Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಸಾವಿನ ಹಿಂದೆ ಲವ್​ ಕಹಾನಿ, ಅಸಲಿಗೆ ಟಾರ್ಗೆಟ್ ಆಗಿದ್ದೇ ಒಬ್ಬ, ಬಲಿಯಾಗಿದ್ದು ಮಾರ್ವೇಶ್

ಬೆಂಗಳೂರಿನಲ್ಲಿ ನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿ ಸಾವಿನ ಪ್ರಕರಣ ಹಿಂದೆ ಲವ್​ ಕಹಾನಿ ಬಯಲಿಗೆ ಬಂದಿದ್ದು, ಟಾರ್ಗೆಟ್ ಆಗಿದ್ದೇ ಒಬ್ಬ, ಬಲಿಯಾಗಿದ್ದು ಮಾರ್ವೇಶ್. ಆಗಿದ್ದೇನು? ಮಾಡದ ತಪ್ಪಿಗೆ ಮಾರ್ವೇಶ್ ಬಲಿಯಾಗಿದ್ಯಾಕೆ?

ಬೆಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿ ಸಾವಿನ ಹಿಂದೆ ಲವ್​ ಕಹಾನಿ, ಅಸಲಿಗೆ ಟಾರ್ಗೆಟ್ ಆಗಿದ್ದೇ ಒಬ್ಬ, ಬಲಿಯಾಗಿದ್ದು ಮಾರ್ವೇಶ್
ಬಂಧಿತ ಆರೋಪಿಗಳು
Follow us
Jagadisha B
| Updated By: ರಮೇಶ್ ಬಿ. ಜವಳಗೇರಾ

Updated on:Jul 28, 2023 | 3:55 PM

ಬೆಂಗಳೂರು, (ಜುಲೈ 28):  ನಗರದ ಬಾಣಸವಾಡಿ ಸಮೀಪದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನ ವಿದ್ಯಾರ್ಥಿ (College Student) ಮಾರ್ವೇಶ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ವೇಳೆ ಲವ್​ (Love) ಕಹಾನಿ ಬಟಾಬಯಲಾಗಿದೆ. ಅಸಲಿಗೆ ಟಾರ್ಗೆಟ್ ಆಗಿದ್ದೇ ಒಬ್ಬ. ಆದ್ರೆ, ಏನು ಮಾಡದ ತಪ್ಪಿಗೆ ಮೃತಪಟ್ಟವನೇ ಮಾರ್ವೇಶ್. ಹೌದು.. ಸ್ನೇಹಿತನ ಪ್ರೀತಿ-ಪ್ರೇಮಕ್ಕೆ ಮಾರ್ವೇಶ್ ಬಲಿಯಾಗಿದ್ದಾನೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ಒಟ್ಟು ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್, ಅಭಿಷೇಕ್, ನೆಲ್ಸನ್, ರಾಕಿ, ಡ್ಯಾನಿಯಲ್, ಶ್ರೀಕಾಂತ್ ಬಂಧಿತ ಆರೋಪಿಗಳು. ಬಂಧಿತರ ತನಿಖೆ ವೇಳೆ ಲವ್​ ಸ್ಟೋರಿ ಬಯಲಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿನ ಮಾಡೆಲ್​ ಆತ್ಮಹತ್ಯೆ ಹಿಂದೆ ಫೇಸ್​ಬುಕ್ ಪ್ರಿಯಕರನಿಂದ ಲವ್​ ಸೆಕ್ಸ್​ ದೋಖಾ, ಡೈರಿ ಬಿಚ್ಚಿಟ್ಟ ಸ್ಫೋಟಕ ಅಂಶ

ಬಾಣಸವಾಡಿ ಸಮೀಪದ ವಿನ್ಸೆಂಟ್ ಪೆಲ್ಲೋಟಿ ಕಾಲೇಜಿನಲ್ಲಿ ಮಾರ್ವೇಶ್‌ ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜಿನ ವಿದ್ಯಾರ್ಥಿನಿಯೊಬ್ಬಳನ್ನು ಮಾರ್ವೇಶ್‌ ಸ್ನೇಹಿತ ಪ್ರೀತಿಸುತ್ತಿದ್ದು, ಈ ವಿಚಾರವಾಗಿ ಮತ್ತೊಂದು ವಿದ್ಯಾರ್ಥಿ ಗುಂಪಿನೊಂದಿಗೆ ಮನಸ್ತಾಪವಾಗಿತ್ತು. ಇದೇ ವಿಚಾರವಾಗಿ ಮಾರ್ವೇಶ್​ನನ್ನು ಕರೆದುಕೊಂಡು ಹೋಗಿ ಮನಬಂದಂತೆ ಥಳಿಸಿ ಕಳುಹಿಸಿದ್ದಾರೆ. ಇದರಿಂದ ಅಸ್ವಸ್ಥಗೊಂಡಿದ್ದ ಮಾರ್ವೇಶ್​ ವಾಂತಿ ಮಾಡಿಕೊಂಡು ಮೃತಪಟ್ಟಿದ್ದ ಎನ್ನುವ ಅಂಶ ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ.

ಕೃತ್ಯದ ಹಿಂದೆ ಲವ್​ ಕಹಾನಿ

ಮಾರ್ವೇಶ್ ಸ್ನೇಹಿತ ಯುವತಿಯೋರ್ವಳನ್ನು ಪ್ರೀತಿಸುತ್ತಿದ್ದ. ಆದ್ರೆ, ಆ ಹುಡುಗಿ ಒಪ್ಪಿಕೊಂಡಿರಲ್ಲಿಲ್ಲ. ಅಲ್ಲದೇ ಆಕೆ ಬೇರೆ ಯುವಕ ಲವ್​ನಲ್ಲಿ ಬಿದ್ದಿದ್ದಳು. ಆದರೂ ಬಿಡದ ಮಾರ್ವೇಶ್​ನ ಗೆಳೆಯ ಪ್ರೀತಿಸುವಂತೆ ಸತಾಯಿಸುತ್ತಿದ್ದ. ಅಲ್ಲದೇ ಈ ಬಗ್ಗೆ ಆಕೆಗೆ ಕೆಟ್ಟ ಕೆಟ್ಟದಾಗಿ ಮೆಸೆಜ್ ಕಳುಹಿಸಿದ್ದ. ಇದರಿಂದ ಕೋಪಗೊಂಡ ಯುವತಿ ತನ್ನ ಬಾಯ್​ ಫ್ರೆಂಡ್​ಗೆ ಹೇಳಿದ್ದಾಳೆ. ಬಳಿಕ ಆಕೆಯ ಬಾಯ್​ ಫ್ರೆಂಡ್ ಮಾರ್ವೇಶನ ಸ್ನೇಹಿತನ ಫೋನ್​ಗೆ ಕರೆ ಮಾಡಿದ್ದಾನೆ. ಆದ್ರೆ, ಆತ ಫೋನ್​ ಸ್ವೀಕರಿಸದ ಕಾರಣ ಮಾರ್ವೇಶ್ ಸಂಪರ್ಕಿಸಿದ್ದ. ಫೋನ್​ನಲ್ಲಿ ಅದೇನು ಮಾತುಕತೆ ಆಯ್ತೋ ಏನೋ ಹುಡುಗಿಯ ಬಾಯ್​ ಫ್ರೆಂಡ್ ಹಾಗೂ ಆತನ ಸಹಚರರು ಜುಲೈ 26ರಂದು  ಬಂದು ಮಾರ್ವೇಶ್​ನನ್ನು ರೂಮ್​ವೊಂದಕ್ಕೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಗೆಳೆಯನಿಗೆ ಕರೆ ಮಾಡುವಂತೆ ಹೇಳಿದ್ದಾರೆ. ಅದರಂತೆ ಮಾರ್ವೇಶ್ ತನ್ನ ಮೊಬೈಲ್​ನಿಂದ ಹಲವು ಬಾರಿ ಕರೆ ಮಾಡಿದರೂ ಸ್ನೇಹಿತ ಫೋನ್ ಪಿಕ್ ಮಾಡಿಲ್ಲ. ಇದರಿಂದ ಕೊಪಗೊಂಡ ಯುವತಿಯ ಬಾಯ್ ಫ್ರೆಂಡ್ ಹಾಗೂ ಆತನ ಸಹಚರರು ಮಾರ್ವೇಶ್​ಗೆ ಮನಬಂದಂತೆ ಥಳಿಸಿ ಹಲ್ಲೆ ಮಾಡಿದ್ದಾರೆ. ಈ ಮೂಲಕ ಮಾರ್ವೇಶ್ ಸ್ನೇಹಿತನ ಮೇಲಿದ್ದ ಕೋಪ ಮಾರ್ವೇಶ್ ಮೇಲೆ ತೀರಿಸಿಕೊಂಡಿದ್ದಾರೆ.

ನಂತರ ಮಾರ್ವೇಶ್ ನನ್ನು  ಸ್ನೇಹಿತ ಸುನೀಲ್ ಎಂಬಾತನಿಗೆ ಒಪ್ಪಿಸಿದ್ದಾರೆ. ಆ ಬಳಿಕ ಮಾರ್ವೇಶ್ ವಾಂತಿ ಮಾಡಿಕೊಂಡಿದ್ದ. ಇದರಿಂದ ಸುನೀಲ್ ಸೇರಿದಂತೆ ಇತರೆ ಯುವಕರು ಮಾರ್ವೇಶ್ ನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದ್ರೆ, ಅಷ್ಟರಾಗಲೇ ಮಾರ್ವೇಶ್ ಮೃತಪಟ್ಟಿದ್ದ.

ಪೂರ್ವ ವಿಭಾಗದ ಡಿಸಿಪಿ ಪ್ರತಿಕ್ರಿಯೆ

ಈ ಪ್ರಕರಣದ ಸಂಬಮಧ ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಪ್ರತಿಕ್ರಿಯಿಸಿದ್ದು, ಎರಡು ದಿನದ ಹಿಂದೆ ಮಾರ್ವೇಶ್ ಎಂಬಾತನ ಹತ್ಯೆ ಮಾಡಲಾಗಿತ್ತು. ಪ್ರಕರಣ ಸಂಬಂಧ ಆರು ಜನರ ಬಂಧನವಾಗಿದೆ. . ಕಾರ್ತಿಕ್, ಅಭಿಷೇಕ್, ನೆಲ್ಸನ್, ರಾಕಿ, ಡ್ಯಾನಿಯಲ್, ಶ್ರೀಕಾಂತ್ ಬಂಧಿತ ಆರೋಪಿಗಳು. ಇದರಲ್ಲಿ ಕಾರ್ತಿಕ್, ಅಭಿಷೇಕ್ ಹಾಗೂ ನೆಲ್ಸನ್ ಕಾಲೇಜು ಡ್ರಾಪೌಟ್ ಆಗಿದ್ದಾರೆ. ಜೊತೆಗೆ ಈ ಮೂವರ ವಿರುದ್ಧ ಅಪರಾಧ ಪ್ರಕರಣಗಳು ಸಹ ಇವೆ. ಕಾರ್ತಿಕ್ ವಿರುದ್ಧ ರಾಮಮೂರ್ತಿನಗರದಲ್ಲಿ ರೌಡಿ ಪಟ್ಟಿ ಸಹ ಇದೆ. ಆತನ ವಿರುದ್ಧ ಚುನಾವಣೆ ಸಂದರ್ಭದಲ್ಲಿ ಬಾಂಡ್ ಸಹ ಬರೆಸಿಕೊಳ್ಳಲಾಗಿತ್ತು. ಬಂಧಿತರೆಲ್ಲರು 20 ರಿಂದ 21 ವರ್ಷದ ಯುವಕರಾಗಿದ್ದು, ಈ ಕೊಲೆಯಲ್ಲಿ ಭಾಗಿಯಾದ ಅಭಿ, ನೆಲ್ಸನ್ ವಿರುದ್ಧ ಮುಂದಿನ ದಿನಗಳಲ್ಲಿ ರೌಡಿ ಶೀಟ್ ಓಪನ್ ಮಾಡಲಾಗುವುದು ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ತಿಳಿಸಿದರು

ಸದ್ಯ ಮರಣೋತ್ತರ ಪರಿಕ್ಷಾ ವರದಿಗಾಗಿ ಹೆಣ್ಣೂರು ಪೊಲೀಸರು, ಕಾಯುತ್ತಿದ್ದು, ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳಲಿದ್ದಾರೆ.

ಇನ್ನಷ್ಟು ಕ್ರೈಂ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:52 pm, Fri, 28 July 23

ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ಅಧಿವೇಶನದ ಬಗ್ಗೆ ಬೆಂಗಳೂರಲ್ಲಿ ಬ್ರೀಫ್ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ದಾಳಿಗೆ ಬಂದ ಚಿರತೆಯಿಂದ ಬಾಲಕನನ್ನು ರಕ್ಷಿಸಿದ ಶ್ವಾನಗಳು
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ಕೊಕ್ಕನೂರ ಆಂಜನೇಯ ಉತ್ಸವದಲ್ಲಿ ಗಮನ ಸೆಳೆದ ಗರಿ ಗರಿ ನೋಟಿನ‌ ಪಲ್ಲಕ್ಕಿ
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು
ರಥಗಳ ಮೇಲೆ ಬಾಳೆಹಣ್ಣು ಎಸೆದು ಹರಕೆ ತೀರಿಸಿಕೊಂಡ ಭಕ್ತರು