Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲ್ಕೋಹಾಲ್ ಕುಡಿಸಿ ವಾರಾಣಸಿಯ ಪಿಯುಸಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ

ಮದ್ಯ ಕುಡಿಸಿ, 7 ದಿನಗಳ ಕಾಲ ಮನೆಯಲ್ಲೇ ಬಂಧಿಸಿಟ್ಟು, ಉತ್ತರ ಪ್ರದೇಶದ ವಿದ್ಯಾರ್ಥಿನಿಯ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆ ಬಾಲಕಿ ಕಾಣೆಯಾಗಿದ್ದಾಳೆಂಬ ಆಕೆಯ ಕುಟುಂಬದ ದೂರಿನ ನಂತರ, ಪೊಲೀಸರು ಆಕೆಯನ್ನು ಪತ್ತೆಹಚ್ಚಿದರು. ಹುಕ್ಕಾ ಬಾರ್‌ನ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದರು. ಈ ತನಿಖೆಯ ಭಾಗವಾಗಿ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಆಲ್ಕೋಹಾಲ್ ಕುಡಿಸಿ ವಾರಾಣಸಿಯ ಪಿಯುಸಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ
Rape
Follow us
ಸುಷ್ಮಾ ಚಕ್ರೆ
|

Updated on: Apr 07, 2025 | 6:45 PM

ವಾರಾಣಸಿ, ಏಪ್ರಿಲ್ 7: ಮಾರ್ಚ್ 29 ಮತ್ತು ಏಪ್ರಿಲ್ 4ರ ನಡುವೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರು 23 ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರಲ್ಲಿ 11 ಮಂದಿಯನ್ನು ಇನ್ನೂ ಪತ್ತೆಹಚ್ಚಿಲ್ಲ. ಇಲ್ಲಿಯವರೆಗೆ 6 ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 29ರಂದು ಸ್ನೇಹಿತನೊಬ್ಬ ವಾರಾಣಸಿಯ ಪಿಶಾಚ್‌ಮೋಚನ್ ಪ್ರದೇಶದಲ್ಲಿ ಹುಕ್ಕಾ ಬಾರ್‌ಗೆ ಮಹಿಳೆಯನ್ನು ಕರೆದೊಯ್ದಿದ್ದ. ನಂತರ ಆಕೆ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆ ಕ್ರೀಡಾ ಕೋರ್ಸ್‌ಗೆ ಪ್ರವೇಶಕ್ಕಾಗಿ ತಯಾರಿ ನಡೆಸುತ್ತಿದ್ದಳು ಮತ್ತು ನಿಯಮಿತವಾಗಿ ಕಾಲೇಜಿಗೆ ಓಟದ ಅಭ್ಯಾಸಕ್ಕಾಗಿ ಹೋಗುತ್ತಿದ್ದಳು.

ಇದನ್ನೂ ಓದಿ: ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಿಕಿತ್ಸೆ ವೇಳೆ ಗೊತ್ತಾಯ್ತು ಗರ್ಭಿಣಿಯಾದ ಸತ್ಯ!

ಇದನ್ನೂ ಓದಿ
Image
ಬ್ಯಾಡ್ಮಿಂಟನ್ ಕೋಚ್​ನಿಂದ ಬಾಲಕಿ ಮೇಲೆ ಅತ್ಯಾಚಾರ: ವಿಡಿಯೋಗಳು ಪತ್ತೆ!
Image
ಕೌಟುಂಬಿಕ ಕಲಹದ ವೇಳೆ ಮನೆಯ ಛಾವಣಿ ಕುಸಿದು 10 ಜನರ ಸ್ಥಿತಿ ಗಂಭೀರ
Image
ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ

“ಆ ಬಾಲಕಿಯ ಹೇಳಿಕೆಯ ಪ್ರಕಾರ, ಮಾರ್ಚ್ 29ರಂದು ಸ್ನೇಹಿತನೊಬ್ಬ ಪಿಶಾಚ್‌ಮೋಚನ್ ಪ್ರದೇಶದ ಹುಕ್ಕಾ ಬಾರ್‌ಗೆ ಅವಳನ್ನು ಕರೆದುಕೊಂಡು ಹೋಗಿದ್ದ. ಅಲ್ಲಿ ಇತರ ಪುರುಷರು ಸಹ ಬಂದಿದ್ದರು. ಆ ಹುಡುಗಿ ಕುಡಿಯುವ ಕೋಲ್ಡ್ ಡ್ರಿಂಕ್‌ನಲ್ಲಿ ಮಾದಕ ದ್ರವ್ಯ ಮಿಕ್ಸ್ ಮಾಡಿ ಸಿಗ್ರಾ ಪ್ರದೇಶದ ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲಾಯಿತು. ಅಲ್ಲಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆರೋಪಿಗಳಲ್ಲಿ ಕೆಲವರು ಅವಳಿಗೆ ಪರಿಚಿತರು, ಇನ್‌ಸ್ಟಾಗ್ರಾಮ್‌ನ ಪರಿಚಯಸ್ಥರು ಮತ್ತು ಮಾಜಿ ಸಹಪಾಠಿಗಳು. ಆ ಹುಡುಗಿಯ ಕುಟುಂಬದವರ ದೂರಿನ ನಂತರ, ಪೊಲೀಸರು ಅವಳನ್ನು ಪತ್ತೆಹಚ್ಚಿದರು. ಬಳಿಕ ಹುಕ್ಕಾ ಬಾರ್‌ನ ಸಿಬ್ಬಂದಿಯನ್ನು ಸಹ ವಿಚಾರಣೆ ಮಾಡಲು ಪ್ರಾರಂಭಿಸಿದರು. ತನಿಖೆಯ ಭಾಗವಾಗಿ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: 19 ವರ್ಷದ ಯುವತಿ ಮೇಲೆ ಅತ್ಯಾಚಾರ; ಗುಜರಾತ್​ನ ದಿಗಂಬರ ಜೈನಮುನಿ ಶಾಂತಿಸಾಗರ್ ಮಹಾರಾಜ್‌ಗೆ 10 ವರ್ಷ ಜೈಲು

ಪೊಲೀಸ್ ಅಧಿಕಾರಿಗಳ ಪ್ರಕಾರ, “ಆ ಹುಡುಗಿ ಆರಂಭದಲ್ಲಿ ತನ್ನ ಸ್ನೇಹಿತನೊಂದಿಗೆ ಸ್ವಇಚ್ಛೆಯಿಂದ ಹೊರಟಿದ್ದಳು. ಏಪ್ರಿಲ್ 4ರಂದು ಆಕೆಯ ಕುಟುಂಬದಿಂದ ಆಕೆ ನಾಪತ್ತೆಯಾದ ವ್ಯಕ್ತಿಯ ದೂರು ದಾಖಲಾಗಿತ್ತು. ಅದೇ ದಿನ ಆಕೆ ಪತ್ತೆಯಾಗಿದ್ದಳು. ಆ ಸಮಯದಲ್ಲಿ, ಆಕೆ ಅಥವಾ ಆಕೆಯ ಕುಟುಂಬದಿಂದ ಯಾವುದೇ ಲೈಂಗಿಕ ದೌರ್ಜನ್ಯದ ದೂರು ದಾಖಲಾಗಿರಲಿಲ್ಲ.”

ಮಾರ್ಚ್ 29ರಿಂದ ಏಪ್ರಿಲ್ 4ರ ನಡುವೆ ನಡೆದಿರಬಹುದು ಎನ್ನಲಾದ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಏಪ್ರಿಲ್ 6ರಂದು ಲಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ದೂರಿನ ಆಧಾರದ ಮೇಲೆ, ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ