ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ನಂತರ ಹಲವೆಡೆ ವಿದ್ಯುತ್ ದರದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಕೆಲವು ಗ್ರಾಹಕರಿಗೆ ಸಾವಿರಾರು ರೂಪಾಯಿ ಬಿಲ್ ಬಂದಿದ್ದು, ಲಕ್ಷಾಂತರ ರೂಪಾಯಿ ಬಿಲ್ ನೀಡಿದ್ದೂ ಇದೆ. ಇದೇ ರೀತಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ಕೊಡಗಿನಲ್ಲಿ ಬಿಲ್ ಕಲೆಕ್ಟರ್​ಗೆ ಚಾಕು ಇರಿಯಲಾಗಿದೆ.

ಕೊಡಗು: ವಿದ್ಯುತ್ ಬಿಲ್‌ನಲ್ಲಿ ವ್ಯತ್ಯಾಸ, ಬಿಲ್ ಕಲೆಕ್ಟರ್​ಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Follow us
| Updated By: Rakesh Nayak Manchi

Updated on: Jul 13, 2023 | 8:40 PM

ಕೊಡಗು: ವಿದ್ಯುತ್​ ಬಿಲ್​ನಲ್ಲಿ ವ್ಯತ್ಯಾಸ ಬಂದ ಹಿನ್ನೆಲೆ ಮಾತಿನ ಚಕಮಕಿ ನಡೆದು ಬಿಲ್ ಕಲೆಕ್ಟರ್​​ಗೆ ಚಾಕುವಿನಿಂದ ಇರಿದ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಜಂಬೂರು ಬಾಣೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ ನಂತರ ಹಲವೆಡೆ ವಿದ್ಯುತ್ ದರದಲ್ಲಿ ಭಾರೀ ವ್ಯತ್ಯಾಸಗಳು ಕಂಡುಬರುತ್ತಿವೆ. ಎಷ್ಟರ ಮಟ್ಟಿಗೆ ಬಿಲ್​ನಲ್ಲಿ ವ್ಯತ್ಯಾಸಗಳು ಬರುತ್ತಿವೆ ಎಂದರೆ ಗ್ರಾಹಕರು ಕೂಡ ದಿಗ್ಭ್ರಮೆಗೊಳ್ಳುತ್ತಿದ್ದಾರೆ. ಕೆಲವರಿಗೆ ನೂರಾರು ರೂಪಾಯಿ, ಇನ್ನು ಕೆಲವರಿಗೆ ಸಾವಿರಾರು ರೂಪಾಯಿ ವ್ಯತ್ಯಾಸಗಳು ಕಂಡುಬಂದಿದ್ದು, ಬಿಲ್ ಕಲೆಕ್ಟರ್ ಲಕ್ಷಾಂತರ ರೂಪಾಯಿ ಬಿಲ್ ನೀಡಿದ್ದೂ ಇದೆ. ಇದೀಗ ಜಂಬೂರು ಬಾಣೆಯಲ್ಲಿ ಬಿಲ್​ನಲ್ಲಿ ವ್ಯತ್ಯಾಸ ಬಂದಿದೆ ಎಂದು ಗ್ರಾಹಕ ಬಿಲ್ ಕಲೆಕ್ಟರ್​ ಜೊತೆ ಮಾತಿಗೆ ಇಳಿದಿದ್ದಾನೆ. ಇದು ತಾರಕಕ್ಕೇರಿ ಬಿಲ್ ಕಲೆಕ್ಟರ್​​ಗೆ ಚಾಕುವಿನಿಂದ ಇರಿಯಲಾಗಿದೆ.

ಇದನ್ನೂ ಓದಿ: ಕೋಲಾರ ಪೊಲೀಸರಿಗೆ ಕೊಲೆಗಾರನ ಬಗ್ಗೆ ಟಿಪ್ಸ್ ಕೊಟ್ಟಿದ್ದು ಚಿಪ್ಸ್ ಪ್ಯಾಕೆಟ್, ಆದರೆ ಅದನ್ನು ಮೂವರು ಖರೀದಿಸಿದ್ದರು! ಕೊನೆಗೆ ಹಂತಕನ ಹಿಡಿದ್ದಿದ್ದು ಹೇಗೆ?

ಘಟನೆಯಲ್ಲಿ ಗಾಯಗೊಂಡ ಬಿಲ್​ ಕಲೆಕ್ಟರ್​ ಪ್ರಶಾಂತ್​ (30) ಎಂಬವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡ ಮಾದಾಪುರ ಠಾಣಾ ಪೊಲೀಸರು ಆರೋಪಿ ರತೀಶ್ (35) ಎಂಬಾತನನ್ನು ಬಂಧಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?