Shocking News: ಬುರ್ಖಾ ಧರಿಸಲಿಲ್ಲ ಎಂದು ಹಿಂದೂ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

ಮದುವೆಯ ನಂತರ ರೂಪಾಲಿ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಬೇಕೆಂದು ಮತ್ತು ಬುರ್ಖಾವನ್ನು ಧರಿಸಬೇಕೆಂದು ಇಕ್ಬಾಲ್ ಮೊಹಮ್ಮದ್ ಶೇಖ್ ಅವರ ಕುಟುಂಬ ಒತ್ತಡ ಹೇರಿತ್ತು. ಆದರೆ, ಆಕೆ ಇಸ್ಲಾಂ ಧರ್ಮವನ್ನು ಅನುಸರಿಸಲು ಸಿದ್ಧಳಿರಲಿಲ್ಲ.

Shocking News: ಬುರ್ಖಾ ಧರಿಸಲಿಲ್ಲ ಎಂದು ಹಿಂದೂ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Sep 28, 2022 | 2:20 PM

ಮುಂಬೈ: ಮಹಾರಾಷ್ಟ್ರದ ಮುಂಬೈ (Mumbai Crime News) ನಿವಾಸಿ ಇಕ್ಬಾಲ್ ಮೊಹಮ್ಮದ್ ಶೇಖ್ ಎಂಬಾತನ ಹಿಂದೂ ಪತ್ನಿ ಬುರ್ಖಾ ಧರಿಸಲು ನಿರಾಕರಿಸಿದ್ದರಿಂದ ಆತ ಆಕೆಯನ್ನು ಕೊಲೆ (Murder) ಮಾಡಿರುವ ಘಟನೆ ತಿಲಕ್ ನಗರ ಪ್ರದೇಶದಲ್ಲಿ ನಡೆದಿದೆ. ಬುರ್ಖಾ ಧರಿಸಲು ನಿರಾಕರಿಸಿದ್ದಕ್ಕೆ ಮತ್ತು ಇಸ್ಲಾಮಿಕ್ ಆಚರಣೆಗಳನ್ನು ಅನುಸರಿಸಲು ಒಪ್ಪದ ಹಿನ್ನೆಲೆಯಲ್ಲಿ ತನ್ನ ಹಿಂದೂ ಪತ್ನಿಯನ್ನು ಹತ್ಯೆಗೈದ ಆರೋಪದಲ್ಲಿ ಇಕ್ಬಾಲ್ ಮೊಹಮ್ಮದ್ ಶೇಖ್​ನನ್ನು ಬಂಧಿಸಲಾಗಿದೆ. ಮೃತ ಮಹಿಳೆಯ ಕುಟುಂಬದವರು ನೀಡಿದ ಮಾಹಿತಿಯ ಮೇರೆಗೆ ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಮಹಿಳೆ ರೂಪಾಲಿ ಮತ್ತು ಆರೋಪಿ ಇಕ್ಬಾಲ್ ಮೊಹಮ್ಮದ್ ಶೇಖ್ ಮದುವೆಯಾಗಿ 3 ವರ್ಷವಾಗಿತ್ತು. ಅವರ ಮದುವೆಯ ನಂತರ ರೂಪಾಲಿ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಬೇಕೆಂದು ಮತ್ತು ಬುರ್ಖಾವನ್ನು ಧರಿಸಬೇಕೆಂದು ಇಕ್ಬಾಲ್ ಮೊಹಮ್ಮದ್ ಶೇಖ್ ಅವರ ಕುಟುಂಬ ಒತ್ತಡ ಹೇರಿತ್ತು. ಆದರೆ, ಆಕೆ ಇಸ್ಲಾಂ ಧರ್ಮವನ್ನು ಅನುಸರಿಸಲು ಸಿದ್ಧಳಿರಲಿಲ್ಲ. ಹಿಂದೂ ಧರ್ಮದ ಆಚರಣೆಗಳನ್ನೇ ಮುಂದುವರಿಸಲು ಆಕೆ ನಿರ್ಧರಿಸಿದ್ದಳು. ಇದಕ್ಕೆ ಅವಳ ಗಂಡನ ಮನೆಯಲ್ಲಿ ಸದಾ ಜಗಳವಾಗುತ್ತಿತ್ತು.

ಇದನ್ನೂ ಓದಿ: Big News: ಮುಸ್ಲಿಂ ದಂಪತಿಯಿಂದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ

22 ವರ್ಷದ ಯುವಕ ಇಕ್ಬಾಲ್ ಮೊಹಮ್ಮದ್ ಶೇಖ್ ಇದರಿಂದ ಹೆಂಡತಿಯಿಂದ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದನು. ಸೆಪ್ಟೆಂಬರ್ 26ರ ಸೋಮವಾರ ಸಂಜೆ ಆತ ತನ್ನ ಹೆಂಡತಿಯನ್ನು ಭೇಟಿಯಾದಾಗ ಕೋಪದಿಂದ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸೋಮವಾರ ಇಕ್ಬಾಲ್ ಶೇಖ್​ನನ್ನು ಭೇಟಿಯಾಗಿದ್ದ ರೂಪಾಲಿ ತನಗೆ ವಿಚ್ಛೇದನ ನೀಡಲು ಒತ್ತಾಯಿಸಿದ್ದಳು. ಆದರೆ ಅವರಿಗೆ ಮಗು ಇದ್ದುದರಿಂದ ಅವನು ವಿಚ್ಛೇದನಕ್ಕೆ ಒಪ್ಪಿರಲಿಲ್ಲ.

ತನ್ನ ಮಗನನ್ನು ತನ್ನ ಜೊತೆಯೇ ಕಳುಹಿಸಬೇಕೆಂದು ಆತ ಹೆಂಡತಿಯ ಹತ್ತಿರ ಜಗಳವಾಡಿದ್ದ. ಅದಕ್ಕೆ ರೂಪಾಲಿ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಇಕ್ಬಾಲ್ ಶೇಖ್ ಚಾಕುವಿನಿಂದ ಆಕೆಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೆಪ್ಟೆಂಬರ್ 26ರಂದು ರಾತ್ರಿ 10 ಗಂಟೆಗೆ ಇಕ್ಬಾಲ್ ಮೊಹಮ್ಮದ್ ಶೇಖ್ ಎಂಬ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕತ್ತು ಸೀಳಿ, ಚಾಕುವಿನಿಂದ ಕೈಗಳಿಗೆ ಚುಚ್ಚಿ ಕೊಂದಿದ್ದಾನೆ. ದೂರುದಾರರ ಪ್ರಕಾರ, ಆರೋಪಿ ಮತ್ತು ಆತನ ಕುಟುಂಬ ಸದಸ್ಯರು ಇಸ್ಲಾಮಿಕ್ ಸಂಪ್ರದಾಯಗಳನ್ನು ಅನುಸರಿಸುವಂತೆ ಮತ್ತು ಮುಸ್ಲಿಂ ಮಹಿಳೆಯರು ಧರಿಸುವ ಬಟ್ಟೆಗಳನ್ನು ಧರಿಸುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ, ಆ ಮಹಿಳೆ ಇದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹ ಶುರುವಾಗಿತ್ತು. ಅದೇ ಕಾರಣಕ್ಕೆ ಕೊಲೆಯಾಗಿದೆ ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಲಾಸ್ ರಾಥೋಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಶಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದ ಅಮೆರಿಕದ ಮುಸ್ಲಿಂ ದಂಪತಿ

ಇಕ್ಬಾಲ್ ಶೇಖ್ ಮತ್ತು ಆತನ ಕುಟುಂಬದವರು ಮದುವೆಯಾದ ಮೊದಲ ದಿನದಿಂದಲೂ ತಮ್ಮ ಮಗಳಿಗೆ ಇಸ್ಲಾಂ ಸಂಪ್ರದಾಯಗಳನ್ನು ಅನುಸರಿಸುವಂತೆ ಮತ್ತು ಬುರ್ಖಾ ಧರಿಸುವಂತೆ ಒತ್ತಡ ಹೇರುತ್ತಿದ್ದರು ಎಂದು ರೂಪಾಲಿಯ ಕುಟುಂಬಸ್ಥರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ರೂಪಾಲಿ ಅದಕ್ಕೆ ಒಪ್ಪಿರದ ಕಾರಣ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಕಳೆದ ಕೆಲ ತಿಂಗಳಿಂದ ರೂಪಾಲಿ ಕೂಡ ಮನೆ ಬಿಟ್ಟು ಬೇರೆ ಕಡೆ ವಾಸವಾಗಿದ್ದಳು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ