವಾಸನೆ ಬರುತ್ತಿದ್ದುದರಿಂದ ಸ್ಥಳೀಯರಿಗೆ ಅನುಮಾನ ಉಂಟಾಗಿತ್ತು.

ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ
ಅಸಾರಾಂ ಬಾಪು ಆಶ್ರಮ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Apr 08, 2022 | 8:04 PM

ನವದೆಹಲಿ: ಉತ್ತರ ಪ್ರದೇಶದ ಗೋಂಡಾದಲ್ಲಿರುವ ಸ್ವಯಂಘೋಷಿತ ದೇವಮಾನವ ಮತ್ತು ಅತ್ಯಾಚಾರ ಆರೋಪಿ ಅಸಾರಾಂ ಬಾಪು (Asaram Bapu) ಅವರ ಆಶ್ರಮದೊಳಗೆ ನಿಲ್ಲಿಸಲಾಗಿದ್ದ ಆಲ್ಟೋ ಕಾರಿನಲ್ಲಿ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸರು ಬಾಲಕಿಯ ಶವವನ್ನು (Missing Girl Deadbody) ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾಗೇ, ಗೊಂಡಾದ ದೇಹತ್ ಕೊಟ್ವಾಲಿ ಪ್ರದೇಶದ ಅಡಿಯಲ್ಲಿ ಬರುವ ಬಹ್ರೈಚ್ ರಸ್ತೆಯಲ್ಲಿರುವ ಆಶ್ರಮವನ್ನು ಸೀಲ್ ಮಾಡಿದ್ದಾರೆ.

ಕೆಲವು ದಿನಗಳಿಂದ ನಿಂತಿದ್ದ ಕಾರಿನಲ್ಲಿ ಬಾಲಕಿಯ ಮೃತದೇಹ ಇರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಶ್ರಮದ ವ್ಯಕ್ತಿಯೊಬ್ಬನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಫೋರೆನ್ಸಿಕ್ ತಂಡದ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡುತ್ತಿದ್ದಾರೆ.

ಬಾಲಕಿಯ ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಕಾರಿನಲ್ಲಿ ಬಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆ ಕಾರು ನಿಲ್ಲಿಸಿದ್ದ ಜಾಗದಲ್ಲಿ ದುರ್ವಾಸನೆ ಬರುತ್ತಿದ್ದುದರಿಂದ ಸ್ಥಳೀಯರಿಗೆ ಅನುಮಾನ ಉಂಟಾಗಿತ್ತು. ಆ ಕಾರಿಗೆ ಮುಚ್ಚಲಾಗಿದ್ದ ಕವರ್ ಸರಿಸಿ ನೋಡಿದಾಗ ಕಾರಿನೊಳಗೆ ಶವ ಇರುವುದನ್ನು ಕಾವಲುಗಾರ ನೋಡಿದ್ದ. ಹೀಗಾಗಿ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಈ ಘಟನೆಯು ಆಶ್ರಮದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿವಾದವನ್ನು ಹುಟ್ಟುಹಾಕಿದೆ. ಈ ಬಗ್ಗೆ ಜೋಧ್‌ಪುರದ ವಿಶೇಷ ನ್ಯಾಯಾಲಯವು ಅತ್ಯಾಚಾರದ ಆರೋಪದ ನಂತರ 2018ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಸಾರಾಂ ಬಾಪು ಅವರನ್ನು ಮತ್ತೊಮ್ಮೆ ಬೆಳಕಿಗೆ ತಂದಿತು. ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು 2013ರಲ್ಲಿ ಜೋಧ್‌ಪುರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧ ಎದುರಿಸುತ್ತಿದ್ದಾರೆ.

ಮಂಗಳವಾರ ತನ್ನ ಮಗಳು ಕಣ್ಮರೆಯಾಗಿದ್ದಾಳೆ ಎಂದು ಹುಡುಗಿಯ ತಾಯಿ ಹೇಳಿದ್ದಾರೆ. ನಗರದ ಎಲ್ಲಾ ಸ್ಥಳಗಳಲ್ಲಿ ಅವಳನ್ನು ಹುಡುಕಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಬಾಲಕಿಯ ಶವವನ್ನು ಸ್ವಾಧೀನಪಡಿಸಿಕೊಂಡ ನಂತರ ಪೊಲೀಸರು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು

Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್