ಮಹಾರಾಷ್ಟ್ರ: ರುಚಿ ರುಚಿಯಾದ ಊಟ ಬಡಿಸಲಿಲ್ಲ ಎಂದು ತಾಯಿಯನ್ನೇ ಕೊಂದ ಮಗ
ಊಟ ರುಚಿ ಇಲ್ಲ ಎಂದು ಮಗನೊಬ್ಬ ತನ್ನ ತಾಯಿಯನ್ನೇ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. ಮುರ್ಬಾದ್ ತಾಲೂಕಿನ ವೇಲು ಗ್ರಾಮದಲ್ಲಿ ಭಾನುವಾರ ಸಂಜೆ ಈ ಘಟನೆ ನಡೆದಿದೆ ಎಂದು ಥಾಣೆ ಗ್ರಾಮಾಂತರ ಪೊಲೀಸ್ ನಿಯಂತ್ರಣ ಕೊಠಡಿಯ ಅಧಿಕಾರಿ ತಿಳಿಸಿದ್ದಾರೆ. ಮನೆಯ ವಿಚಾರವಾಗಿ ಮಹಿಳೆ ಮತ್ತು ಆಕೆಯ ಮಗನ ನಡುವೆ ಆಗಾಗ ಜಗಳ ನಡೆಯುತ್ತಿತ್ತು.

ಭಾನುವಾರ, ವ್ಯಕ್ತಿ ತನ್ನ ತಾಯಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ ಮತ್ತು ಅವರು ರುಚಿಕರವಾದ ಆಹಾರವನ್ನು ಬೇಯಿಸಿ ಬಡಿಸಲಿಲ್ಲ ಎಂದು ದೂರಿದ್ದಾನೆ ಎಂದು ಎಫ್‌ಐಆರ್ ಉಲ್ಲೇಖಿಸಿ ಪೊಲೀಸರು ತಿಳಿಸಿದ್ದಾರೆ.
ಕೋಪದ ಭರದಲ್ಲಿ ಆ ವ್ಯಕ್ತಿ ತನ್ನ ತಾಯಿಯ ಕುತ್ತಿಗೆಯ ಮೇಲೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ, ನಂತರ ತಾಯಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಅಕ್ಕಪಕ್ಕದ ಕೆಲವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಮತ್ತಷ್ಟು ಓದಿ: ಶಿವಮೊಗ್ಗ: ಆರು ವರ್ಷ ಪ್ರೀತಿಸಿ ಕೈಕೊಟ್ಟ ಯುವಕ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ
ಘಟನೆಯ ನಂತರ ಆರೋಪಿ ನಿದ್ರೆ ಮಾತ್ರೆಯನ್ನು ಅಧಿಕ ಪ್ರಮಾಣದಲ್ಲಿ ಸೇವಿಸಿದ್ದರು ಎನ್ನಲಾಗಿದೆ. ಅವರನ್ನು ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದು, ಇನ್ನೂ ಬಂಧಿಸಲಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಸೋಮವಾರ ಪ್ರಕರಣ ದಾಖಲಿಸಲಾಗಿದೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ