ನೆಲಮಂಗಲ: ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿ ಬಂಧನ

ಒಂಟಿಯಾಗಿ ಹೋಗುತ್ತಿದ್ದ ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾಗಿದ್ದ ಕಲಬುರಗಿ ಜಿಲ್ಲೆಯ ಜೇವರ್ಗಿಯ ಬಸವರಾಜ್​ನನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಗ್ರಾಮಾಂತರದ ಭಾಗದಲ್ಲಿ ಈ ಹಿಂದೆ ಇದೇ ತರಹ ಹಲವು ಪ್ರಕರಣಗಳು ನಡೆದಿವೆ.

ನೆಲಮಂಗಲ: ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿ ಬಂಧನ
ವಿದ್ಯಾರ್ಥಿನಿ, ಆರೋಪಿ ಬಸವರಾಜ್​​
Follow us
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ

Updated on:Aug 11, 2024 | 12:14 PM

ನೆಲಮಂಗಲ, ಆಗಸ್ಟ್​ 11: ಬೆಂಗಳೂರು (Bengaluru) ಹೊರವಲಯದಲ್ಲಿ ಬೀದಿ ಕಾಮಣ್ಣರ ಹಾವಳಿ ಮಿತಿ ಮೀರಿದೆ. ಒಂಟಿಯಾಗಿ ಹೋಗುತ್ತಿದ್ದ ಹೆಣ್ಣುಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸುತ್ತಿರುವ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಿವೆ. ಇದೀಗ ಸೋಲದೇವನಹಳ್ಳಿ ಪೊಲೀಸರು (Police) ಒಂದು ಪ್ರಕರಣ ಭೇದಿಸಿದ್ದು, ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದ ಆರೋಪಿಯ ಹೆಡೆಮುರಿ ಕಟ್ಟಿದ್ದಾರೆ. ಜಿ.ಎನ್.ಎಮ್ ನರ್ಸಿಂಗ್ ಕಾಲೇಜ್ ವಿದ್ಯಾರ್ಥಿನಿಯ (Nursing College Student) ಎದೆಯ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಜೇವರ್ಗಿ ಮೂಲದ ಬಸವರಾಜು (28) ಬಂಧಿತ ಆರೋಪಿ.

21 ವರ್ಷದ ಯುವತಿ ನರ್ಸಿಂಗ್ ಓದಲು ಹೊರ ರಾಜ್ಯದಿಂದ ಬೆಂಗಳೂರಿಗೆ ಬಂದು ನೆಲೆಸಿದ್ದಾಳೆ. 8ನೇ ಮೈಲಿಯ ಅಪೋಲೋ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಬಸವರಾಜ್ ಚಿಕ್ಕಬಾಣಾವಾರದ ಮಾರುತಿನಗರದಲ್ಲಿ ವಾಸವಾಗಿದ್ದಾನೆ. ಜುಲೈ 30 ರಂದು ವಿದ್ಯಾರ್ಥಿನಿ ರಾತ್ರಿ 9 ಗಂಟೆ ಸುಮಾರಿಗೆ ಸಪ್ತಗಿರಿ ಕಾಲೇಜ್ ಬಳಿಯ ಫುಟ್ ಪಾತ್​ನಲ್ಲಿ ನಡೆದುಕೊಂಡು ಹೋಗುತ್ತಿದ್ದಳು.

ಈ ವೇಳೆ KA50-S9668 ನಂಬರ್​ನ ಪಲ್ಸರ್ ಬೈಕ್ ಮೇಲೆ ಬಂದ ಆರೋಪಿ ಬಸವರಾಜ್​ ವಿದ್ಯಾರ್ಥಿನಿಯ ಎದೆ ಭಾಗವನ್ನು ಮುಟ್ಟಿದ್ದಾನೆ. ವಿದ್ಯಾರ್ಥಿನಿ ಜೋರಾಗಿ ಚೀರುತ್ತಿದ್ದಂತೆ ಆರೋಪಿ ಬಸವರಾಜ್​ ಪರಾರಿಯಾಗಿದ್ದಾನೆ. ಬಳಿಕ ವಿದ್ಯಾರ್ಥಿ ಸೋಲದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ.

ಇದನ್ನೂ ಓದಿ: ಚಿಕನ್​​ ಕರಿ ಕೇಳಿದ ಗಂಡನ ಮೆದುಳು ಹೊರಬರುವಂತೆ ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿ

ದೂರಿನ ಆಧಾರದ ಮೇಲೆ ಇನ್ಸ್‌ಪೆಕ್ಟರ್ ಹರಿಯಪ್ಪ ಮಾರ್ಗದರ್ಶನದಲ್ಲಿ ಫೀಲ್ಡ್​​ಗೆ ಇಳಿದ ಪಿಎಸ್ಐ ಧನುಷ್ ಮತ್ತು ಕೃಪಾಲ್ ಪ್ರಕರಣದ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದ ಭಾಗದಲ್ಲಿ ಈ ಹಿಂದೆ ಇದೇ ತರಹ ಹಲವು ಪ್ರಕರಣಗಳು ನಡೆದಿವೆ. ಪೀಣ್ಯಾದಲ್ಲಿ 2, ಬಾಗಲಗುಂಟೆಯಲ್ಲಿ 2, ಸೋಲದೇವನಹಳ್ಳಿಯಲ್ಲಿ 3 ಕಡೆ ಇದೇ ರೀತಿಯ ಪ್ರಕರಣಗಳು ವರದಿಯಾಗಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:45 am, Sun, 11 August 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ