Crime News: ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ; 6 ಆರೋಪಿಗಳ ಬಂಧನ

Bengaluru Crime: ಹಣ ಡ್ರಾ ಆಗದ ಹಿನ್ನೆಲೆ ಅಭಿಷೇಕ್​ನನ್ನು ಬಿಟ್ಟು ತೆರಳಿದ್ದರು. ಪೊಲೀಸರಿಗೆ ಮಾಹಿತಿ ನೀಡದಂತೆ ಬೆದರಿಸಿದ್ದರು. ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಅಭಿಷೇಕ್ ದೂರು ನೀಡಿದ್ದರು. ಅಭಿಷೇಕ್ ದೂರು ಆಧರಿಸಿ 6 ಜನರನ್ನ ಪೊಲೀಸರು ಬಂಧಿಸಿದ್ದಾರೆ.

Crime News: ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ; 6 ಆರೋಪಿಗಳ ಬಂಧನ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on: Nov 22, 2021 | 3:26 PM

ಬೆಂಗಳೂರು: ವಿದ್ಯಾರ್ಥಿಯನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಜ್ವಲ್, ಅನಿಲ್ ಕುಮಾರ್, ದೀಪು ಸೇರಿದಂತೆ 6 ಮಂದಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿ ಅಭಿಷೇಕ್‌ನನ್ನು ಆರೋಪಿಗಳು ಅಪಹರಿಸಿದ್ದರು. ಅಭಿಷೇಕ್‌ ಸ್ನೇಹಿತರೇ ಅಪಹರಣಕ್ಕೆ ಪ್ಲ್ಯಾನ್ ಮಾಡಿದ್ದರು ಎಂದು ತಿಳಿದುಬಂದಿದೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಅಭಿಷೇಕ್‌ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಆತನನ್ನು ದೇವನಹಳ್ಳಿಗೆ ಕರೆದೊಯ್ದಿದ್ದ ಆರೋಪಿಗಳು, ಅಭಿಷೇಕ್ ತಂದೆಗೆ ಕರೆ ಮಾಡಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು.

ಅಭಿಷೇಕ್ ಎಟಿಎಂ ಕಾರ್ಡ್ ಬಳಸಿ 27 ಸಾವಿರ ರೂ. ಡ್ರಾ ಮಾಡಿದ್ದರು. ಹಣ ಡ್ರಾ ಆಗದ ಹಿನ್ನೆಲೆ ಅಭಿಷೇಕ್​ನನ್ನು ಬಿಟ್ಟು ತೆರಳಿದ್ದರು. ಪೊಲೀಸರಿಗೆ ಮಾಹಿತಿ ನೀಡದಂತೆ ಬೆದರಿಸಿದ್ದರು. ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಠಾಣೆಗೆ ಅಭಿಷೇಕ್ ದೂರು ನೀಡಿದ್ದರು. ಅಭಿಷೇಕ್ ದೂರು ಆಧರಿಸಿ 6 ಜನರನ್ನ ಪೊಲೀಸರು ಬಂಧಿಸಿದ್ದಾರೆ.

ಯಾದಗಿರಿ: ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಘಟನೆ ಯಾದಗಿರಿಯ ಹೈದರಾಬಾದ್ ರಸ್ತೆಯಲ್ಲಿ ನಡೆದಿದೆ. ಖುಷ್‌ ಕುಮಾರ (50) ಎಂಬ ವ್ಯಕ್ತಿಯ ಶವ ಪತ್ತೆ ಆಗಿದೆ. ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಹೀರೆಆನೂರು ಗ್ರಾಮದ ಖುಷ್‌ ಕುಮಾರ ಮೃತ ದುರ್ದೈವಿ. ಕೊಲೆ ಮಾಡಿ ರಸ್ತೆಯಲ್ಲಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಶಿವಮೊಗ್ಗ: ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ; ಕುಖ್ಯಾತ ರೌಡಿ ಬಂಧನ ಶಿವಮೊಗ್ಗದಲ್ಲಿ ಉದ್ಯಮಿಗಳಿಗೆ ಜೀವ ಬೆದರಿಕೆ ಹಾಕಿ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗದ ಕುಖ್ಯಾತ ರೌಡಿ ಜಮೀರ್ ಅಲಿಯಾಸ್ ಬಚ್ಚಾನ ಬಂಧನವಾಗಿದೆ. ಶಿವಮೊಗ್ಗದ ಆನೇಕ ಉದ್ಯಮಿಗಳು ಬಚ್ಚಾನ ಭಯದಲ್ಲಿದ್ದರು. ಕುಂಸಿಯ ಸಿಪಿಐ ಅಭಯ್ ಪ್ರಕಾಶ್ ಮತ್ತು ಗ್ರಾಮಾಂತರ ಸಿಪಿಐ ಸಂಜಯ್ ನೇತೃತ್ವದ ವಿಶೇಷ ತಂಡ ಕಾರ್ಯಾಚರಣೆ ನಡೆಸಿದೆ. ಕಳೆದ ಒಂದು ತಿಂಗಳಿನಿಂದ ಕುಖ್ಯಾತ ರೌಡಿ ಹಿಂದೆ ಬಿದ್ದಿದ್ದ ವಿಶೇಷ ಪೊಲೀಸ್ ತಂಡ ಮಹಾರಾಷ್ಟ್ರದ ಮುಂಬಯಿಯಲ್ಲಿ ಬಚ್ಟಾನನ್ನು ಸೆರೆಹಿಡಿದಿದೆ. ಈಗಾಗಲೇ ಇಬ್ಬರು ಬಚ್ಚಾನ ಸಹಚರರು ಇದೇ ವಿಶೇಷ ಪೊಲೀಸ್ ತಂಡದ ಬಲೆಗೆ ಬಿದ್ದಿದ್ದರು. ಬಚ್ಚಾನ ಬಂಧನದಿಂದ ಶಿವಮೊಗ್ಗ ಉದ್ಯಮಿಗಳಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ. ಶಿವಮೊಗ್ಗ, ದಾವಣಗೆರೆ, ಬೆಂಗಳೂರಿನಲ್ಲಿ ಬಚ್ಚಾ ಮೇಲೆ ವಿವಿಧ ಪ್ರಕರಣಗಳು ದಾಖಲು ಮಾಡಲಾಗಿದೆ.

ಗಾಂಜಾ ಮಾರಾಟ: 15 ಆರೋಪಿಗಳ ಬಂಧನ ಗಾಂಜಾ ಮಾರಾಟ ಮಾಡುತ್ತಿದ್ದ 15 ಆರೋಪಿಗಳ ಬಂಧನವಾಗಿದೆ. ಉತ್ತರ ಕನ್ನಡ ಜಿಲ್ಲೆ ಶಿರಸಿ ನ್ಯೂ ಮಾರ್ಕೆಟ್ ಪೊಲೀಸರಿಂದ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಮಾಜಿ ಕಾರ್ಪೊರೇಟರ್ ಶಿವಪ್ಪ ಆತ್ಮಹತ್ಯೆ ಪ್ರಕರಣ ಸಂಬಂಧ ಐವರ ವಿರುದ್ಧ ಎಫ್​ಐಆರ್ ದಾಖಲು ಮಾಡಲಾಗಿದೆ. ಬೆಂಗಳೂರಿನ ಚಂದ್ರಾಲೇಔಟ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ಧನಂಜಯಗೌಡ, ಅರುಣ್ ಕುಮಾರ್, ಅಶೋಕ್ ಕುಮಾರ್ ಸೇರಿ ಐವರ ವಿರುದ್ಧ FIR ದಾಖಲಾಗಿದೆ. ಮೃತ ಶಿವಪ್ಪ ಪತ್ನಿ ಗಾಯತ್ರಿ ಐವರ ವಿರುದ್ಧ ದೂರು ನೀಡಿದ್ದರು. ಅತ್ತಿಗುಪ್ಪೆ ನಿವಾಸದಲ್ಲಿ ಮಾಜಿ ಕಾರ್ಪೊರೇಟರ್ ಆತ್ಮಹತ್ಯೆ ಪ್ರಕರಣ ನಡೆದಿತ್ತು.

ಇದನ್ನೂ ಓದಿ: Shocking News: ದೆವ್ವಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್!

ಇದನ್ನೂ ಓದಿ: Vidyaranyapura heavy rains: ವಿದ್ಯಾರಣ್ಯಪುರ ಅಪಾರ್ಟಮೆಂಟ್​ಗೆ ಜಲಬಂಧನ; ಹಾರ್ಟ್ ಪೇಷೆಂಟ್ ಪರದಾಟ

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಖೋ- ಖೋ ವಿಶ್ವಕಪ್ ಗೆದ್ದು ಬೀಗಿದ ಭಾರತ ಮಹಿಳಾ ಪಡೆ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ