ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಮುಷ್ಕರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಶಿಕ್ಷಕರು

|

Updated on: Feb 23, 2023 | 11:44 PM

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ (teachers) ಸಂಘದಿಂದ ಮುಷ್ಕರದಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಿಬ್ಬರಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ.

ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ ಸಂಘದಿಂದ ಮುಷ್ಕರ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಶಿಕ್ಷಕರು
ಆತ್ಮಹತ್ಯೆಗೆ ಯತ್ನಿಸಿದ ಶಿಕ್ಷಕರು
Follow us on

ಬೆಂಗಳೂರು: ಅನುದಾನಿತ ಶಾಲಾ-ಕಾಲೇಜು ಶಿಕ್ಷಕರ (teachers) ಸಂಘದಿಂದ ಮುಷ್ಕರದಲ್ಲಿ ಭಾಗಿಯಾಗಿದ್ದ ನಿವೃತ್ತ ಶಿಕ್ಷಕರಿಬ್ಬರಿಂದ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಸಿದ್ದಯ್ಯ ಹಿರೇಮಠ, ವೆಂಕಟರಾಜು ಆತ್ಮಹತ್ಯೆಗೆ ಯತ್ನಿಸಿದ ನಿವೃತ್ತ ಶಿಕ್ಷಕರು. ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫ್ರೀಡಂಪಾರ್ಕ್‌ನಲ್ಲಿ ಕಳೆದ 140 ದಿನಗಳಿಂದ ಮುಷ್ಕರ ನಡೆಸುತ್ತಿದ್ದರು. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಧಾರವಾಡ: ಲಾರಿಗೆ ಕಾರು ಡಿಕ್ಕಿ -ಕಾರಿನಲ್ಲಿದ್ದ ನಾಲ್ವರು, ಓರ್ವ ಪಾದಚಾರಿ ಸಾವು

ಧಾರವಾಡ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ (accident) ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಓರ್ವ ಪಾದಚಾರಿ ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಭೀಕರ ರಸ್ತೆ ಅಪಘಾತ ಧಾರವಾಡ ತಾಲೂಕಿನ‌ ತೇಗೂರ ಬಳಿ ನಡೆದಿದೆ. ಅವರಾದಿ ಗ್ರಾಮದ ನಾಗಪ್ಪ ಈರಪ್ಪ ಮುದ್ದೋಜಿ(29), ಮಂಜುನಾಥ್ ಬಸಪ್ಪ ಮುದ್ದೋಜಿ(40), ನಿಚ್ಚಣಕಿ ಗ್ರಾಮದ ಶ್ರೀಕುಮಾರ್ ನರಗುಂದ(5), ಬಸವರಾಜ್ ಶಿವಪುತ್ರಪ್ಪ ನರಗುಂದ(35) ಹಾಗೂ ಪಾದಚಾರಿ ಈರಣ್ಣ ಗುರುಸಿದ್ದಪ್ಪ ರಾಮನಗೌಡರ್(35) ಮೃತರು. ಒಮ್ಮೆಲೇ ಎದುರಿಗೆ ಬಂದ ಪಾದಚಾರಿಯನ್ನು ತಪ್ಪಿಸಲು ಹೋಗಿ ನಿಂತಿದ್ದ ಲಾರಿಗೆ ಕಾರು ಗುದ್ದಿದೆ.

ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ

ಮೃತ ಮಂಜುನಾಥ್ ಮುದ್ದೋಜಿ ಅಗ್ನಿಪಥ್​ದಲ್ಲಿ ನೇಮಕಗೊಂಡಿದ್ದು ಆತನನ್ನು ಬಿಟ್ಟು ಬರಲು ಸಂಬಂಧಿಕರು ಹುಬ್ಬಳ್ಳಿಗೆ ಹೊರಟಿದ್ದಾಗ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ

ಬೆಂಗಳೂರು: ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿದ್ದ ಆರೋಪಿಗೆ ಕಾರಾಗೃಹ ಶಿಕ್ಷೆ ವಿಧಿಸಿ ಸಿಎಂಎಂ ನ್ಯಾಯಾಲಯ ಫೆ. 20ರಂದು ಆದೇಶಿಸಿದೆ. ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ.96 ಓಕಳಿಪುರಂ, 1ನೇ ಮುಖ್ಯರಸ್ತೆ, ಬಿಡಿಎ ನಿವೇಶನವನ್ನು ಓಕಳಿಪುರಂ ನಿವಾಸಿ ಮುದ್ದುಕೃಷ್ಣ ಟಿ.ಎಲ್​.ಬಿನ್ ಲೇಟ್ ಟಿ.ಎ.ಎಲ್ ನಾಯ್ಡು (72) ಎಂಬುವವರು ಸರ್ಕಾರಿ ಸ್ವತ್ತಾದ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಅನಧಿಕೃವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಬಿಎಂಟಿಎಫ್ ಪೊಲೀಸ್ ಠಾಣೆ ಮೊ.ಸಂ 28/2014 ಕಲಂ 436(ಎ) ಕೆ.ಎಂ.ಸಿ ಆಕ್ಟ್ ರೀತ್ಯಾ ದಿನಾಂಕ 30-05-2014 ರಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಧಾರವಾಡ: ಲಾರಿ-ಕಾರು ನಡುವೆ ಭೀಕರ ಅಪಘಾತ, ಐವರು ಸ್ಥಳದಲ್ಲೇ ದುರ್ಮರಣ

ಬಿಎಂಟಿಎಫ್ ಪೊಲೀಸ್‌ ಠಾಣೆಯಲ್ಲಿ ತನಿಖೆ ಕೈಗೊಳ್ಳಲಾಗಿದ್ದು, ಸದರಿ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಸಾಕ್ಷಾಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಕೋರ್ಟ್​ಗೆ ಸಲ್ಲಿಸಲಾಗಿದೆ. ಆರೋಪಿ ಮುದ್ದುಕೃಷ್ಣ (72) 1 ವರ್ಷ ಕಾರಾಗೃಹ ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದೆ. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿಯಾಗಿ 30 ದಿನಗಳ ಕಾಲ ಕಾರಾಗೃಹ ಶಿಕ್ಷೆಯನ್ನು ವಿಧಿಸಿ ಆದೇಶ ಹೋರಡಿಸಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 11:44 pm, Thu, 23 February 23