Shocking News: ಅಮ್ಮ ಕ್ಷಮಿಸಿಬಿಡು; ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ

ಅಮ್ಮನನ್ನು ಕೊಲೆ ಮಾಡಿದ ಯುವಕನೊಬ್ಬ ತಾನು ಅಮ್ಮನ ಜೊತೆಗಿರುವ ಫೋಟೋವೊಂದನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾನೆ. ಅದರಲ್ಲಿ ಕ್ಷಮಿಸಿ ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ. ನಿನ್ನನ್ನು ಕೊಲ್ಲುವ ಮೂಲಕ ನಾನು ನನ್ನ ಜೀವನವನ್ನೇ ಕಳೆದುಕೊಂಡಿದ್ದೇನೆ ಎಂದು ಬರೆದುಕೊಂಡಿದ್ದಾನೆ. ಹಾಗಾದರೆ, ಅಷ್ಟೆಲ್ಲ ಪ್ರೀತಿಸುತ್ತಿದ್ದ ತಾಯಿಯನ್ನು ಆತ ಕೊಂದಿದ್ದೇಕೆ?

Shocking News: ಅಮ್ಮ ಕ್ಷಮಿಸಿಬಿಡು; ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ
ತಾಯಿಯನ್ನು ಕೊಂದು ಇನ್​ಸ್ಟಾಗ್ರಾಂನಲ್ಲಿ ಸ್ಟೇಟಸ್ ಹಾಕಿದ ಮಗ
Follow us
ಸುಷ್ಮಾ ಚಕ್ರೆ
|

Updated on: Aug 31, 2024 | 5:37 PM

ಅಹಮದಾಬಾದ್: ಮಗನೇ ತನ್ನ ಹೆತ್ತ ತಾಯಿಯನ್ನು ಕೊಲೆ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಈ ಹೃದಯ ವಿದ್ರಾವಕ ಕಥೆಯನ್ನು ಕೇಳಿದವರೆಲ್ಲರೂ ಬೆಚ್ಚಿಬಿದ್ದಿದ್ದಾರೆ. ಅಮ್ಮ- ಮಗನ ಪರಿಶುದ್ಧ ಸಂಬಂಧವನ್ನು ಛಿದ್ರಗೊಳಿಸಿದ ಈ ಕತೆ ಕೇಳಿದರೆ ಶಾಕ್ ಆಗುವುದು ಗ್ಯಾರಂಟಿ. ಈ ಕೊಲೆ ಮಾಡಿದ ಬಳಿಕ ಆ ಯುವಕ ಅಮ್ಮನೊಂದಿಗಿನ ತನ್ನ ಫೋಟೋವನ್ನು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ನಿನ್ನನ್ನು ಕೊಂದಿದ್ದಕ್ಕೆ ನನ್ನ ಕ್ಷಮಿಸಿ ಬಿಡು ಅಮ್ಮ ಎಂದು ಕ್ಯಾಪ್ಷನ್ ಹಾಕಿದ್ದಾನೆ.

ಇದು ಗುಜರಾತ್‌ನ ಭಯಾನಕ ಕಥೆ. ಕೇಳಿದ ನಂತರ ಎಲ್ಲರನ್ನೂ ಬೆಚ್ಚಿ ಬೀಳಿಸುವ ಹೃದಯ ವಿದ್ರಾವಕ ಕಥೆ. ಗುರುವಾರ ರಾಜ್ ಕೋಟ್​ನಲ್ಲಿ ಮತ್ತೊಂದು ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಇದು ಸಾಮಾನ್ಯ ಕೊಲೆಯಾಗಿರಲಿಲ್ಲ; ಈ ಕೊಲೆಯಲ್ಲಿ ಮನುಷ್ಯರ ಜೊತೆ ಸಂಬಂಧಗಳನ್ನೂ ಕೊಲೆ ಮಾಡಲಾಗಿದೆ. ಮಗನೇ ತಾಯಿಯನ್ನು ಕೊಂದಿರುವ ಕಥೆಯಿದು.

ಮಗ ತನ್ನ ತಾಯಿಯ ಕತ್ತು ಹಿಸುಕಿ ಕೊಂದಿದ್ದು, ಇದಾದ ಬಳಿಕ ಆರೋಪಿ ಮಗ ತನ್ನ ಇನ್ಸ್ಟಾಗ್ರಾಂನಲ್ಲಿ ತನ್ನ ತಾಯಿಯ ಫೋಟೋವನ್ನು ಪೋಸ್ಟ್ ಮಾಡಿದ್ದಾನೆ. ತನ್ನ ಸ್ಟೇಟಸ್ನಲ್ಲಿ “ಕ್ಷಮಿಸಿ ಬಿಡು ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ನಾನು ನಿನ್ನನ್ನು ಕಳೆದುಕೊಂಡಿದ್ದೇನೆ, ಓಂ ಶಾಂತಿ” ಎಂದು ಬರೆದಿದ್ದಾನೆ. ಆರೋಪಿ ಯುವಕ ಈಗ ರಾಜ್‌ಕೋಟ್ ನಗರದ ವಿಶ್ವವಿದ್ಯಾಲಯ ಪೊಲೀಸರ ವಶದಲ್ಲಿದ್ದಾನೆ. ಆದರೆ ಈ ಮಗ ತನ್ನ ತಾಯಿಯನ್ನು ಏಕೆ ಕೊಂದನು? ಈ ಕಾರಣವು ನಿಮಗೆ ಆಶ್ಚರ್ಯವನ್ನುಂಟು ಮಾಡುತ್ತದೆ.

ಇದನ್ನೂ ಓದಿ: Crime News: 9 ವರ್ಷದ ಮಗಳ ಮೇಲೆ ತಂದೆಯಿಂದ ಅತ್ಯಾಚಾರ; ಪೊಲೀಸರೆದುರು ದಾರುಣ ಕತೆ ಬಿಚ್ಚಿಟ್ಟ ತಾಯಿ

ಗುರುವಾರ ರಾಜ್‌ಕೋಟ್‌ನ ಯೂನಿವರ್ಸಿಟಿ ರಸ್ತೆಯಲ್ಲಿರುವ ಸರ್ಕಾರಿ ಕ್ವಾರ್ಟರ್‌ನಲ್ಲಿ ಮಗನೊಬ್ಬ ತನ್ನ ತಾಯಿಯನ್ನು ಕೊಂದಿದ್ದು ಇಡೀ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಕೊಲೆ ನಡೆದ ನಂತರ ಭರತ್ ಎಂಬ ವ್ಯಕ್ತಿ ಪೊಲೀಸರಿಗೆ ಕರೆ ಮಾಡಿ ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು 48 ವರ್ಷದ ಜ್ಯೋತಿಬೆನ್ ಗೋಸಾಯಿ ಅವರ ಶವವನ್ನು ಆಕೆಯ ಮನೆಯಿಂದ ಹೊರತೆಗೆದಿದ್ದಾರೆ. ಆಕೆಯನ್ನು ಕೊಂದ ಮಗ ನಿಲೇಶ್ ಗೋಸಾಯಿಯನ್ನು ವಿಚಾರಣೆಗೊಳಪಡಿಸಿದ್ದು, ಆತ ತಾಯಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ನೀಲೇಶ್ ಮೊದಲು ಚಾಕುವಿನಿಂದ ಕೊಚ್ಚಿ ಕೊಲೆ ಮಾಡಲು ಯತ್ನಿಸಿದ್ದು, ತಾಯಿ ಆ ಚಾಕು ಕಿತ್ತುಕೊಂಡಿದ್ದರಿಂದ ರಕ್ತಸ್ರಾವ ಉಂಟಾಗಿದ್ದು ಬೆಳಕಿಗೆ ಬಂದಿದೆ. ಇದಾದ ಬಳಿಕ ತಾಯಿಯ ಬಾಯಿ ಹಾಗೂ ಗಂಟಲನ್ನು ಕಂಬಳಿಯಿಂದ ಒತ್ತಿ ಹತ್ಯೆ ಮಾಡಿದ್ದಾನೆ.

ಕೊಲೆಯಾದ ನಂತರ ಆತ ತನ್ನ ಸ್ನೇಹಿತ ಭರತ್​ಗೆ ಮಾಹಿತಿ ನೀಡಿದ್ದು, ಆತ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನೀಲೇಶ್​ನ ಮೃತ ತಾಯಿ ಜ್ಯೋತಿಬೆನ್ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥಳಾಗಿದ್ದು, ಆಗಾಗ ಜಗಳ ನಡೆಯುತ್ತಿತ್ತು ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಘಟನೆ ನಡೆದ ದಿನವೂ ಇದೇ ರೀತಿ ನಡೆದಿದ್ದು, ಆರೋಪಿ ನೀಲೇಶ್ ತನ್ನ ತಾಯಿಯನ್ನು ಕೊಂದಿದ್ದಾನೆ.

ಇದನ್ನೂ ಓದಿ: Shocking Video: ಕುಡಿದ ಮತ್ತಿನಲ್ಲಿ ಅಣ್ಣನನ್ನು ಕೊಂದು ಮನೆಯೊಳಗೇ ಹೂತಿಟ್ಟ ತಮ್ಮ; ಶಾಕಿಂಗ್ ವಿಡಿಯೋ ಇಲ್ಲಿದೆ

ಆರೋಪಿಯ ತಾಯಿ ಜ್ಯೋತಿಬೆನ್ ಮತ್ತು ಆತನ ತಂದೆ ಸುಮಾರು 20 ವರ್ಷಗಳ ಹಿಂದೆ ವಿಚ್ಛೇದನ ಪಡೆದಿದ್ದರು. ಹಾಗಾಗಿ ಆರೋಪಿ ನೀಲೇಶ್ ಹಾಗೂ ಆತನ ತಾಯಿ ಇಬ್ಬರೂ ಒಟ್ಟಿಗೆ ವಾಸವಾಗಿದ್ದರು. ಅವರು ತಮ್ಮ ಇತರ ಮಕ್ಕಳೊಂದಿಗೆ ಯಾವುದೇ ಸಂಬಂಧವನ್ನು ಹೊಂದಿರಲಿಲ್ಲ. ಮೃತ ಜ್ಯೋತಿಬೆನ್ ಹಲವು ವರ್ಷಗಳಿಂದ ಮಾನಸಿಕ ಅಸ್ವಸ್ಥತೆಗೆ ಚಿಕಿತ್ಸೆ ಪಡೆಯುತ್ತಿದ್ದರು, ಆದರೆ ಕಳೆದ ಒಂದು ತಿಂಗಳಿನಿಂದ ಅವರು ಔಷಧಿಗಳನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಿದ್ದರು. ಈ ಕೊಲೆಯಾದ ನಂತರ ಆಕೆಯ ಮಗ ಜೈಲು ಸೇರಿದರೆ ಆಕೆಯ ಮಾಜಿ ಪತಿ ಮತ್ತು ಅವರ ಇತರ ಮಕ್ಕಳು ಆ ಶವವನ್ನು ಸ್ವೀಕರಿಸಲು ನಿರಾಕರಿಸಿದರು. ನಮಗೂ ಆಕೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಹೀಗಾಗಿ ಕೊನೆಗೆ ಪೊಲೀಸರೇ ಆ ಮಹಿಳೆಯ ಅಂತಿಮ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
News9 Global Summit: ನ್ಯೂಸ್9 ಗ್ಲೋಬಲ್ ಸಮಿಟ್ ಎರಡನೇ ದಿನದ ಲೈವ್
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ವಿಪಕ್ಷ ನಾಯಕ ಅಶೋಕ ಮಾತಾಡುವ ವೈಖರಿ ವಿಷಾದಕರ: ಚಲುವರಾಯಸ್ವಾಮಿ
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಮಹಾರಾಷ್ಟ್ರದಲ್ಲಿ ಮಹಾವಿಕಾಸ್ ಅಘಾಡಿ ಅಧಿಕಾರಕ್ಕೆ ಬರಲಿದೆ: ಪರಮೇಶ್ವರ್
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
ಫ್ಯಾಷನ್ ಪ್ಯಾಂಟಿಗೆ ಹೊಲಿಗೆ ಹಾಕಿದ್ದಕ್ಕೆ ಯುವಕ ಆತ್ಮಹತ್ಯೆಗೆ ಯತ್ನ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
‘ಸಂಗೊಳ್ಳಿ ರಾಯಣ್ಣ’ ಮರು ಬಿಡುಗಡೆ, ಚಿತ್ರಮಂದಿರ ಖಾಲಿ: ಅಭಿಮಾನಿಗಳ ಆಕ್ರೋಶ
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಯತ್ನಾಳ್ ಮತ್ತು ವಿಜಯೇಂದ್ರ ನಡುವೆ ಪ್ರತಿಷ್ಠೆಯ ಹೋರಾಟ ನಡೆದಿದೆ: ಪಾಟೀಲ್
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಸರ್ಕಾರದ ಬಗ್ಗೆ ಪರಮೇಶ್ವರ್ ಯಾವ ಅರ್ಥದಲ್ಲಿ ಮಾತಾಡಿದ್ದು ಗೊತ್ತಿಲ್ಲ:ಡಿಕೆಶಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ
ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ