AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಮಹಿಳೆಯರ ಒಳಉಡುಪು ಕದಿಯುವುದೇ ಈ ಕಳ್ಳನ ಚಾಳಿ; ಯುವಕನ ವಿಡಿಯೋ ವೈರಲ್

ಉತ್ತರಾಖಂಡದಲ್ಲಿ ಯುವಕನೊಬ್ಬ ಮನೆಯ ಟೆರೇಸ್​ಗಳನ್ನು ಹಾರಿ ಮಹಿಳೆಯರ ಒಳಉಡುಪುಗಳನ್ನು ಕದಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ದಿನೇಶಪುರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ದೃಶ್ಯಾವಳಿ ಪೊಲೀಸರಿಗೆ ಸಿಕ್ಕಿದೆ. ಈ ಸಿಸಿಟಿವಿ ದೃಶ್ಯಾವಳಿಯಲ್ಲಿ, ಈ ಪ್ರದೇಶದಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಕಳ್ಳನ ದೃಶ್ಯ ಸೆರೆಯಾಗಿದೆ.

ಸುಷ್ಮಾ ಚಕ್ರೆ
|

Updated on: Sep 02, 2024 | 8:20 PM

Share

ಉತ್ತರಾಖಂಡ: ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಹೆಚ್ಚು ಜಾಗೃತರಾಗಿದ್ದಾರೆ. ತಮ್ಮ ಒಳ ಉಡುಪುಗಳನ್ನು ಮನೆಯ ಹೊರೆಗ ಒಣಗಿಸಲು ಅವರು ಯೋಚನೆ ಮಾಡುವಂತಾಗಿದೆ. ಅವರು ತಮ್ಮ ಒಳ ಉಡುಪುಗಳನ್ನು ಯಾರಾದರೂ ಕದಿಯುತ್ತಾರೆ ಎಂದು ಹೆದರುತ್ತಿದ್ದಾರೆ. ಕಳೆದ ಕೆಲವು ದಿನಗಳಿಂದ ಟೆರೇಸ್ ಮತ್ತು ಮನೆಯ ಹೊರಗೆ ಒಣಗಲು ಹಾಕಿದ ಮಹಿಳೆಯರ ಒಳ ಉಡುಪುಗಳು ನಿರಂತರವಾಗಿ ಕಣ್ಮರೆಯಾಗುತ್ತಿವೆ.

ಈ ಬಗ್ಗೆ ದೂರುಗಳನ್ನು ನೀಡಿ ಹಲವು ಮಹಿಳೆಯರು ಪೊಲೀಸರ ಮೊರೆ ಹೋಗಿದ್ದರು. ಈ ಕುರಿತು ವಿಷಯ ತಿಳಿದ ಪೊಲೀಸರಿಗೂ ಆಶ್ಚರ್ಯವಾಯಿತು. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಪೊಲೀಸರು ಈ ಕಳ್ಳನಿಗಾಗಿ ಹುಡುಕಾಟ ಆರಂಭಿಸಿದರು.

ಇದನ್ನೂ ಓದಿ: ಮಧ್ಯರಾತ್ರಿ ಮೈದುನನನ್ನು ರೂಮ್​ಗೆ ಕರೆದು ಮರ್ಮಾಂಗ ಕತ್ತರಿಸಿದ ಅತ್ತಿಗೆ!

ದಿನೇಶ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಉಧಮ್ ಸಿಂಗ್ ನಗರ ಜಿಲ್ಲೆಯಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಹೆಚ್ಚು ವೈರಲ್ ಆಗುತ್ತಿದೆ. ಟೆರೇಸ್ ಮತ್ತು ಮನೆಯ ಹೊರಗೆ ಒಣಗಲು ಹಾಕಿದ್ದ ಮಹಿಳೆಯರ ಒಳಉಡುಪುಗಳನ್ನು ಕದ್ದು, ಅದನ್ನು ಕೊಳಕು ಮಾಡಿ ಎಸೆಯುತ್ತಿರುವ ಯುವಕನೊಬ್ಬನ ಕೃತ್ಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಯುವಕನನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: 530 ವರ್ಷಗಳ ಹಿಂದಿನ ಪ್ರತಿಜ್ಞೆ; ಈ ಗ್ರಾಮದ ಜನರು ಮಾಂಸಾಹಾರ ತಿನ್ನೋದಿಲ್ಲ, ಡ್ರಗ್ಸ್ ಸೇವಿಸಲ್ಲ

ಈ ರೀತಿ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ವ್ಯಕ್ತಿಗೆ ಮಾನಸಿಕ ಆರೋಗ್ಯ ಚೆನ್ನಾಗಿಲ್ಲ ಎನ್ನಲಾಗುತ್ತಿದೆ. ಪ್ರತಿದಿನ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಿವೆ ಎಂದು ಉಧಮ್ ಸಿಂಗ್ ನಗರ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ದಿನೇಶಪುರ ಪೊಲೀಸ್ ಠಾಣೆಯಲ್ಲಿ ಮಹಿಳೆಯರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ