AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮಧ್ಯರಾತ್ರಿ ಮೈದುನನನ್ನು ರೂಮ್​ಗೆ ಕರೆದು ಮರ್ಮಾಂಗ ಕತ್ತರಿಸಿದ ಅತ್ತಿಗೆ!

ತನ್ನ ಮೈದುನನನ್ನು ಮಧ್ಯರಾತ್ರಿ ಪ್ರೀತಿಯಿಂದ ರೂಮ್​ಗೆ ಕರೆದ ಮಹಿಳೆಯೊಬ್ಬರು ಆತನ ಮರ್ಮಾಂಗ ಕತ್ತರಿಸಿದ್ದಾರೆ. ಇದರಿಂದ ಆ ಯುವಕ ಕಿರುಚುತ್ತಾ ಅತ್ತಿಗೆ ರೂಮಿನಿಂದ ಹೊರಗೆ ಓಡಿಬಂದಿದ್ದಾನೆ. ಮಧ್ಯಪ್ರದೇಶದಲ್ಲಿ ಈ ವಿಚಿತ್ರವಾದ ಘಟನೆ ನಡೆದಿದೆ. ಅಷ್ಟಕ್ಕೂ ಈ ಘಟನೆಗೆ ಕಾರಣವೇನು? ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

Shocking News: ಮಧ್ಯರಾತ್ರಿ ಮೈದುನನನ್ನು ರೂಮ್​ಗೆ ಕರೆದು ಮರ್ಮಾಂಗ ಕತ್ತರಿಸಿದ ಅತ್ತಿಗೆ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Aug 31, 2024 | 7:20 PM

Share

ನವದೆಹಲಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಅತ್ತಿಗೆಯೊಬ್ಬಳು ತನ್ನ ಮೈದುನನ ಖಾಸಗಿ ಅಂಗವನ್ನು ಕತ್ತರಿಸಿದ್ದಾಳೆ. ಗಾಯಗೊಂಡಿರುವ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿ ಅವನನ್ನು ಪ್ರೀತಿಯಿಂದ ಮನೆಗೆ ಕರೆದ ಅತ್ತಿಗೆ ಅವನನ್ನು ತನ್ನ ಕೋಣೆಗೆ ಕರೆದೊಯ್ದು ಅವನ ಮರ್ಮಾಂಗವನ್ನು ಕತ್ತರಿಸಿದ್ದಾಳೆ. ಗಾಯಗೊಂಡಿರುವ ಯುವಕನ ದೂರಿನ ಮೇರೆಗೆ ಪೊಲೀಸರು ಆರೋಪಿ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ.

ಈ ಘಟನೆಯ ನಂತರ ಆ ಕುಟುಂಬದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಈ ಘಟನೆ ಕೇಳಿ ಎಲ್ಲರೂ ಶಾಕ್ ಆಗಿದ್ದಾರೆ. ಪೊಲೀಸರು ಗಾಯಾಳು ಯುವಕನ ವಿಚಾರಣೆ ನಡೆಸಿದ್ದಾರೆ. ಘಟನೆಗೆ ಜಮೀನು ವಿವಾದವೇ ಕಾರಣ ಎನ್ನಲಾಗಿದೆ. ಸಿಧಿ ಜಿಲ್ಲೆಯ ಬುಡಕಟ್ಟು ಪ್ರದೇಶವಾದ ವನಂಚಲ್ ಕುಸ್ಮಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಮಹಿಳೆಯೊಬ್ಬರು ಜಮೀನು ವಿವಾದದಿಂದ ತನ್ನ ಮೈದುನನಿಗೆ ಈ ರೀತಿ ಮಾಡಿದ್ದಾಳೆ.

ಇದನ್ನೂ ಓದಿ: Shocking News: ಅಮ್ಮ ಕ್ಷಮಿಸಿಬಿಡು; ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ

ಈ ಘಟನೆ ಕುರಿತು ಗ್ರಾಮಸ್ಥರಲ್ಲಿ ನಾನಾ ಚರ್ಚೆಗಳು ನಡೆಯುತ್ತಿವೆ. ಆರೋಪಿ ಭಾಬಿ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಗಾಯಗೊಂಡಿರುವ ಮೈದುನ ತನ್ನ ಅತ್ತಿಗೆಯೊಂದಿಗೆ ಜಮೀನು ವಿವಾದವನ್ನು ಹೊಂದಿದ್ದ ಎನ್ನಲಾಗಿದೆ. ರಾತ್ರಿ ಅತ್ತಿಗೆ ಅವನನ್ನು ಪ್ರೀತಿಯಿಂದ ತನ್ನ ಮನೆಗೆ ಆಹ್ವಾನಿಸಿದಳು. ಅವನು ಅವಳ ಕೋಣೆಯನ್ನು ತಲುಪಿದಾಗ, ಆಕೆ ಅವನ ಖಾಸಗಿ ಅಂಗವನ್ನು ಹರಿತವಾದ ಆಯುಧದಿಂದ ಕತ್ತರಿಸಿದಳು. ಈ ದಾಳಿಯ ನಂತರ ಆತ ನೋವಿನಿಂದ ನರಳಲು ಪ್ರಾರಂಭಿಸಿದರು. ಈ ವಿಷಯ ಅವರ ಮನೆಯವರಿಗೆ ತಿಳಿಯಿತು. ಗಾಯಗೊಂಡ ಸ್ಥಿತಿಯಲ್ಲಿ ಅವನನ್ನು ಕುಸ್ಮಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಅತಿಯಾದ ರಕ್ತಸ್ರಾವದಿಂದ ಗಂಭೀರ ಸ್ಥಿತಿಯಲ್ಲಿದ್ದ ಅವನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯಲ್ಲಿ ಆತನ ಚಿಕಿತ್ಸೆ ನಡೆಯುತ್ತಿದೆ. ಯುವಕನ ದೂರಿನ ಮೇರೆಗೆ ಯುವಕನ ಅತ್ತಿಗೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಿದ್ದಿ ಎಎಸ್ಪಿ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:08 pm, Sat, 31 August 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ