ಬೆಂಗಳೂರು: ನಿನಗೆ ಊಟ ಹಾಕಲ್ಲ ಎಂದು ಬೈದಿದ್ದಕ್ಕೆ ತಾಯಿಯನ್ನ ಕೊಂದ ಮಗ

ಶುಕ್ರವಾರ (ಫೆ.02) ಬೆಳ್ಳಂಬೆಳಿಗ್ಗೆ ಬೆಂಗಳೂರಿನ ಕೆ.ಆರ್​​. ಪುರದ ಭೀಮಯ್ಯ ಲೇಔಟ್​​ನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಅದು ಮಗನೆ ಜನ್ಮಕೊಟ್ಟ ತಾಯಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಅಷ್ಟಕ್ಕು ಮಗ ತಾಯಿಯನ್ನು ಕೊಲೆ ಮಾಡಲು ಕಾರಣವೇನು? ಇಲ್ಲಿದೆ ಓದಿ..

ಬೆಂಗಳೂರು: ನಿನಗೆ ಊಟ ಹಾಕಲ್ಲ ಎಂದು ಬೈದಿದ್ದಕ್ಕೆ ತಾಯಿಯನ್ನ ಕೊಂದ ಮಗ
ಕೊಲೆ ಮಾಡಿದ ಯುವಕ
Follow us
Jagadisha B
| Updated By: ವಿವೇಕ ಬಿರಾದಾರ

Updated on:Feb 02, 2024 | 2:45 PM

ಬೆಂಗಳೂರು, ಫೆಬ್ರವರಿ 02: ಮಗ ತಾಯಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಕೆ.ಆರ್​​. ಪುರದ (KR Pura) ಭೀಮಯ್ಯ ಲೇಔಟ್​​ನಲ್ಲಿ ನಡೆದಿದೆ. ನೇತ್ರಾ (40) ಮೃತ ದುರ್ದೈವಿ. ಯುವಕ ಮುಳಬಾಗಿಲಿನಲ್ಲಿ (Mulabagilu) ಡಿಪ್ಲೊಮಾ ವ್ಯಾಸಂಗ ಮಾಡುತ್ತಿದ್ದಾನೆ. ಶುಕ್ರವಾರ (ಫೆ.02) ಬೆಳಿಗ್ಗೆ 7.15ರ ಸುಮಾರಿಗೆ ಯುವಕ ಕಾಲೇಜಿಗೆ ಹೋಗಲು ತಯಾರಾಗುತ್ತಾ, ಅಮ್ಮನಿಗೆ ಊಟ ಬಡಿಸಲು ಹೇಳಿದ್ದಾನೆ.

ಆಗ ನೇತ್ರಾ “ನೀನು ನನ್ನ ಮಗನೇ ಅಲ್ಲ. ನಿನಗೆ ಊಟ ಹಾಕಲ್ಲ” ಎಂದು ಬೈದಿದ್ದಾಳೆ. ಇಷ್ಟಕ್ಕೆ ಕೋಪಗೊಂಡ ಮಗ ತಾಯಿಯ ತಲೆಗೆ ರಾಡ್​ನಿಂದ ಹೊಡೆದಿದ್ದಾನೆ. ಇದರಿಂದ ತೀವ್ರವಾಗಿ ಗಾಯಗೊಂಡ ನೇತ್ರಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಳಿಕ ಯುವಕ ನೇರವಾಗಿ ಪೊಲೀಸ್​ ಠಾಣೆಗೆ ಹೋಗಿ ಶರಣಾಗಿದ್ದಾನೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೆ ಆರ್​ ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ನೇತ್ರಾ ಕೋಲಾರ ಜಿಲ್ಲೆಯ ಮುಳಬಾಗಲು ಮೂಲದ ಎಂದು ಪೊಲೀಸರು ಗುರುತಿಸಿದ್ದಾರೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಉಪ ಪೊಲೀಸ್ ಆಯುಕ್ತ ಡಾ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಮೇಲೆ ಸಹಪಾಠಿಗಳಿಂದಲೇ ಹಲ್ಲೆ, ಕೊಲೆಗೆ ಯತ್ನ

ಹಣಕಾಸಿನ ವಿಚಾರಕ್ಕೆ ವ್ಯಕ್ತಿಯ ಬರ್ಬರ ಕೊಲೆ

ನೆಲಮಂಗಲ: ಹಣಕಾಸಿನ ವಿಚಾರಕ್ಕೆ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.  ಶ್ರೀನಿವಾಸ್ (28) ಕೊಲೆಯಾದ ವ್ಯಕ್ತಿ. ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ನಿವಾಸಿ ಶ್ರೀನಿವಾಸ್ ಲಾಂಗ್​ನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾನೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:31 am, Fri, 2 February 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ