SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!

ನೆಲಮಂಗಲ: ಭಾರತದ ಅಗ್ರ ಸರ್ಕಾರಿ ಬ್ಯಾಂಕ್​ ಎನಿಸಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಎಟಿಎಂ ಮಷೀನ್ ಅನ್ನೇ (State Bank Of India ATM) ಹಣದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ (ATM Theft). ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕೃತ್ಯದ ಸುಳಿವು ಸಿಗಬಾರದೆಂದು ಸಿಸಿಟಿವಿ ಡಿವಿಆರ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ 2 ಕಿ.ಮೀ. ದೂರದಲ್ಲಿ ಸ್ಮಶಾನದ ಬಳಿ ಖಾಲಿ ಎಟಿಎಂ ಮಷೀನ್ ಪತ್ತೆಯಾಗಿದೆ. ಕಳ್ಳರು ಅಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ […]

SBI ATM Theft: ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
ಮಾಗಡಿ ರಸ್ತೆಯಲ್ಲಿ ಭಾರತೀಯ ಸ್ಟೇಟ್​ ಬ್ಯಾಂಕ್ ಎಟಿಎಂ ಮಷೀನ್ ಸಮೇತ ಕದ್ದೊಯ್ದ ಕಳ್ಳರು!
Follow us
TV9 Web
| Updated By: ಸಾಧು ಶ್ರೀನಾಥ್​

Updated on:Apr 16, 2022 | 4:47 PM

ನೆಲಮಂಗಲ: ಭಾರತದ ಅಗ್ರ ಸರ್ಕಾರಿ ಬ್ಯಾಂಕ್​ ಎನಿಸಿರುವ ಭಾರತೀಯ ಸ್ಟೇಟ್​ ಬ್ಯಾಂಕ್​ನ ಎಟಿಎಂ ಮಷೀನ್ ಅನ್ನೇ (State Bank Of India ATM) ಹಣದ ಸಮೇತ ಕಳ್ಳರು ಕದ್ದೊಯ್ದಿದ್ದಾರೆ (ATM Theft). ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಚಿಕ್ಕಗೊಲ್ಲರಹಟ್ಟಿಯಲ್ಲಿ ಘಟನೆ ನಡೆದಿದೆ. ಕೃತ್ಯದ ಸುಳಿವು ಸಿಗಬಾರದೆಂದು ಸಿಸಿಟಿವಿ ಡಿವಿಆರ್ ಅನ್ನೂ ಕಳ್ಳರು ಕದ್ದೊಯ್ದಿದ್ದಾರೆ. ಆದರೆ 2 ಕಿ.ಮೀ. ದೂರದಲ್ಲಿ ಸ್ಮಶಾನದ ಬಳಿ ಖಾಲಿ ಎಟಿಎಂ ಮಷೀನ್ ಪತ್ತೆಯಾಗಿದೆ. ಕಳ್ಳರು ಅಲ್ಲಿ ಗ್ಯಾಸ್ ಕಟರ್ ಬಳಸಿ ಎಟಿಎಂ ತೆರೆದು ಹಣ ದೋಚಿದ್ದಾರೆ. ಆದರೆ, ಬ್ಯಾಂಕ್ ಸಿಬ್ಬಂದಿ ನಿರ್ದಿಷ್ಟವಾಗಿ ಎಷ್ಟು ಮೊತ್ತದ ಹಣದ ಕಳುವಾಗಿದೆ ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ (Magadi Road at Chikkagollarahatti Bangalore North).

ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ; ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ಬೆಂಗಳೂರು: ಊಬರ್ ಕ್ಯಾಬ್ ಬುಕ್ ಮಾಡಿ ಚಾಲಕನಿಗೆ ಮಾರಕಾಸ್ತ್ರ ತೋರಿಸಿ ದರೋಡೆ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಡಿಫ್ರೆಂಟ್ ಆಗಿ ದರೋಡೆ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಕೊನೆಗೂ ಸಂಪಿಗೇಹಳ್ಳಿ ಠಾಣೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹೃತಿಕ್ ಗೌಡ(20), ನಿತಿನ್ ಗೌಡ(21), ಸುಮಂತ್(20), ದರ್ಶನ್(20) ಬಂಧಿತ ಆರೋಪಿಗಳು. ಬಂಧಿತರ ಬಳಿಯಿದ್ದ 5 ಲಕ್ಷ ರೂಪಾಯಿ ಮೌಲ್ಯದ ಕಾರು, ಒಂದು ಬೈಕ್, ಮೊಬೈಲ್, 18 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.

ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವು ಇನ್ನು ಮತ್ತೊಂದು ಕಡೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವಾಗಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳನ್ನೇ ಟಾರ್ಗೆಟ್ ಮಾಡಿ 10 ಕಾರುಗಳ ಗಾಜು ಒಡೆದು ಖದೀಮರು ಕಳ್ಳತನ ಮಾಡಿದ್ದಾರೆ. ಬಾಗಲಗುಂಟೆ, ಸೋಲದೇವನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಾರುಗಳಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳವಾಗಿದೆ. ಸಂಗೀತ್ ಕುಮಾರ್, ಅನಂತಸ್ವಾಮಿ, ಮಂಜುನಾಥ ನಾಯ್ಕ, ಸಚಿನ್, ದಿನೇಶ್, ಭೈರೇಗೌಡ, ತಿಲಕ್ ರಾಜ್, ಬಸವರಾಜು, ಹರ್ಷ, ಅರುಣ್‌ ಎಂಬುವರಿಗೆ ಸೇರಿದ ಕಾರುಗಳಲ್ಲಿ ಕಳ್ಳತನ ಮಾಡಲಾಗಿದೆ. ಕಳ್ಳರ ಗ್ಯಾಂಗ್ 5 ಲಕ್ಷಕ್ಕೂ ಹೆಚ್ಚು ಮೌಲ್ಯದ ವಸ್ತು ದೋಚಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7 ಕಾರುಗಳು, ಸೋಲದೇವನಹಳ್ಳಿ ವ್ಯಾಪ್ತಿಯಲ್ಲಿ 3 ಕಾರಿನ ಗಾಜು ಒಡೆದು ಕೃತ್ಯ ಎಸಗಲಾಗಿದೆ.

ಇದೂ ಓದಿ: ಪ್ರಚಲಿತ ಯುಗಧರ್ಮಕ್ಕೆ ಹೆಚ್ಚು ಸಮಂಜಸ – ಪ್ರಾಣಿ ಪಶು ಪಕ್ಷಿಗಳಲ್ಲಿ ಇರುವ ಬುದ್ಧಿ ಮನುಷ್ಯರಲ್ಲಿ ಏಕೆ ಇಲ್ಲ!?

ಇದೂ ಓದಿ: ಶಿವಮೊಗ್ಗ ಹರ್ಷ ಕೊಲೆಗೆ ಪ್ರತೀಕಾರವಾಗಿ ಕೊಲೆಗೆ ಸಂಚು; ಮತ್ತೊಂದು ಕೋಮುಗಲಭೆ ಸೃಷ್ಟಿಗೆ ಹೊಂಚು

Published On - 4:38 pm, Sat, 16 April 22

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ