Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!

Crime News: ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!
ಕೌಶಲ್Image Credit source: NDTV
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jan 05, 2023 | 8:18 AM

ನೊಯ್ಡಾ: ಹೊಸ ವರ್ಷದ (New Year Celebration) ದಿನ ರಾತ್ರಿ ದೆಹಲಿಯಲ್ಲಿ ಯುವತಿಯನ್ನು ಕಾರು ಕಿಲೋಮೀಟರ್​ಗಟ್ಟಲೆ ಎಳೆದುಕೊಂಡು ಹೋದ ಭಯಾನಕ ಘಟನೆಯಂತೆಯೇ (Shocking News) ಅದೇ ದಿನ ಇನ್ನೊಂದು ಆಘಾತಕಾರಿ ಘಟನೆ ನಡೆದಿದೆ. ಫುಡ್ ಡೆಲಿವರಿ (Swiggy Delivery Agent) ಏಜೆಂಟ್​ನ ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸುಮಾರು 500 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಏಜೆಂಟ್ ಸಾವನ್ನಪ್ಪಿರುವ ಘಟನೆ ನೊಯ್ಡಾದಲ್ಲಿ (Noida) ನಡೆದಿದೆ.

ಭಾನುವಾರ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಅಪಘಾತ ನಡೆದ ಸ್ಥಳದಿಂದ ಸುಮಾರು 500 ಮೀಟರ್ ದೂರದಲ್ಲಿರುವ ದೇವಸ್ಥಾನದ ಬಳಿ ಚಾಲಕ ಕಾರನ್ನು ನಿಲ್ಲಿಸಿ ಕೌಶಲ್​ನ ಶವ ಕಾರಿನಿಂದ ಹೊರಬಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿ 1 ಗಂಟೆಗೆ ಕೌಶಲ್​ಗೆ ಅವರ ಸಹೋದರ ಅಮಿತ್ ಫೋನ್ ಮಾಡಿದಾಗ ದಾರಿಹೋಕರೊಬ್ಬರು ಆ ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ತಿಳಿಸಿದ್ದರು. ಬಳಿಕ, ಅಮಿತ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ತಮಿಳುನಾಡಿನ ಕಡಲೂರಿನಲ್ಲಿ ಭೀಕರ ಅಪಘಾತ; 5 ವಾಹನಗಳ ನಡುವೆ ಡಿಕ್ಕಿಯಾಗಿ ಐವರು ಸಾವು

ದೆಹಲಿಯಲ್ಲಿ 20 ವರ್ಷದ ಯುವತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಸುಮಾರು 13 ಕಿಮೀ ದೂರಕ್ಕೆ ಎಳೆದೊಯ್ದಿತ್ತು. ಈ ಘಟನೆಯಲ್ಲಿ ಆಕೆಯ ಬಟ್ಟೆಯೆಲ್ಲ ಹರಿದುಹೋಗಿ, ಮೈತುಂಬ ಗಾಯಗಳಾಗಿ ಮೃತಪಟ್ಟಿದ್ದಳು. ಅದಾದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಹೊಸ ವರ್ಷದ ರಾತ್ರಿ ನಡೆದ ಈ ಎರಡೂ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕ ಹೆಚ್ಚಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್