ಅಲಿಗಢದಲ್ಲಿ ಸಹಪಾಠಿಗೆ ಬೆಂಕಿ ಹಚ್ಚಿದ 10ನೇ ತರಗತಿ ವಿದ್ಯಾರ್ಥಿ
10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಅಲಿಗಢದಲ್ಲಿ ನಡೆದಿದೆ.ಶಾಲಾ ಬ್ಯಾಗ್ಗೆ ಹಾನಿ ಮಾಡಿದ್ದ ವಿಚಾರವಾಗಿ ಜಗಳ ಆರಂಭವಾಗಿತ್ತು, ವಿದ್ಯಾರ್ಥಿಯೊಬ್ಬ ಮತ್ತೊಬ್ಬ ವಿದ್ಯಾರ್ಥಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸಂತ್ರಸ್ತ ಬಾಲಕನನ್ನು ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ, 25 ಪ್ರತಿಶತದಷ್ಟು ದೇಹ ಸುಟ್ಟು ಹೋಗಿದೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಆತನ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ.

ಪೊಲೀಸರ ಪ್ರಕಾರ, ವಿದ್ಯಾರ್ಥಿಗಳು ತಮ್ಮ ಬ್ಯಾಗ್‌ಗಳಿಗೆ ಹಾನಿಯಾದ ಬಗ್ಗೆ ಜಗಳವಾಡಿದ್ದರು, ಇದು ಅಂತಿಮವಾಗಿ 10 ನೇ ತರಗತಿಯ ವಿದ್ಯಾರ್ಥಿ ತನ್ನ ಸಹಪಾಠಿಗೆ ಬೆಂಕಿ ಹಚ್ಚಲು ಕಾರಣವಾಯಿತು. ಆದರೆ, ಆತ ಮತ್ತು ಆರೋಪಿ ನಡುವೆ ಯಾವುದೇ ವಿವಾದ ಇರಲಿಲ್ಲ ಎಂದು ಸಂತ್ರಸ್ತೆ ತಿಳಿಸಿದ್ದಾರೆ.
ನಾನು ಶಾಲೆಯ ಮೈದಾನದಲ್ಲಿ ಕುಳಿತಿದ್ದಾಗ ಯಾರೋ ಬಂದು ನನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು, ನನ್ನ ಸ್ನೇಹಿತರು ಆತನ್ನು ತಡೆದು ಬೆಂಕಿಯನ್ನು ನಂದಿಸಿದರು. ನಮ್ಮ ನಡುವೆ ಯಾವುದೇ ಸಮಸ್ಯೆ ಇರಲಿಲ್ಲ ಎಂದು ಕೈಫ್ ಹೇಳಿದರು. ಕೈಫ್ ಅವರ ತಂದೆ ರಹೀಸ್ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ ಮತ್ತು ತುರ್ತು ಕ್ರಮಕ್ಕೆ ಕೋರಿದ್ದಾರೆ ಎಂದು ಹೇಳಿದರು.
ಮತ್ತಷ್ಟು ಓದಿ: ಮಂಡ್ಯ: ಅಂಗಡಿಯಲ್ಲಿ ಕೂತು ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ
ಘಟನೆ ಬಗ್ಗೆ ಶಾಲೆಯಿಂದ ಮಾಹಿತಿ ಬಂದಿತ್ತು, ಮಗನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ನಾನು ಪೊಲೀಸರಲ್ಲಿ ದೂರು ದಾಖಲಿಸಿದ್ದೇನೆ ಎಂದು ಕೈಫ್ ತಂದೆ ರಯೀಸ್ ಹೇಳಿದ್ದಾರೆ.
ಆರೋಪಿಯನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದ್ದು, ಕೈಫ್ ಕುಟುಂಬದವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಶಾಲೆಯು ತನಿಖಾ ಸಮಿತಿಯನ್ನು ಸಹ ರಚಿಸಿದೆ.
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ