ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ

ಮಗಳು ಮತ್ತು ಅಳಿಯ ನಡುವೆ ಜಗಳ ನಡೆಯುತ್ತಿತ್ತು. ಕೌಟುಂಬಿಕ ಕಲಹ ಸರಿಪಡಿಸಲು ಅಳಿಯನ ಮನೆಗೆ ಅತ್ತೆ ಬಂದಿದ್ದಾರೆ. ಈ ವೇಳೆ ಅಳಿಯ ದೊಣ್ಣೆಯಿಂದ ಅತ್ತೆಗೆ ಥಳಿಸಿದ್ದು, ಗಂಭೀರವಾಗಿ ಗಾಯಗೊಂಡ ಆಕೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಡರಾತ್ರಿ ನಡೆದಿದೆ.

ತುಮಕೂರು: ಅಳಿಯ, ಮಗಳ ಜಗಳ; ಕಲಹ ನಿವಾರಿಸಲು ಅಳಿಯನ ಮನೆಗೆ ಹೋದ ಅತ್ತೆಯ ಕೊಲೆ
ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಅತ್ತೆಯನ್ನೇ ಕೊಲೆ ಮಾಡಿದ ಅಳಿಯImage Credit source: adobe stock
Follow us
ಮಹೇಶ್ ಇ, ಭೂಮನಹಳ್ಳಿ
| Updated By: Rakesh Nayak Manchi

Updated on:Feb 11, 2024 | 8:57 AM

ತುಮಕೂರು, ಫೆ.11: ಮಗಳು ಮತ್ತು ಅಳಿಯನ ನಡುವೆ ನಡೆಯುತ್ತಿದ್ದ ಕೌಟುಂಬಿಕ ಕಲಹವನ್ನು ನಿವಾರಿಸಲು ಹೋದ ಅತ್ತೆಯನ್ನೇ ಅಳಿಯ ದೊಣ್ಣೆಯಿಂದ ಹೊಡೆದು ಕೊಲೆ (Murder) ಮಾಡಿದ ಘಟನೆ ತುಮಕೂರು (Tumkur) ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ (58) ಕೊಲೆಯಾದ ಮಹಿಳೆಯಾಗಿದ್ದು, ಸೈಯದ್ ಸುಹೇಲ್ ಕೊಲೆಗೈದ ಆರೋಪಿಯಾಗಿದ್ದಾನೆ.

ಸೈಯದ್ ಸುಹೇಲ್ ಮತ್ತು ಪತ್ನಿಯ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತಿರುಗಿದ ಹಿನ್ನೆಲೆ ಪತಿ ಗಲಾಟೆ ಮಾಡುತ್ತಿದ್ದಾನೆ ಎಂದು ತುಮಕೂರು ತಾಲೂಕಿನ ಬೆಳಗುಂಬದಲ್ಲಿರುವ ತನ್ನ ತಾಯಿ ಅಶ್ವಿತ್ ಉನ್ನಿಸಾಗೆ ಮಗಳು ಫೋನ್ ಮಾಡಿದ್ದಳು. ಹೀಗಾಗಿ ಕಲಹ ನಿವಾರಿಸಲು ಅಳಿಯನ ಮನೆಗೆ ಬಂದಿದ್ದ ಅಶ್ವಿತ್ ಉನ್ನಿಸಾ ಹೋಗಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಮಹಿಳೆಯ ಬರ್ಬರ ಕೊಲೆ ಮಾಡಿದ ಪ್ರಿಯಕರ ರೂಮ್​ಗೆ ಬೀಗ ಜಡಿದು ಪರಾರಿ

ಈ ವೇಳೆ ಅಳಿಯ ಸೈಯದ್ ಸುಹೇಲ್ ಅತ್ತೆ ಮೇಲೆ ದೊಣ್ಣೆಯಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಕೂಡಲೇ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಉನ್ನಿಸಾ ಮೃತಪಟ್ಟಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 am, Sun, 11 February 24

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ