Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ನಡುರಸ್ತೆಯಲ್ಲೇ ಹೆಂಡತಿ, ಮಗಳನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ವ್ಯಕ್ತಿ; ಶಾಕಿಂಗ್ ವಿಡಿಯೋ ವೈರಲ್

Murder Video: ರಾಜೀವ್ ತನ್ನ ಪತ್ನಿ ಮತ್ತು ಮಗಳನ್ನು ಕೊಂದ ಕ್ಷಣದ ಮನಕಲಕುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Shocking Video: ನಡುರಸ್ತೆಯಲ್ಲೇ ಹೆಂಡತಿ, ಮಗಳನ್ನು ಕೊಂದು, ತಾನೂ ಶೂಟ್ ಮಾಡಿಕೊಂಡ ವ್ಯಕ್ತಿ; ಶಾಕಿಂಗ್ ವಿಡಿಯೋ ವೈರಲ್
ಹೆಂಡತಿ ಮಗಳಿಗೆ ಗುಂಡು ಹಾರಿಸಿ ಕೊಂದ ವ್ಯಕ್ತಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 28, 2022 | 7:13 PM

ಪಾಟ್ನಾ: ವ್ಯಕ್ತಿಯೋರ್ವ ತನ್ನ ಪತ್ನಿ ಮತ್ತು ಮಗಳನ್ನು ಕೊಂದು ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಪಾಟ್ನಾದಲ್ಲಿ ನಡೆದಿದೆ. ಈ ದಾರುಣ ಘಟನೆ ಗರ್ದಾನಿ ಬಾಗ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ಹಗಲು ಹೊತ್ತಿನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ರಾಜೀವ್ ಎಂದು ಗುರುತಿಸಲಾಗಿದೆ. ಮೊದಲ ಪತ್ನಿಯ ಮರಣದ ನಂತರ ರಾಜೀವ್ ತನ್ನ ಅತ್ತಿಗೆಯನ್ನು ವಿವಾಹವಾಗಿದ್ದರು. ಆದರೆ, ಅವರ ಮದುವೆ ಹೆಚ್ಚು ಕಾಲ ಉಳಿಯಲಿಲ್ಲ. ಅತ್ತಿಗೆಯನ್ನು ಮದುವೆಯಾದ ಬಳಿಕ ಅವರು ಕೆಲವೇ ದಿನಗಳಲ್ಲಿ ಬೇರೆಯಾಗಿದ್ದರು.

ರಾಜೀವ್ ತನ್ನ ಪತ್ನಿ ಮತ್ತು ಮಗಳನ್ನು ಕೊಂದ ಕ್ಷಣದ ಮನಕಲಕುವ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ, ವ್ಯಕ್ತಿ ಮೊದಲು ತನ್ನ ಹೆಂಡತಿ ಮತ್ತು ಮಗಳನ್ನು ಕೊಲ್ಲುವುದನ್ನು ಕಾಣಬಹುದು. ನಂತರ ಅವನು ತನಗೆ ತಾನೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ.

ಮಧ್ಯಾಹ್ನ 12.40ರ ಸುಮಾರಿಗೆ ಅನಿಸಾಬಾದ್‌ನ ಪೊಲೀಸ್ ಕಾಲೋನಿಯಲ್ಲಿ ತ್ರಿವಳಿ ಕೊಲೆ ನಡೆದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ತಕ್ಷಣ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿದೆ. ಪ್ರತ್ಯಕ್ಷದರ್ಶಿಗಳ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದ್ದು, ಸ್ಥಳದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯನ್ನು ಸ್ಕ್ಯಾನ್ ಮಾಡಲಾಗಿದೆ. ತನಿಖೆಯ ನಂತರ, ರಾಜೀವ್ ಕುಮಾರ್ ಎಂದು ಗುರುತಿಸಲಾದ ವ್ಯಕ್ತಿ ತನ್ನನ್ನು ಕೊಲ್ಲುವ ಮೊದಲು ಇಬ್ಬರು ಮಹಿಳೆಯರನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ತಿಳಿದುಬಂದಿದೆ ಎಂದು ಪಾಟ್ನಾ ಎಸ್‌ಎಸ್‌ಪಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

ಈ ಘಟನೆಯು ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕವನ್ನು ಉಂಟುಮಾಡಿದೆ. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ. ಹಳೆಯ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದನ್ನೂ ಓದಿ: Viral Video: ಎಟಿಎಂನಲ್ಲಿ ಹಣ ಡ್ರಾ ಮಾಡಿದ ಖುಷಿಗೆ ಸ್ಟೆಪ್ ಹಾಕಿ, ಸೆಲ್ಯೂಟ್ ಹೊಡೆದ ಯುವತಿ; ವಿಡಿಯೋ ಇಲ್ಲಿದೆ

Viral News: 23 ಲಕ್ಷ ಕೊಟ್ಟು ಅಪರೂಪದ ಕುದುರೆ ಖರೀದಿಸಿದ ವ್ಯಾಪಾರಿ; ಸ್ನಾನ ಮಾಡಿಸಿದಾಗ ಬಯಲಾಯ್ತು ಅಸಲಿ ಸತ್ಯ!

Published On - 7:12 pm, Thu, 28 April 22

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​