ಶೃಂಗೇರಿ: ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ; ಮತ್ತೆ ಐವರು ಆರೋಪಿಗಳ ಬಂಧನ
ಕೂಲಿ ಕೆಲಸ ಮಾಡುತ್ತಿದ್ದ ಚಿಕ್ಕಮ್ಮನೊಂದಿಗೆ ವಾಸವಾಗಿದ್ದ ಅಪ್ರಾಪ್ತೆ ಬಾಲಕಿ ಮೇಲೆ ಸುಮಾರು ನಾಲ್ಕು ತಿಂಗಳಿನಿಂದ ಅತ್ಯಾಚಾರ ನಡೆಯುತ್ತಿತ್ತು. ಈ ಪ್ರಕರಣ ಜನವರಿ 30 ರಂದು ಶೃಂಗೇರಿ ಠಾಣೆಯಲ್ಲಿ ಸುಮಾರು ಒಟ್ಟು 17 ಮಂದಿ ಮೇಲೆ ಕೇಸ್ ದಾಖಲಾಗಿದೆ. ಈವರೆಗೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇನ್ನು ನಾಲ್ವರು ಬಾಕಿಯಿದ್ದಾರೆ.
ಚಿಕ್ಕಮಗಳೂರು: ಶೃಂಗೇರಿಯ ಗ್ರಾಮವೊಂದರಲ್ಲಿ ಅಪ್ರಾಪ್ತೆ ಮೇಲೆ ನಿರಂತರವಾಗಿ ನಡೆದಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಪ್ರಸನ್ನ, ಅಭಿ, ಸಾಗರ್, ಸುಗಮ್ ಮತ್ತು ವೆಂಕಟೇಶ್ ಎಂದು ತಿಳಿದುಬಂದಿದ್ದು, ಪ್ರಕರಣ ಸಂಬಂಧ ಈವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ.
ಕೂಲಿ ಕೆಲಸ ಮಾಡುತ್ತಿದ್ದ ಚಿಕ್ಕಮ್ಮನೊಂದಿಗೆ ವಾಸವಾಗಿದ್ದ ಅಪ್ರಾಪ್ತೆ ಬಾಲಕಿ ಮೇಲೆ ಸುಮಾರು ನಾಲ್ಕು ತಿಂಗಳಿನಿಂದ ಅತ್ಯಾಚಾರ ನಡೆಯುತ್ತಿತ್ತು. ಈ ಪ್ರಕರಣ ಜನವರಿ 30 ರಂದು ಶೃಂಗೇರಿ ಠಾಣೆಯಲ್ಲಿ ಸುಮಾರು ಒಟ್ಟು 17 ಮಂದಿ ಮೇಲೆ ಕೇಸ್ ದಾಖಲಾಗಿದೆ. ಈವರೆಗೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇನ್ನು ನಾಲ್ವರು ಬಾಕಿಯಿದ್ದಾರೆ.
ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಹಿನ್ನೆಲೆ ತನಿಖಾಧಿಕಾರಿಯಾಗಿದ್ದ ಸಿದ್ದರಾಮಯ್ಯ ಬಿ.ಎಂ. ಅವರನ್ನು ಅಮಾನತುಗೊಳಿಸಿ, ಪಿಎಸ್ಐ ಒಬ್ಬರನ್ನು ವರ್ಗಾವಣೆ ಮಾಡಲಾಗಿತ್ತು. ಸದ್ಯ ಎಎಸ್ಪಿ ಶೃತಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.
ಜಿಲ್ಲಾ ಪೊಲೀಸರು ಆರೋಪಿಗಳನ್ನು ಬಂಧಿಸಲು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ನೇತೃತ್ವದಲ್ಲಿ ಅತ್ಯಾಚಾರ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿ ಫೆಬ್ರವರಿ 5ರಂದು ಶೃಂಗೇರಿಯಲ್ಲಿ ಪ್ರತಿಭಟನೆ ನಡೆದಿತ್ತು.
ಅಪ್ರಾಪ್ತೆ ಮೇಲೆ ಸರಣಿ ಅತ್ಯಾಚಾರ; ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಧರಣಿ