AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಶಾಂತ್ ಹತ್ಯೆ ಪ್ರಕರಣ: ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ಆದೇಶಿಸಿದ ದಕ್ಷಿಣ ವಲಯದ ಐಜಿಪಿ

ಹಾಸನದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಂಡಿದೆ ಎಂಬ ಆರೋಪ ಸಂಬಂಧ ಪೆನ್ಷನ್ ಮೊಹಲ್ಲಾ ಇನ್ಸ್​ಪೆಕ್ಟರ್​ ವಿರುದ್ಧ ತನಿಖೆ ನಡೆಸುವಂತೆ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಆದೇಶ ಹೊರಡಿಸಿದ್ದಾರೆ.

ಪ್ರಶಾಂತ್ ಹತ್ಯೆ ಪ್ರಕರಣ: ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ಆದೇಶಿಸಿದ ದಕ್ಷಿಣ ವಲಯದ ಐಜಿಪಿ
ನಗರ ಸಭೆ ಸದಸ್ಯ ಪ್ರಶಾಂತ್
TV9 Web
| Updated By: Rakesh Nayak Manchi|

Updated on:Jun 02, 2022 | 10:21 PM

Share

ಹಾಸನ: ಹಾಸನದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಂಡಿದೆ ಎಂಬ ಆರೋಪ ಸಂಬಂಧ ಪೆನ್ಷನ್ ಮೊಹಲ್ಲಾ ಇನ್ಸ್​ಪೆಕ್ಟರ್​ ವಿರುದ್ಧ ತನಿಖೆ ನಡೆಸುವಂತೆ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಆದೇಶ ಹೊರಡಿಸಿದ್ದಾರೆ. ನಗರಸಭೆ ಸದಸ್ಯ ಪ್ರಶಾಂತ್​ ನಾಗರಾಜ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿತ್ತು. ಈ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅದರಂತೆ ಎಸ್​ಪಿ ಶ್ರೀನಿವಾಸ್ ಗೌಡರ ವರದಿ ಆಧರಿಸಿ ದಕ್ಷಿಣ ವಲಯದ ಐಜಿಪಿ ತನಿಖೆಗೆ ಆದೇಶಿಸಿದ್ದಾರೆ

ಇದನ್ನೂ ಓದಿ: ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಂದ ಲೋಪವಾಗಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದ ಮಾಜಿ ಸಚಿವ ರೇವಣ್ಣ

ಹಾಸನಹಾಸನ ನಗರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣ ತಪ್ಪಿರುವ ಹಿನ್ನೆಲೆ ಇನ್ಸ್​​ಪೆಕ್ಟರ್​ ರೇಣುಕಾ ಪ್ರಸಾದ್ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ಗಂಭೀರ ಆರೋಪ ಮಾಡಿದ್ದರು. ಇನ್ಸ್ಪೆಕ್ಟರ್ ರೇಣುಕಾ ಪ್ರಸಾದ್ ತಮ್ಮ ವ್ಯಾಪ್ತಿಯಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುವ ಚರ್ಚೆ ಬಗ್ಗೆ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಗರ ಸಭೆ ಸದಸ್ಯ ಪ್ರಶಾಂತ್ ನಾಗರಾಜ ರನ್ನ ಕಿಡಿಗೇಡಿಗಳು ಕೊಲೆ ಮಾಡಿದ್ದುಸಿಪಿಐ ಮುನ್ನೆಚ್ಚರಿಕೆ ವಹಿಸಿದ್ದರೆ ಹತ್ಯೆಯನ್ನು ತಡೆಯಬಹುದಿತ್ತು, ಕರ್ತವ್ಯ ಲೋಪದ ಕಾರಣದಿಂದ ಕೊಲೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಎಂದು ಉಲ್ಲೇಖಿಸಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ದಾಖಲಾತಿಗಳೊಂದಿಗೆ ಶೀಘ್ರವಾಗಿ ವರದಿ ನೀಡುವಂತೆ ಎಸ್​ಪಿ ಶ್ರೀನಿವಾಸ್ ಗೌಡರ ಅವರಿಗೆ ಆದೇಶಿಸಲಾಗಿದೆ.

ಇದನ್ನೂ ಓದಿ: ಪ್ರಶಾಂತ್ ಕೊಲೆ ಬೆಳಕಿರುವಾಗ ಮತ್ತು ಜನವಸತಿ ಪ್ರದೇಶದಲ್ಲಿ ನಡೆದರೂ ಯಾರಿಗೂ ಅದು ಗೊತ್ತಾಗಿಲ್ಲ!

ಬಿಟ್ಟಗೌಡನಹಳ್ಳಿ ಸ್ಮಶಾನದಲ್ಲಿ ಪ್ರಶಾಂತ್ ಅಂತ್ಯಸಂಸ್ಕಾರ

ಕಿಡಿಗೇಡಿಗಳಿಂದ ಹತ್ಯೆಯಾದ ಹಾಸನ ನಗರಸಭೆಯ 16ನೇ ವಾರ್ಡ್ ಜೆಡಿಎಸ್ ಸದಸ್ಯ ಪ್ರಶಾಂತ್ ಮೃತದೇಹ ಬಿಟ್ಟಗೌಡನಹಳ್ಳಿ ಸ್ಮಶಾನದಲ್ಲಿ ವಿಧಿವಿಧಾಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಪ್ರಶಾಂತ್ ಮೃತದೇಹವನ್ನು ಮೆರವಣಿಗೆ ನಡೆಸಲಾಗಿದ್ದು, ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ನಿನ್ನೆ ಸಂಜೆ ಬೈಕ್​ನಲ್ಲಿ ಹೋಗುತ್ತಿದ್ದಾಗ ನಗರದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪ್ರಶಾಂತ್ ಅವರನ್ನು ಹತ್ಯೆ ಮಾಡಲಾಗಿತ್ತು.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Thu, 2 June 22

ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ನಮ್ಮ ನಿರ್ಮಾಣದ ಎರಡು ಸಿನಿಮಾಗಳ ಶೂಟಿಂಗ್ ನಡೆಯುತ್ತಿದೆ: ಹೆಬ್ಬಾಳ್ಕರ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್
ಮೈಸೂರು ಮಹಾರಾಜರಿಗಿಂತಲೂ ಸಿದ್ದರಾಮಯ್ಯ ಹೆಚ್ಚು:ತಂದೆಗೆ ಮಗ ಬಹುಪರಾಕ್