ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಇದೀಗ ಬೆಂಗಳೂರಿನ ದಾಸರಹಳ್ಳಿಯಲ್ಲಿ (Dasarahalli) ಮಲತಂದೆಯೇ ಮಚ್ಚಿನಿಂದ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದಿದ್ದಾನೆ. ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ
ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Aug 24, 2024 | 9:27 PM

ಬೆಂಗಳೂರು, ಆ.24: ಬೆಂಗಳೂರಿನ ದಾಸರಹಳ್ಳಿಯಲ್ಲಿ(Dasarahalli) ಜೋಡಿ ಹತ್ಯೆಯಾಗಿದ್ದು, ಇಬ್ಬರು ಹೆಣ್ಣುಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಉತ್ತರ ಭಾರತ ಮೂಲದ ಫ್ಯಾಮಿಲಿಯಾಗಿದ್ದು, ದಾಸರಹಳ್ಳಿಯ ಕಾವೇರಿ ಬಡಾವಣೆಯೊಂದರ ಮನೆಯಲ್ಲಿ ವಾಸವಿದ್ದರು. ಸುಮಾರು 14 ಹಾಗೂ 15 ವರ್ಷದ ಹೆಣ್ಣು ಮಕ್ಕಳನ್ನ ಭೀಕರವಾಗಿ ಕೊಂದು ಪರಾರಿ ಆಗಿದ್ದಾನೆ. ಸ್ಥಳಕ್ಕೆ ಈಶಾನ್ಯ ವಿಭಾಗ ಡಿಸಿಪಿ ಸಜೀತ್, ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು ಈ ಕುರಿತು ಮಾತನಾಡಿದ ಈಶಾನ್ಯ ವಿಭಾಗ ಡಿಸಿಪಿ ಸಜಿತ್, ‘ಮಧ್ಯಾಹ್ನ 3:30 ರ ಸುಮಾರಿಗೆ ಕೊಲೆ ನಡೆದಿದೆ. ಈ ಘಟನೆ ಸಂಬಂಧ ತಾಯಿ ಅನಿತಾ ದೂರು ನೀಡಿದ್ದಾರೆ. ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ತಂದೆ ಘಟನೆ ಬಳಿಕ ನಾಪತ್ತೆ ಆಗಿದ್ದಾರೆ. ಅವರಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ತನಿಖೆ ಮುಂದುವರೆದಿದೆ ಎಂದರು.

ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ

ಬೆಂಗಳೂರು: ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನನ್ನ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಟೈಲ್ಸ್​ ಕೆಲಸ ಮಾಡುತ್ತಿದ್ದ ಪುಷ್ಪರಾಜ್​​(27) ಕೊಲೆಯಾದ ರ್ದುದೈವಿ. ನಿನ್ನೆ(ಆ.23) ರಾತ್ರಿ ಖಾಲಿ ಜಾಗದ ಶೆಡ್​​ನಲ್ಲಿ ಸ್ನೇಹಿತರ ಜೊತೆ ಪಾರ್ಟಿ ಮಾಡಿದ್ದ. ಎಣ್ಣೆ ಪಾರ್ಟಿ ವೇಳೆ ನಡೆದ ಜಗಳದಲ್ಲಿ ಪುಷ್ಪರಾಜ್​ನನ್ನು ಕೊಲೆ ಮಾಡಲಾಗಿದೆ. ಕುಡಿದ ಮತ್ತಿನಲ್ಲಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದು, ಇಂದು ಸಂಜೆ 4.30ಕ್ಕೆ ಪುಷ್ಪರಾಜ್ ಶವ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ 80 ಅಡಿ ರಸ್ತೆಯಲ್ಲಿ ಪತ್ತೆಯಾಗಿದೆ.ಸ್ಥಳಕ್ಕೆ ಸಂಪಿಗೆಹಳ್ಳಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ಹಾಸನ: ಕೋಟಿ ಕೋಟಿ ಇನ್ಶೂರೆನ್ಸ್ ಹಣ ಪಡೆಯಲು ಅಮಾಯಕನನ್ನು ಕೊಲೆ ಮಾಡಿ ನಾಟಕವಾಡಿದ್ದ ಖತರ್ನಾಕ್ ದಂಪತಿ ಅರೆಸ್ಟ್

ಬೈಕ್​ಗೆ ಲಗೇಜ್ ಆಟೋ ಡಿಕ್ಕಿ; ಸವಾರ ಸಾವು

ಕೋಲಾರ: ಲಗೇಜ್ ಆಟೋ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಂಗಾರಪೇಟೆ ತಾಲೂಕಿನ ದಿನ್ನಕೊತ್ತೂರು ಗ್ರಾಮದ ಬಳಿ ನಡೆದಿದೆ. ಮಾಲೂರು ತಾಲೂಕಿನ ನೀಡಮಾಕನಹಳ್ಳಿ ನಿವಾಸಿ ನಾಗರಾಜ್ ಮೃತ ಬೈಕ್ ಸವಾರ. ಇನ್ನು ಸ್ಥಳದಲ್ಲೇ ವಾಹನ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:17 pm, Sat, 24 August 24