Shocking News: ಗರ್ಲ್​ಫ್ರೆಂಡ್ ಜೊತೆ ಗುಟ್ಟಾಗಿ ಮದುವೆಯಾಗಿದ್ದಕ್ಕೆ ಯುವಕನ ಗುಪ್ತಾಂಗವೇ ಕಟ್!

Shocking News: ಗರ್ಲ್​ಫ್ರೆಂಡ್ ಜೊತೆ ಗುಟ್ಟಾಗಿ ಮದುವೆಯಾಗಿದ್ದಕ್ಕೆ ಯುವಕನ ಗುಪ್ತಾಂಗವೇ ಕಟ್!
ಸಾಂದರ್ಭಿಕ ಚಿತ್ರ

Crime News: ಯುವಕ ಮತ್ತು ಯುವತಿ ಬಹಳ ದಿನಗಳಿಂದ ಪ್ರೀತಿ ಮಾಡುತ್ತಿದ್ದರು. ಮನೆಯವರು ಅವರ ಪ್ರೀತಿಗೆ ಒಪ್ಪದ ಕಾರಣದಿಂದ ದೆಹಲಿಯ ಹೊರಗೆ ಹೋಗಿ ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು.

TV9kannada Web Team

| Edited By: Sushma Chakre

Dec 24, 2021 | 8:01 PM

ನವದೆಹಲಿ: ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ಎಂಬ ಒಂದೇ ಕಾರಣಕ್ಕೆ ಯುವಕನನ್ನು ಥಳಿಸಿ, ಆತನ ಗುಪ್ತಾಂಗವನ್ನು ಕಟ್ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಮದುವೆಯಾಗಿ, ಓಡಿಹೋದ ಯುವಕನನ್ನು ಅಪಹರಿಸಿದ ಯುವತಿಯ ಕುಟುಂಬಸ್ಥರು ಥಳಿಸಿ, ಆತನ ಗುಪ್ತಾಂಗವನ್ನು ಕತ್ತರಿಸಿದ್ದಾರೆ.

ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಯತ್ನ ಮತ್ತು ಅಪಹರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಪಶ್ಚಿಮ) ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಹಲ್ಲೆಗೊಳಗಾದ 22 ವರ್ಷದ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಆತನನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ ಯುವಕ ಮತ್ತು ಯುವತಿ ಬಹಳ ದಿನಗಳಿಂದ ಪ್ರೀತಿ ಮಾಡುತ್ತಿದ್ದರು. ಮನೆಯವರು ಅವರ ಪ್ರೀತಿಗೆ ಒಪ್ಪದ ಕಾರಣದಿಂದ ದೆಹಲಿಯ ಹೊರಗೆ ಹೋಗಿ ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು. ಅವರಿಬ್ಬರೂ ಮದುವೆಯಾದ ನಂತರ ಡಿಸೆಂಬರ್ 22ರಂದು ದೆಹಲಿಗೆ ಮರಳಿದ್ದರು. ಅವರ ಕುಟುಂಬಗಳಿಂದ ಅಪಾಯವಿರುವುದರಿಂದ ರಕ್ಷಣೆ ಬೇಕೆಂದು ಪೊಲೀಸರನ್ನು ಕೋರಿದ್ದರು.

ದಂಪತಿಯ ರಕ್ಷಣೆಗಾಗಿ ರಾಜೌರಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಗ್ಗೆ ಯುವತಿಯ ಕುಟುಂಬದ ಸದಸ್ಯರಿಗೆ ಗೊತ್ತಾಯಿತು. ಹೀಗಾಗಿ, ಅವರಿಬ್ಬರೂ ಪೊಲೀಸ್ ಠಾಣೆಯಿಂದ ಹೊರಬಂದ ತಕ್ಷಣ, ಹುಡುಗಿಯ ಕುಟುಂಬ ಸದಸ್ಯರು ಅವರನ್ನು ಅಪಹರಿಸಿ, ಅಮಾನುಷವಾಗಿ ಥಳಿಸಿ, ಆ ಯುವಕನ ಗುಪ್ತಾಂಗವನ್ನು ಕತ್ತರಿಸಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ: Shocking News: ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬದಲು ಗುಪ್ತಾಂಗಕ್ಕೆ ಗಮ್ ಅಂಟಿಸಿಕೊಂಡ ಯುವಕ ಸಾವು!

Shocking News: ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಗಂಡನ ಮರ್ಮಾಂಗ ಕತ್ತರಿಸಿದ ಹೆಂಡತಿ!

Follow us on

Related Stories

Most Read Stories

Click on your DTH Provider to Add TV9 Kannada