ಹಾಸನ: ಹಾಸನದಲ್ಲಿ ಕಾನೂನು ಸುವ್ಯವಸ್ಥೆ ವಿಫಲಗೊಂಡಿದೆ ಎಂಬ ಆರೋಪ ಸಂಬಂಧ ಪೆನ್ಷನ್ ಮೊಹಲ್ಲಾ ಇನ್ಸ್ಪೆಕ್ಟರ್ ವಿರುದ್ಧ ತನಿಖೆ ನಡೆಸುವಂತೆ ದಕ್ಷಿಣ ವಲಯ ಐಜಿಪಿ ಪ್ರವೀಣ್ ಮಧುಕರ್ ಪವಾರ್ ಅವರು ಆದೇಶ ಹೊರಡಿಸಿದ್ದಾರೆ. ನಗರಸಭೆ ಸದಸ್ಯ ಪ್ರಶಾಂತ್ ನಾಗರಾಜ್ ಅವರನ್ನು ದುಷ್ಕರ್ಮಿಗಳು ಹತ್ಯೆಗೈದು ಪರಾರಿಯಾಗಿತ್ತು. ಈ ಸಂಬಂಧ ಇಬ್ಬರು ಪೊಲೀಸ್ ಅಧಿಕಾರಿಗಳು ಲೋಪ ಎಸಗಿದ್ದಾರೆ ಎಂದು ಗಂಭೀರ ಆರೋಪ ಮಾಡಲಾಗಿತ್ತು. ಅದರಂತೆ ಎಸ್ಪಿ ಶ್ರೀನಿವಾಸ್ ಗೌಡರ ವರದಿ ಆಧರಿಸಿ ದಕ್ಷಿಣ ವಲಯದ ಐಜಿಪಿ ತನಿಖೆಗೆ ಆದೇಶಿಸಿದ್ದಾರೆ.
ಇದನ್ನೂ ಓದಿ: ಪ್ರಶಾಂತ್ ನಾಗರಾಜ್ ಹತ್ಯೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಂದ ಲೋಪವಾಗಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ ಎಂದ ಮಾಜಿ ಸಚಿವ ರೇವಣ್ಣ
ಹಾಸನ– ಹಾಸನ ನಗರ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ನಿಯಂತ್ರಣ ತಪ್ಪಿರುವ ಹಿನ್ನೆಲೆ ಇನ್ಸ್ಪೆಕ್ಟರ್ ರೇಣುಕಾ ಪ್ರಸಾದ್ ವಿರುದ್ಧ ಮಾಜಿ ಸಚಿವ ಎಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ಗಂಭೀರ ಆರೋಪ ಮಾಡಿದ್ದರು. ಇನ್ಸ್ಪೆಕ್ಟರ್ ರೇಣುಕಾ ಪ್ರಸಾದ್ ತಮ್ಮ ವ್ಯಾಪ್ತಿಯಲ್ಲಿ ಒಂದು ಪಕ್ಷದ ಪರವಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುವ ಚರ್ಚೆ ಬಗ್ಗೆ ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ನಗರ ಸಭೆ ಸದಸ್ಯ ಪ್ರಶಾಂತ್ ನಾಗರಾಜ ರನ್ನ ಕಿಡಿಗೇಡಿಗಳು ಕೊಲೆ ಮಾಡಿದ್ದು, ಸಿಪಿಐ ಮುನ್ನೆಚ್ಚರಿಕೆ ವಹಿಸಿದ್ದರೆ ಹತ್ಯೆಯನ್ನು ತಡೆಯಬಹುದಿತ್ತು, ಕರ್ತವ್ಯ ಲೋಪದ ಕಾರಣದಿಂದ ಕೊಲೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿ ಎಂದು ಉಲ್ಲೇಖಿಸಲಾಗಿದ್ದು, ಈ ಬಗ್ಗೆ ಸೂಕ್ತ ತನಿಖೆ ನಡೆಸಿ ದಾಖಲಾತಿಗಳೊಂದಿಗೆ ಶೀಘ್ರವಾಗಿ ವರದಿ ನೀಡುವಂತೆ ಎಸ್ಪಿ ಶ್ರೀನಿವಾಸ್ ಗೌಡರ ಅವರಿಗೆ ಆದೇಶಿಸಲಾಗಿದೆ.
ಇದನ್ನೂ ಓದಿ: ಪ್ರಶಾಂತ್ ಕೊಲೆ ಬೆಳಕಿರುವಾಗ ಮತ್ತು ಜನವಸತಿ ಪ್ರದೇಶದಲ್ಲಿ ನಡೆದರೂ ಯಾರಿಗೂ ಅದು ಗೊತ್ತಾಗಿಲ್ಲ!
ಬಿಟ್ಟಗೌಡನಹಳ್ಳಿ ಸ್ಮಶಾನದಲ್ಲಿ ಪ್ರಶಾಂತ್ ಅಂತ್ಯಸಂಸ್ಕಾರ
ಕಿಡಿಗೇಡಿಗಳಿಂದ ಹತ್ಯೆಯಾದ ಹಾಸನ ನಗರಸಭೆಯ 16ನೇ ವಾರ್ಡ್ ಜೆಡಿಎಸ್ ಸದಸ್ಯ ಪ್ರಶಾಂತ್ ಮೃತದೇಹ ಬಿಟ್ಟಗೌಡನಹಳ್ಳಿ ಸ್ಮಶಾನದಲ್ಲಿ ವಿಧಿವಿಧಾಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಪ್ರಶಾಂತ್ ಮೃತದೇಹವನ್ನು ಮೆರವಣಿಗೆ ನಡೆಸಲಾಗಿದ್ದು, ಬಳಿಕ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ನಿನ್ನೆ ಸಂಜೆ ಬೈಕ್ನಲ್ಲಿ ಹೋಗುತ್ತಿದ್ದಾಗ ನಗರದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಪ್ರಶಾಂತ್ ಅವರನ್ನು ಹತ್ಯೆ ಮಾಡಲಾಗಿತ್ತು.
ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:21 pm, Thu, 2 June 22