ಬೆಂಗಳೂರು: ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಮಗ ಚಾಕುವಿನಿಂದ ತಂದೆಗೆ ಇರಿದು ಕೊಲೆ ಮಾಡಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ತಂದೆ-ಮಗ ಇಬ್ಬರೂ ಮೂಲತಃ ಕೇರಳದವರು. ಬನ್ನೇರುಘಟ್ಟ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ಮಗನಿಂದಲೇ ತಂದೆಯ ಬರ್ಬರ ಹತ್ಯೆ
ಬನ್ನೇರುಘಟ್ಟ ಪೊಲೀಸ್​ ಠಾಣೆ
Follow us
ರಾಮು, ಆನೇಕಲ್​
| Updated By: ವಿವೇಕ ಬಿರಾದಾರ

Updated on: Oct 13, 2024 | 12:45 PM

ಆನೇಕಲ್, ಅಕ್ಟೋಬರ್​ 13: ತಂದೆಗೆ ಚಾಕುವಿನಿಂದ ಇರಿದು ಮಗ ಕೊಲೆ ಮಾಡಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಬನ್ನೇರುಘಟ್ಟದ (Bannerghatta) ಜನತಾ ಕಾಲೋನಿಯಲ್ಲಿ ನಡೆದಿದೆ. ವೇಲಾಯುದನ್ (76) ಕೊಲೆಯಾದವರು. ವಿನೋದ್ ಕುಮಾರ್ ಕೊಲೆ ಮಾಡಿದ ಆರೋಪಿ. ಇವರು ಮೂಲತಃ ಕೇರಳದ ಏರಿಮಲೆಯವರು.

ಕಳೆದ ರಾತ್ರಿ ರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ತಂದೆ ಮತ್ತು ಮಗನ ನಡುವೆ ನಡೆದ ಗಲಾಟೆ ನಡೆದಿದೆ. ಆಗ ಮಗ ವಿನೋದ್​ ಮನೆಯಲ್ಲಿದ್ದ ಚಾಕು ತೆಗೆದುಕೊಂಡು ತಂದೆ ವೇಲಾಯುದನ್​​ ಅವರಿಗೆ ಇರಿದು ಕೊಲೆ ಮಾಡಿದ್ದಾನೆ. ವೇಲಾಯುದನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ರಾಮನಗರ: ಸ್ವೀಟಿಯ ಅಕ್ರಮ ಸಂಬಂಧಕ್ಕೆ ಅಡ್ಡಿ, ಮಕ್ಕಳು ಬಲಿ

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಬನ್ನೇರುಘಟ್ಟ ಪೊಲೀಸರು ಮೃತದೇಹವನ್ನ ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಆರೋಪಿ ವಿನೋದ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ