Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಬಂದಿದ್ದ 5 ವರ್ಷದ ಬಾಲಕಿಯನ್ನು ಸಮೀಪದ ಕಾಡಿಗೆ ಕರೆದುಕೊಂಡು ಹೋಗಿದ್ದ ಆತ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.

Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Mar 16, 2022 | 7:22 PM

ಅಗರ್ತಲಾ: ಭಾರತದಲ್ಲಿ ಅತ್ಯಾಚಾರಿಗಳ (Rapists) ಸಂಖ್ಯೆ ಹೆಚ್ಚುತ್ತಲೇ ಇದೆ. ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿದೆ. ಕಾನೂನಿನ ಯಾವುದೇ ಅಂಜಿಕೆಯಿಲ್ಲದೆ ಸಣ್ಣ ಮಕ್ಕಳನ್ನೂ ತಮ್ಮ ಕಾಮತೃಷೆಗೆ ಬಳಸಿಕೊಳ್ಳುವ ಅತ್ಯಾಚಾರಿಗಳಿಗೆ ಎಷ್ಟೋ ಕಡೆಗಳಲ್ಲಿ ಊರಿನ ಜನರೇ ಸೇರಿಕೊಂಡು ಶಿಕ್ಷೆ ನೀಡಿದ್ದಾರೆ. ಅದೇ ರೀತಿ, ಮಹಿಳೆಯರ ಗುಂಪೊಂದು 46 ವರ್ಷದ ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ಕೊಂದಿರುವ ಘಟನೆ ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಇಂದು ನಡೆದಿದೆ. ಈ ಘಟನೆ ಇದೀಗ ದೇಶಾದ್ಯಂತ ಸುದ್ದಿಯಾಗಿದೆ.

ತ್ರಿಪುರಾದ ಗಂಡಚೆರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ 8 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿ ಊರಿಗೆ ವಾಪಾಸ್ ಬಂದಿದ್ದ. ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಬಂದಿದ್ದ 5 ವರ್ಷದ ಬಾಲಕಿಯನ್ನು ಸಮೀಪದ ಕಾಡಿಗೆ ಕರೆದುಕೊಂಡು ಹೋಗಿದ್ದ ಆತ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.

ಅಮ್ಮನೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದ ಆ 5 ವರ್ಷದ ಬಾಲಕಿ ಜೋರಾಗಿ ಕಿರುಚಾಡಿದ ಶಬ್ದ ಕೇಳಿ ಅಲ್ಲಿ ಸೇರಿದ್ದವರು ಕಾಡಿನೊಳಗೆ ಹೋಗಿ ನೋಡಿದಾಗ ಆಕೆಯ ಬಟ್ಟೆಯೆಲ್ಲ ಹರಿದುಹೋಗಿತ್ತು. ನೋವಿನಿಂದ ನರಳುತ್ತಾ ಬಿದ್ದಿದ್ದ ಆಕೆಯನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಕೊಲೆ ಮಾಡಿ ಜೈಲು ಸೇರಿ ಬಿಡುಗಡೆಯಾಗಿದ್ದ ಆ ವ್ಯಕ್ತಿಯೊಂದಿಗೆ ಆ ಬಾಲಕಿ ಹೋಗುತ್ತಿರುವುದನ್ನು ಅಲ್ಲಿದ್ದ ಕೆಲವರು ನೋಡಿದ್ದರು. ಹೀಗಾಗಿ, ಆತನೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪದಲ್ಲಿ ಆತನನ್ನು ಬಂಧಿಸುವಂತೆ ಒತ್ತಾಯಿಸಿ ಗಂಡಚೆರಾ-ಅಮರ್‌ಪುರ ಹೆದ್ದಾರಿ ತಡೆ ನಡೆಸಲಾಯಿತು.

ಅದರ ಮರುದಿನವೇ ಅಂದರೆ ಇಂದು ಬೆಳಗ್ಗೆ ಆ ಗ್ರಾಮದ ಮಹಿಳೆಯರ ಗುಂಪೊಂದು ಆತನನ್ನು ಹಿಡಿದು, ಮರಕ್ಕೆ ಕಟ್ಟಿ, ಮನಸಿಗೆ ಬಂದಂತೆ ಥಳಿಸಿದ್ದಾರೆ. ಆ ಹೊಡೆತವನ್ನು ತಾಳಲಾರದೆ ಆತ ಸಾವನ್ನಪ್ಪಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಆರೋಪಿಯನ್ನು ಮಹಿಳೆಯರು ನಿರ್ದಯವಾಗಿ ಥಳಿಸುತ್ತಿರುವುದನ್ನು ನೋಡಬಹುದು. ಬಳಿಕ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಆರೋಪಿಯ ಕೊಲೆ ಎರಡೂ ಘಟನೆಗಳ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Crime News: ಕಣ್ಣಿಗೆ ಹಾರ್ಪಿಕ್, ಝಂಡು ಬಾಮ್ ಹಚ್ಚಿ ವೃದ್ಧೆಯನ್ನು ಕುರುಡಿಯಾಗಿಸಿ ಮನೆ ದೋಚಿದ ಮಹಿಳೆ!

Murder: ಮಗಳನ್ನೇ ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ ಅಪ್ಪ!

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್