Shocking News: ವರದಕ್ಷಿಣೆ ನೀಡದ ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ; ಯುಟ್ಯೂಬ್​ನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ ಗಂಡ

Gang Rape: ಮಹಿಳೆಯ ಪತಿ ಇಬ್ಬರು ಗೆಳೆಯರನ್ನು ಮನೆಗೆ ಕರೆದು ಅವರೊಂದಿಗೆ ಮಲಗಲು ತನ್ನ ಹೆಂಡತಿಗೆ ಒತ್ತಾಯಿಸಿದ್ದಾನೆ. ಅದಕ್ಕೆ ಆಕೆ ಒಪ್ಪದಿದ್ದಾಗ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಅದನ್ನು ವಿಡಿಯೋ ಮಾಡಿಕೊಂಡು ಯುಟ್ಯೂಬ್​ನಲ್ಲಿ ಅಪ್​ಲೋಡ್ ಮಾಡಿದ್ದಾರೆ.

Shocking News: ವರದಕ್ಷಿಣೆ ನೀಡದ ಹೆಂಡತಿ ಮೇಲೆ ಸಾಮೂಹಿಕ ಅತ್ಯಾಚಾರ; ಯುಟ್ಯೂಬ್​ನಲ್ಲಿ ವಿಡಿಯೋ ಅಪ್​ಲೋಡ್ ಮಾಡಿದ ಗಂಡ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 30, 2022 | 6:03 PM

ಭರತ್‌ಪುರ: ರಾಜಸ್ಥಾನದ ಭರತ್‌ಪುರದಲ್ಲಿ 1.5 ಲಕ್ಷ ರೂ. ವರದಕ್ಷಿಣೆ (Dowry) ನೀಡಲು ಕುಟುಂಬ ವಿಫಲವಾದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಸ್ನೇಹಿತರ ಜೊತೆ ಸೇರಿ ತನ್ನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ (Gang Rape). ಅಲ್ಲದೆ, ಹೆಂಡತಿಯ ಮೇಲೆ ಅತ್ಯಾಚಾರ ನಡೆಸಿರುವುದನ್ನು ಕ್ಯಾಮೆರಾದಲ್ಲಿ ರೆಕಾರ್ಡ್​ ಮಾಡಿಕೊಂಡು, ಅದನ್ನು ಯೂಟ್ಯೂಬ್​ನಲ್ಲಿ ಅಪ್​ಲೋಡ್ ಮಾಡಿದ್ದಾನೆ. ಗಂಡನ ಈ ವರ್ತನೆಯಿಂದ ಆಘಾತಕ್ಕೊಳಗಾದ ಮಹಿಳೆ ತನ್ನ ಪತಿ ಮತ್ತು ಇತರ ಇಬ್ಬರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದಾಗಿ ಆಕೆಯ ಮೇಲೆ ನಡೆದಿರುವ ಕೃತ್ಯ ಬೆಳಕಿಗೆ ಬಂದಿದೆ.

ಸಂತ್ರಸ್ತೆ ನೀಡಿದ ದೂರಿನ ಪ್ರಕಾರ, 2019ರಲ್ಲಿ ಆಕೆಗೆ ಮದುವೆಯಾಗಿತ್ತು. ಮದುವೆ ಆದಾಗಿನಿಂದಲೂ ಆಕೆಯ ಅತ್ತೆ- ಮಾವ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ನಂತರ ಆಕೆ ತನ್ನ ಹೆತ್ತವರ ಮನೆಗೆ ಮರಳಿದ್ದಳು. ಆದರೆ, ಪತಿ ಆಕೆಯನ್ನು ತನ್ನ ಮನೆಗೆ ವಾಪಾಸ್ ಬರುವಂತೆ ಮನವೊಲಿಸಿದ. ಇತ್ತೀಚೆಗೆ, ಆಕೆಯ ಪತಿ ಇಬ್ಬರು ಗೆಳೆಯರನ್ನು ಮನೆಗೆ ಕರೆದು ಅವರೊಂದಿಗೆ ಮಲಗಲು ತನ್ನ ಹೆಂಡತಿಗೆ ಒತ್ತಾಯಿಸಿದ್ದಾನೆ. ಅದಕ್ಕೆ ಆಕೆ ಒಪ್ಪದಿದ್ದಾಗ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆಯನ್ನು ತನ್ನ ಸ್ಮಾರ್ಟ್‌ಫೋನ್‌ನಲ್ಲಿ ಚಿತ್ರೀಕರಿಸಿ, ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದಾನೆ. ಈ ಬಗ್ಗೆ ಇಂಡಿಯಾ ಟುಡೇ ವರದಿ ಮಾಡಿದೆ.

ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ವಿಡಿಯೋವನ್ನು ಯುಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂಬ ಆರೋಪಕ್ಕೆ ಇನ್ನೂ ಸಾಕ್ಷಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಾರ, 2020ರಲ್ಲಿ ರಾಜಸ್ಥಾನವು ದೇಶದಲ್ಲಿಯೇ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಿದೆ. ರಾಜಸ್ಥಾನದಲ್ಲಿ 5,310 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ರಾಜಸ್ಥಾನದ ನಂತರ ಉತ್ತರ ಪ್ರದೇಶದಲ್ಲಿ 2,769 ಅತ್ಯಾಚಾರ ಘಟನೆಗಳು ದಾಖಲಾಗಿವೆ. ಒಟ್ಟು 2,339 ಪ್ರಕರಣಗಳೊಂದಿಗೆ ಮಧ್ಯಪ್ರದೇಶ ಮೂರನೇ ಸ್ಥಾನದಲ್ಲಿದೆ.

ಅಪ್ರಾಪ್ತ ಬಾಲಕಿಯರ ಮೇಲೆ ಅತಿ ಹೆಚ್ಚು ಅತ್ಯಾಚಾರ ಪ್ರಕರಣಗಳು ರಾಜಸ್ಥಾನದಲ್ಲಿ ದಾಖಲಾಗಿವೆ. ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ 1,279 ಅತ್ಯಾಚಾರ ಪ್ರಕರಣಗಳು ನಡೆದಿವೆ. ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. ರಾಜಸ್ಥಾನದಲ್ಲಿ ಇಂತಹ ಘಟನೆಗಳ 34535 ಪ್ರಕರಣಗಳು ವರದಿಯಾಗಿವೆ.

ಇನ್ನಷ್ಟು ಅಪರಾಧದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Sat, 30 April 22

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ