ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಿಶೇಷ ಅಭಿಯೋಜಕಿ

ಜಿಲ್ಲೆಯಲ್ಲಿ ಲಂಚ ಸ್ವೀಕರಿಸುವಾಗ ಸರ್ಕಾರಿ ವಿಶೇಷ ಅಭಿಯೋಜಕಿ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ನಡೆದಿದೆ.

ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ವಿಶೇಷ ಅಭಿಯೋಜಕಿ
ಸರ್ಕಾರಿ ವಿಶೇಷ ಅಭಿಯೋಜಕಿ ರೇಖಾ ಎಸ್.ಕೊಟ್ರಗೌಡರ
Edited By:

Updated on: Feb 05, 2023 | 5:48 PM

ದಾವಣಗೆರೆ: ಜಿಲ್ಲೆಯಲ್ಲಿ ಲಂಚ (bribe) ಸ್ವೀಕರಿಸುವಾಗ ಸರ್ಕಾರಿ ವಿಶೇಷ ಅಭಿಯೋಜಕಿ (Special public prosecutor) ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ದಾವಣಗೆರೆಯ ಪಿಜೆ ಬಡಾವಣೆಯಲ್ಲಿ ನಡೆದಿದೆ. ರೇಖಾ ಕೊಟ್ರಗೌಡರ ಲೋಕಾಯುಕ್ತ ಬಲೆಗೆ ಬಿದ್ದ ಅಭಿಯೋಜಕಿ. ಲೋಕಾಯುಕ್ತ SP ಎಂ.ಎಸ್.ಕೌಲಾಪುರೆ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿದ್ದು, ದಾಳಿ ವೇಳೆ ರೇಖಾ ಪಡೆದಿದ್ದ ಖಾಲಿ ಚೆಕ್‌ ಮತ್ತು 1.87 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ. ಮದನ್ ಪೋಕ್ಸೋ ಪ್ರಕರಣದ ಆರೋಪಿಯಾಗಿದ್ದು, ಕೇಸ್​ನಲ್ಲಿ ಅನುಕೂಲ ಮಾಡುವುದಾಗಿ ಹೇಳಿ ಎಸ್​ಪಿಪಿ ರೇಖಾ ಕೊಟ್ರಗೌಡರ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈಗಾಗಲೇ 1.13 ಲಕ್ಷ ಲಂಚ ಪಡೆದಿದ್ದರು. ಆದರೆ ಇಂದು ಬಾಕಿ 1.87 ಲಕ್ಷ ರೂ. ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದಿದ್ದು, ರೇಖಾ ಕೊಟ್ರಗೌಡರನ್ನು ವಶಕ್ಕೆ ಪಡೆಯಲಾಗಿದೆ.

ಸೆಲ್ಫಿ ವಿಡಿಯೋ ಮಾಡಿಟ್ಟು ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ರಾಮನಗರ: ಸಾಲಗಾರರ ಕಿರುಕುಳದಿಂದ ಬೇಸತ್ತು ಸೆಲ್ಫಿ ವಿಡಿಯೋ ಮಾಡಿಟ್ಟು ನೇಣುಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜಿಲ್ಲೆಯ ವಾಸುದೇವಪುರ ಗ್ರಾಮದಲ್ಲಿ ನಡೆದಿದೆ. ಶಿವರಾಜ್(35) ಆತ್ಮಹತ್ಯೆ ಮಾಡಿಕೊಂಡ  ವ್ಯಕ್ತಿ. ಸ್ನೇಹಿತರ ಬಳಿ ಮೀಟರ್ ಬಡ್ಡಿಗೆ ಸಾಲ ಪಡೆದಿದ್ದ ಮೃತ ಶಿವರಾಜ್, ಸಾಲದ ಹಣ ವಾಪಸ್ ನೀಡದಿದ್ದಕ್ಕೆ ತೀವ್ರ ಕಿರುಕುಳ ನೀಡಲಾಗಿದೆ. ಕಳೆದ 3 ದಿನಗಳ ಹಿಂದೆ ಆತ್ಮಹತ್ಯೆ‌ ಮಾಡಿಕೊಂಡಿದ್ದು, ಇದೀಗ ಸೆಲ್ಫಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓರ್ವ ಆರೋಪಿಯನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಶಾಸಕ ಹ್ಯಾರಿಸ್ ಮತ್ತು ಬೆಂಬಲಿಗರ ವಿರುದ್ಧ ಬೆದರಿಕೆ ಆರೋಪ: ಆಪ್ ಮುಖಂಡರಿಂದ ದೂರು

ಜೈಲರ್ ನಿರ್ಲಕ್ಷ್ಯದಿಂದ ವಿಚಾರಣಾಧೀನ ಕೈದಿ ಪರಾರಿ: ಶಿರಸಿ ಪೊಲೀಸರಿಂದ ಕೈದಿಗಾಗಿ ಶೋಧ

ಕಾರವಾರ: ಜೈಲರ್ ನಿರ್ಲಕ್ಷ್ಯದಿಂದ ವಿಚಾರಣಾಧೀನ ಕೈದಿ ಪರಾರಿಯಾಗಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕಾರಾಗೃಹದಲ್ಲಿ ನಡೆದಿದೆ. ಯಲ್ಲಾಪುರದ ಪ್ರಕಾಶ್ ಸಿದ್ದಿ ಕಾರಾಗೃಹದಿಂದ ಪರಾರಿಯಾಗಿರುವ ವಿಚಾರಣಾಧೀನ ಕೈದಿ. ದರೋಡೆ ಪ್ರಕರಣದಲ್ಲಿ ಪ್ರಕಾಶ್‌ ಸಿದ್ದಿ ಜೈಲುಪಾಲಾಗಿದ್ದ. ವಿಚಾರಣೆ ನಡೆಯುತ್ತಿದ್ರೂ ಜೈಲರ್ ಮಂಜು ಜೈಲಿನಿಂದ ಹೊರಕ್ಕೆ ಕಳಿಸಿದ್ದರು. ಜೈಲರ್ ಮಂಜು ನಿರ್ಲಕ್ಷ್ಯದಿಂದ ಕೈದಿ ಪರಾರಿಯಾಗಿದ್ದಾನೆ. ನಾಪತ್ತೆಯಾಗಿರುವ ಕೈದಿಗಾಗಿ ಶಿರಸಿ ಪೊಲೀಸರಿಂದ ಶೋಧ ನಡೆಯುತ್ತಿದ್ದು, ಶಿರಸಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪ: ಬಿಜೆಪಿ MLC ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ಲೇಔಟ್​ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಆರೋಪದಡಿ ಬಿಜೆಪಿ MLC ಆರ್.ಶಂಕರ್ ಪತ್ನಿ ಮತ್ತು ಪುತ್ರನ ವಿರುದ್ಧ ಇಂದಿರಾನಗರ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ. ಕಂಪನಿ ಪಾರ್ಟನರ್ ಆಗಿರುವ ಪ್ರಭಾವತಿ ಎಂಬುವವರಿಂದ ದೂರು ನೀಡಲಾಗಿದೆ. ಪಾರ್ಟನರ್​​ಗೆ ವಂಚಿಸಿ ಅಕ್ರಮವಾಗಿ 23 ಸೈಟ್​ ಮಾರಾಟ ಆರೋಪ ಕೇಳಿಬಂದಿದೆ.  ಆರ್.ಶಂಕರ್ ಪುತ್ರ, ಪತ್ನಿ ಸೇರಿ ಒಟ್ಟು ನಾಲ್ವರು ಕಂಪನಿ ಆರಂಭಿಸಿದ್ದು, ಕಂಪನಿ ಹೆಸರಿನಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು.

ಇದನ್ನೂ ಓದಿ: Crime News: ಪೊಲೀಸ್ ಜೀಪ್​ನಲ್ಲಿ ಕರೆದೊಯ್ಯುವಾಗ ಸಬ್ ಇನ್​ಸ್ಪೆಕ್ಟರ್ ಕಿವಿ ಕಚ್ಚಿದ ಆಸಾಮಿ!

ಲೇಔಟ್ ನಿರ್ಮಾಣದ ವೇಳೆ ನಾಲ್ವರೂ ಪಾರ್ಟನರ್​ಗಳು ಒಪ್ಪಂದ ಮಾಡಿಕೊಂಡಿದ್ದು, ಸೈಟ್ ಹಂಚಿಕೆ ವೇಳೆ ಎಲ್ಲರ ಸಹಿ ಕಡ್ಡಾಯವೆಂದು ಅಗ್ರಿಮೆಂಟ್ ಮಾಡಲಾಗಿದೆ. ಆದರೆ ಇದೀಗ ಪ್ರಭಾವತಿ ಕೈಬಿಟ್ಟು ಮೂವರಿಂದ ಸೈಟ್ ಮಾರಾಟ ಮಾಡಿದ್ದು, ಅಕ್ರಮವಾಗಿ ಬ್ಯಾಂಕ್​ನಲ್ಲಿ ಖಾತೆ ತೆಗೆದು ವಂಚಿಸಿರುವುದಾಗಿ ಎಫ್​ಐಆರ್​ನಲ್ಲಿ ಉಲ್ಲೇಖಿಸಲಾಗಿದೆ. ಮೂವರ ಮೇಲೆ ಕೇಸ್ ದಾಖಲಿಸದ ಇಂದಿರಾನಗರ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

TV9 Web

TV9 Kannada

Read More
Loading...
Unable to load recommendations.
Follow Us