Sindhnur: 74ನೇ ಗಣರಾಜ್ಯೋತ್ಸವ ಹಿನ್ನೆಲೆ ನೃತ್ಯ ಮಾಡುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದ ಸ್ಟಾಫ್ ನರ್ಸ್

TV9kannada Web Team

TV9kannada Web Team | Edited By: ಗಂಗಾಧರ್​ ಬ. ಸಾಬೋಜಿ

Updated on: Jan 26, 2023 | 3:33 PM

ನೃತ್ಯ ಮಾಡುವಾಗ ಹೃದಯಾಘಾತದಿಂದ ಸ್ಟಾಫ್ ನರ್ಸ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ.

Sindhnur: 74ನೇ ಗಣರಾಜ್ಯೋತ್ಸವ ಹಿನ್ನೆಲೆ ನೃತ್ಯ ಮಾಡುವಾಗ ಹೃದಯಾಘಾತದಿಂದ ಕೊನೆಯುಸಿರೆಳೆದ ಸ್ಟಾಫ್ ನರ್ಸ್
ಮಹಾಂತೇಶ್(42) ಮೃತ ಸ್ಟಾಫ್ ನರ್ಸ್.

ರಾಯಚೂರು: ನೃತ್ಯ ಮಾಡುವಾಗ ಹೃದಯಾಘಾತ (heart attack) ದಿಂದ ಸ್ಟಾಫ್ ನರ್ಸ್ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಮಹಾಂತೇಶ್(42) ಮೃತ ಸ್ಟಾಫ್ ನರ್ಸ್. ಮೂಲತಃ ಜಿಲ್ಲೆಯ ಸಿಂಧನೂರು ತಾಲೂಕಿನ ದಿದ್ದಿಗಿ ಗ್ರಾಮದ ನಿವಾಸಿ. 74ನೇ ಗಣರಾಜ್ಯೋತ್ಸವ ಹಿನ್ನೆಲೆ ತಾಲೂಕು ಕ್ರೀಡಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದವು. ಈ ವೇಳೆ ಕಲಾವಿದರ ಜತೆ ನೃತ್ಯ ಮಾಡುತ್ತಿದ್ದಾಗ ಏಕಾಏಕಿ ಕುಸಿದುಬಿದ್ದ ಮಹಾಂತೇಶ್ ಕೊನೆಯುಸಿರೆಳೆದಿದ್ದಾರೆ. ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಮಹಾಂತೇಶ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು.​ ಕೂಡಲೇ ಅವರನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಹಾಂತೇಶ್(42) ಕೊನೆಯುಸಿರೆಳೆದಿದ್ದಾರೆ. ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ. ರಾಯಚೂರು ಸಿಂಧನೂರು ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವಪಕ್ಷೀಯ ಕಾರ್ಯಕರ್ತನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಲಾಠಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಹಾಸನ ಬಿಜೆಪಿ ನಾಯಕ

ಹಾಸನ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ನಾಯಕರು ಮತದಾರರನ್ನು ಸೆಳೆಯಲು ನಾನಾ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ಹಾಸನದಲ್ಲಿ ಬಿಜೆಪಿ ನಾಯಕರೊಬ್ಬರು ಸ್ವಪಕ್ಷೀಯ ಕಾರ್ಯಕರ್ತನನ್ನು ಅಟ್ಟಾಡಿಸಿಕೊಂಡು ಹೊಡೆದಿರುವ ಘಟನೆ ಅರಸೀಕೆರೆಯಲ್ಲಿ ನಡೆದಿದೆ. ಬಿಜೆಪಿಯ ಬೂತ್ ವಿಜಯ್ ಅಭಿಯಾನ ಕಾರ್ಯಕಮದಲ್ಲಿ ತಮಗೆ ಅವಮಾನ ಮಾಡಿದ್ದಾನೆಂದು ವಿಜಯ್ ಕುಮಾರ್ ತನ್ನ ಕಾರು ಚಾಲಕನ ಜೊತೆ ಸೇರಿಕೊಂಡು ಕುಮಾರ್​ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಆರ್ಕಿಡ್​ ಇಂಟರ್​ನ್ಯಾಷನಲ್ ಶಾಲೆ ವಿರುದ್ಧ ದೂರು ದಾಖಲು​, ಕಪ್ಪುಪಟ್ಟಿಗೆ ಸೇರಿಸಲು ಚಿಂತನೆ

ವರ್ಷದ ಹಿಂದೆ ಬಿಜೆಪಿ ಸಮಾವೇಶದ ವೇಳೆ ಬಿಜೆಪಿ ಬಿಜೆಪಿ ಅರಸೀಕೆರೆ ಬಿಜೆಪಿ ಟಿಕೇಟ್ ಆಕಾಂಕ್ಷಿ ಎನ್.ಆರ್.ಸಂತೋಚ್ ಹಾಗೂ ವಿಜಯ್ ಕುಮಾರ್ ಬಣದ ನಡುವೆ ಗಲಾಟೆ ನಡೆದಿತ್ತು. ಹಲ್ಲೆಗೊಳಗಾದ ಕುಮಾರ್ ಎನ್.ಆರ್ ಸಂತೋಷ್ ಬಣದಲ್ಲಿ ಗುರ್ತಿಸಿಕೊಂಡಿದ್ದರು. ಅಲ್ಲದೇ ಇತ್ತೀಚೆಗೆ ಬಿಜೆಪಿಯ ಬೂತ್​ ವಿಜಯ್ ಅಭಿಯಾನ​ ನಿಮಿತ್ತ ಗ್ರಾಮಗಳಿಗೆ ತೆರಳಿದ್ದ ವೇಳೆ ಕೆಲ ಜನರಿಂದ ವಿಜಯ್ ಕುಮಾರ್​ಗೆ ಅವಮಾನವಾಗಿತ್ತು. ಆ ಘಟನೆ ವೀಡಿಯೋ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಎನ್ನಲಾಗಿದೆ.

ರಾ.ಹೆ 48ರಲ್ಲಿ ಟೈಯರ್ ಸ್ಫೋಟಗೊಂಡು ಮಿನಿ ಕ್ಯಾಂಟರ್ ಪಲ್ಟಿ

ನೆಲಮಂಗಲ: ಟೈಯರ್ ಸ್ಫೋಟಗೊಂಡು ಮಿನಿ ಕ್ಯಾಂಟರ್ ಪಲ್ಟಿ ಹೊಡೆದಿರುವಂತಹ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಈ ವೇಳೆ ಟೈಯರ್ ಬ್ಲಾಸ್ಟ್ ಆಗಿ ವಾಹನ ಪಲ್ಟಿಯಾಗಿದೆ. ನೆಲಮಂಗಲ ಸಂಚಾರಿ ಪೊಲೀಸರಿಂದ ಲಾರಿ ತೆರವು ಮಾಡಲಾಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ: ಅರವತ್ತು ಬಾರಿ ಕಳ್ಳತನ ಮಾಡಿದ್ದ ನಟೋರಿಯಸ್ ಮನೆಗಳ್ಳರ ಬಂಧನ: 660 ಗ್ರಾಂ ಚಿನ್ನ ವಶಕ್ಕೆ

ನೇಣು ಬಿಗಿದು ಮಹಿಳೆ ಆತ್ಮಹತ್ಯೆ

ಶಿವಮೊಗ್ಗ: ಮಹಿಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶಿವಮೊಗ್ಗದ ಗಾರ್ಡನ್ ಏರಿಯಾದ 3ನೇ ತಿರುವಿನಲ್ಲಿರುವ ಕಚೇರಿ ನಡೆದಿದೆ. ಸಹಕಾರ ಸಂಘದ ಕಾರ್ಯದರ್ಶಿ ಚುಂಚಾದ್ರಿ ಮೃತ ಮಹಿಳೆ. ಕಾರ್ಯದರ್ಶಿ ಅನಿತಾ ಮೃತದೇಹ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada