ಪೈಲಟ್‌ನ ನಿಯಂತ್ರಣ ತಪ್ಪಿ ರಸ್ತೆಗಪ್ಪಳಿಸಿದ ಕಿರು ವಿಮಾನ: ಅದೃಷ್ಟವಶಾತ್ ಪೈಲಟ್ ಪ್ರಾಣಾಪಾಯದಿಂದ ಪಾರು
ಪೈಲಟ್‌ನ ನಿಯಂತ್ರಣ ತಪ್ಪಿ ಕಿರು ವಿಮಾನವವೊಂದು ರಸ್ತೆಗೆ ಅಪ್ಪಳಿಸಿರುವಂತಹ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದ ಲಕ್ಷ್ಮಣ ತೀರ್ಥ ನದಿ ಸೇತುವೆ ಬಳಿ ಅಪಘಾತ ಸಂಭವಿಸಿದೆ.
ಕೊಡಗು: ಪೈಲಟ್‌ನ ನಿಯಂತ್ರಣ ತಪ್ಪಿ ಕಿರು ವಿಮಾನವವೊಂದು (plane crashes) ರಸ್ತೆಗೆ ಅಪ್ಪಳಿಸಿರುವಂತಹ ಘಟನೆ ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ನಿಟ್ಟೂರು ಗ್ರಾಮದ ಲಕ್ಷ್ಮಣ ತೀರ್ಥ ನದಿ ಸೇತುವೆ ಬಳಿ ಅಪಘಾತ ಸಂಭವಿಸಿದೆ. 2 ಸೀಟರ್ನ ಕಿರು ವಿಮಾನ ಮುತ್ತಣ್ಣ ಎಂಬುವರಿಗೆ ಸೇರಿದ್ದಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಪೈಲಟ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊನ್ನಂಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಕಡಲ ಅಲೆ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಮೂವರ ಪ್ರವಾಸಿಗರ ರಕ್ಷಣೆ
ಉತ್ತರ ಕನ್ನಡ: ಕಡಲ ಅಲೆ ಸುಳಿಗೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಮೂವರು ಪ್ರವಾಸಿಗರನ್ನು ಕರ್ತವ್ಯನಿರತ ಲೈಫ್ ಗಾರ್ಡ್ಗಳಿಂದ ರಕ್ಷಣೆ ಮಾಡಿರುವಂತಹ ಘಟನೆ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ಘಟನೆ ನಡೆದಿದೆ. ಮಾರುತಿ(20), ಚಂದನಾ(16), ಮಧಸೂದನ್(11) ರಕ್ಷಣೆಗೊಳಗಾದ ಪ್ರವಾಸಿಗರು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ನಿವಾಸಿಗಳಾಗಿದ್ದು, ಕುಟುಂಬ ಸಮೇತ ಗೋಕರ್ಣಕ್ಕೆ ಬಂದಿದ್ದರು. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಬಹುಕೋಟಿ ವಂಚನೆ ಪ್ರಕರಣ: ಕರಣ್ ಗ್ರೂಪ್ ಬಿಲ್ಡರ್ಸ್ & ಡೆವಲಪರ್ಸ್ ಮುಖ್ಯಸ್ಥನನ್ನು ಬಂಧಿಸಿದ ಇಡಿ
ಪ್ರೀತಿಸಲು ನಿರಾಕರಿಸಿದ ಯುವತಿ ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಯುವಕ?
ಕೊಪ್ಪಳ: ಪ್ರೀತಿಸಲು ನಿರಾಕರಿಸಿದ ಯುವತಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ಕುನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ನಡೆದಿದೆ. ವಿದ್ಯಾರ್ಥಿನಿ ಸುಮಾ ಕೊಲೆಯಾದ ಯುವತಿ. ಐಟಿಐ ಓದುತ್ತಿದ್ದ ಪ್ರಕಾಶ ಭಜಂತ್ರಿ ಎಂಬ ಯುವಕ ಸುಮಾಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪ್ರಕಾಶ ಚಾಕು ಹಿಡಿದುಕೊಂಡು ಹೋಗಿದ್ದನ್ನು ಸ್ಥಳೀಯರು ನೋಡಿದ್ದು, ಸುಮಾಳನ್ನು ಕೊಂದು, ತಾನೂ ಚಾಕು ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಕುಕನೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಬೂದಿಯಾದ ಹಾಸಿಗೆ ತಯಾರಿಕಾ ಘಟಕ
ತುಮಕೂರು: ಆಕಸ್ಮಿಕವಾಗಿ ಬೆಂಕಿ ತಗುಲಿ ಹಾಸಿಗೆ ತಯಾರಿಕಾ ಘಟಕ ಸುಟ್ಟು ಬೂದಿಯಾದಂತಹ ಘಟನೆ ಜಿಲ್ಲೆ ತುರುವೇಕೆರೆ ಪಟ್ಟಣದ ಹೊರವಲಯದಲ್ಲಿರುವ ಸೂಳೆಕೆರೆ ಬಳಿ ನಡೆದಿದೆ. ಅಪಾರ ಪ್ರಮಾಣದ ಹತ್ತಿ, ನಾರು, ಯಂತ್ರೋಪಕರಣಗಳು ಭಸ್ಮವಾಗಿವೆ. ವಲೀಭಾಷಾ ಎಂಬುವರಿಗೆ ಹಾಸಿಗೆ ತಯಾರಿಕಾ ಘಟಕ ಸೇರಿದೆ. ಸುಮಾರು 18 ಲಕ್ಷ ರೂ. ಮೌಲ್ಯದ ವಸ್ತುಗಳು ನಷ್ಟ ಸಾಧ್ಯತೆ ಎನ್ನಲಾಗುತ್ತಿದೆ. ತುರುವೇಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂಓದಿ: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿದ ತಾಯಿ: ಸ್ಥಳೀಯರಿಂದ ಓರ್ವ ಹೆಣ್ಣು ಮಗುವಿನ ರಕ್ಷಣೆ
ಬೀದಿ ನಾಯಿಗಳ ದಾಳಿಗೆ ಅಮಾಯಕ ಭಿಕ್ಷುಕಿ ಸಾವು
ಧಾರವಾಡ: ಭಿಕ್ಷೆ ಬೇಡುತ್ತ, ಜನ ಕೊಟ್ಟಿದ್ದನ್ನು ತಿಂದು, ಎಲ್ಲೆಂದರಲ್ಲಿ ಮಲಗಿ ಅನಾಥವಾಗಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಅಮಾನವೀಯ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಕಳೆದ ರಾತ್ರಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿವೆ. ಈ ಪರಿಣಾಮ ಭಿಕ್ಷುಕಿ ಪ್ರಾಣಬಿಟ್ಟಿದ್ದಾರೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 5:54 pm, Sat, 14 January 23