ರಾಯಚೂರು: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ SSLC ವಿದ್ಯಾರ್ಥಿನಿ ಆತ್ಮಹತ್ಯೆ
ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 10 ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ರಾಯಚೂರು, ಆ.24: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ (Kittur Rani Channamma Residential School) ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು 10 ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಡಿಎಸ್ಎಸ್ ಮುಖಂಡನ ಬರ್ಬರ ಕೊಲೆ; ಹತ್ಯೆಗೆ ಕಾರಣವಾಯಿತೇ ಹಳೇ ದ್ವೇಷ?
ಚಿಕ್ಕಬಳ್ಳಾಫುರ, ಆ.24: ದಲಿತ ಸಂಘರ್ಷ ಸಮಿತಿ ಮುಖಂಡನನ್ನು ಮಚ್ಚಿನಿಂದ ಹಲ್ಲೆ ಮಾಡಿ ಬರ್ಬರ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಫುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಭೈರಗಾನಹಳ್ಳಿ ಗ್ರಾಮದಲ್ಲಿ ನಡೆದಿದೆ. ನಾರಾಯಣಸ್ವಾಮಿ ಮೃತ ವ್ಯಕ್ತಿ. ಇವರು ಶಿಡ್ಲಘಟ್ಟ ನಗರದಿಂದ ಸ್ವಗ್ರಾಮಕ್ಕೆ ಹೋಗುತ್ತಿದ್ದಾಗ ಹತ್ಯೆ ಮಾಡಲಾಗಿದ್ದು, ಹಳೆ ದ್ವೇಷದ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾರಾಯಣಸ್ವಾಮಿ ಹತ್ಯೆಯಾದ ಸ್ವಲ್ಪ ದೂರದಲ್ಲಿಯೇ ಆತ ಚಲಿಸುತ್ತಿದ್ದ ಓಮಿನಿ ಕಾರು ರಸ್ತೆ ಬದಿ ನಿಂತಿದೆ. ಮೃತ ವ್ಯಕ್ತಿ ರಿಯಲ್ ಎಸ್ಟೇಟ್ ಹಾಗೂ ದಲಿತ ಸಂಘಟನೆಯಲ್ಲಿ ಸಕ್ರಿಯನಾಗಿದ್ದರು. ಇದೀಗ ಸ್ಥಳಕ್ಕೆ ಚಿಕ್ಕಬಳ್ಳಾಫುರ ಎಸ್ಪಿ ಡಿ.ಎಲ್ ನಾಗೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
ರಾಯಚೂರು, ಆ.24: ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಓರ್ವ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬಿ.ಆರ್ ಗುಂಡಾ ಗ್ರಾಮದ ವಿದ್ಯಾರ್ಥಿನಿ ಪವಿತ್ರಾ(15) ಮೃತ ಬಾಲಕಿ. ಇವರು 10 ನೇ ತರಗತಿ ಓದುತ್ತಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆ, ಶಾಲೆಗೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಅಪ್ರಾಪ್ತೆ, ತಾಯಿ ಮೇಲೆ ಚರ್ಚ್ ಫಾದರ್ ಅತ್ಯಾಚಾರಕ್ಕೆ ಯತ್ನ ಆರೋಪ; ಭಜರಂಗದಳ ಕಾರ್ಯಕರ್ತರಿಂದ ಧರಣಿ
ಶಿವಮೊಗ್ಗ: ಅಪ್ರಾಪ್ತೆ, ತಾಯಿ ಮೇಲೆ ದೇವರ ನಾಮ ಹೇಳಿಕೊಡುತ್ತೇನೆ ಎಂದು ಆಗಸ್ಟ್ 21ರಂದು ಶಿವಮೊಗ್ಗದ ಸಾಗರ ರಸ್ತೆಯ ಹಕ್ಕಿಪಿಕ್ಕಿ ಕ್ಯಾಂಪ್‌ನಲ್ಲಿ ಫಾದರ್ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿತ್ತು. ಬಳಿಕ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಇದೀಗ ಆರೋಪಿಯನ್ನು ಬಂಧಿಸುವಂತೆ ಭಜರಂಗದಳ ಕಾರ್ಯಕರ್ತರು ಶಿವಮೊಗ್ಗ ನಗರದ ಆಲ್ಕೋಳ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ