ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ, ಪುತ್ತೂರಿನಲ್ಲಿ ಬಿಗುವಿನ ವಾತಾವರಣ

ರಾಜಸ್ಥಾನದ ಉದಯಪುರದ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಇನ್ನೋರ್ವ ಬಾಲಕ ಚಾಕುವಿನಿಂದ ಇರಿದಿದ್ದ. ಈ ಘಟನೆ ರಾಜಸ್ಥಾನದಲ್ಲಿ ಕೋಮುಗಲಭೆಗೆ ಕಾರಣವಾಗಿತ್ತು. ಇದರಿಂದ ರಾಜ್ಯಾದ್ಯಂತ ಪ್ರತಿಭಟನೆ ಹೆಚ್ಚಾಗಿ, ಹಿಂಸಾಚಾರಕ್ಕೆ ತಿರುಗಿತ್ತು. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪ್ರಾಪ್ತ ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ವಿದ್ಯಾರ್ಥಿ ಚಾಕುವಿನಿಂದ ಇರಿದಿರುವ ಘಟನೆ ನಡೆದಿದೆ.

ಸಹಪಾಠಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ, ಪುತ್ತೂರಿನಲ್ಲಿ ಬಿಗುವಿನ ವಾತಾವರಣ
ವಿದ್ಯಾರ್ಥಿನಿಗೆ ಚಾಕು ಇರಿತ
Follow us
ಅಶೋಕ್​ ಪೂಜಾರಿ, ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on:Aug 20, 2024 | 3:11 PM

ಮಂಗಳೂರು, (ಆಗಸ್ಟ್ 20):  ಮುಸ್ಲಿಂ ವಿದ್ಯಾರ್ಥಿನಿಗೆ ಸಹಪಾಠಿ ವಿದ್ಯಾರ್ಥಿಯೋರ್ವ ಚಾಕುವಿನಿಂದ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಂಬೆಟ್ಟು ಸರ್ಕಾರಿ ಕಾಲೇಜಿನಲ್ಲಿ ನಡೆದಿದೆ. ಹಿಂದೂ ವಿದ್ಯಾರ್ಥಿಯೋರ್ವ ಮುಸ್ಲಿಂ ವಿದ್ಯಾರ್ಥಿನಿಯ ಕೈಗೆ ಚಾಕುವಿನಿಂದ ಇರಿದಿದ್ದಾನೆ. ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿಗೆ ಸೇರಿದ ವಿದ್ಯಾರ್ಥಿಗಳು. ಸದ್ಯ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಇತ್ತ ಚಾಕುವಿನಿಂದ ಇರಿದಿದ್ದ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನು ಹೆಸರು ಬದಲಾಯಿಸಿ ಹೇಳುವಂತೆ ಶಿಕ್ಷಕಿ ಒತ್ತಡ ಹೇರಿದ್ದಾರೆ ಎಂದು ಹಲ್ಲೆಗೊಳಗಾದ ಬಾಲಕಿ ಗಂಭೀರ ಆರೋಪ ಮಾಡಿದ್ದಾಳೆ. ಚಾಕುವಿನಿಂದ ಇರಿದಿದ್ದು ಎಂದು ಹೇಳಬೇಡ ಬದಲಿಗೆ ಕೈಗೆ ಗಾಜು ತಾಗಿ ಗಾಯವಾಗಿದೆ ಎಂದು ಹೇಳುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪ ಕೇಳಿಬಂದಿದ್ದು, ಸದ್ಯ ಆಸ್ಪತ್ರೆಯ ಮುಂದೆ ಜನ ಸೇರಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: Udaipur stabbing: ಉದಯಪುರದಲ್ಲಿ ಚಾಕು ಇರಿತದಿಂದ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು; ರಾಜಸ್ಥಾನದಲ್ಲಿ ಪರಿಸ್ಥಿತಿ ಮತ್ತಷ್ಟು ಉದ್ವಿಘ್ನ

ವಿಷಯ ತಿಳಿಯುತ್ತಿದ್ದಂತೆಯೇ ಆಸ್ಪತ್ರೆಗೆ ಪುತ್ತೂರು ಟೌನ್ ಠಾಣೆ ಪೊಲೀಸರು ದೌಡಾಯಿಸಿದ್ದು, ಜನರ ಮನವೊಲಿಸಿ ಆಸ್ಪತ್ರೆ ಆವರಣದಿಂದ ಹೊರಗೆ ಕಳುಹಿಸಿದ್ದಾರೆ.

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಹಲ್ಲೆಗೊಳಗಾದ ವಿದ್ಯಾರ್ಥಿನಿ, ಶ್ರೀಜಿತ್ ನನ್ನನ್ನ ಕಾಲೇಜು ಬಳಿ ಫಾಲೋ ಮಾಡಿಕೊಂಡು ಬಂದ. ನನ್ನ ಬಳಿ ಬಂದು ನೀನು ಹೇಮಲತಾನ ಗೆಳತಿ ಅಲ್ವಾ ಅಂತ ಕೇಳಿದ. ಅಲ್ಲದೇ ನಾನು ಹೇಮಲತಾನ ಲವ್ ಮಾಡಲ್ಲ, ನಿನ್ನ ಲವ್ ಮಾಡ್ತೇನೆ ಅಂದ. ಆಗ ನಾನು ಅವನಿಗೆ ಸರಿಯಾಗಿ ಬೈದಾಗಲೂ ಮತ್ತೆ ಮತ್ತೆ ಲವ್ ಮಾಡ್ತೇನೆ ಅಂದ. ಅಗ ನಾನು ವಿರೋಧಿಸಿದ್ದಕ್ಕೆ ನನ್ನ ಕೈಗೆ ಇರಿದು ಓಡಿ ಹೋಗಿದ್ದಾನೆ. ಅವನು ಪ್ರಥಮ ಪಿಯುಸಿ ಆರ್ಟ್ಸ್ ವಿದ್ಯಾರ್ಥಿ, ನಾನು ಕಾಮರ್ಸ್ ವಿದ್ಯಾರ್ಥಿ ಎಂದಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:59 pm, Tue, 20 August 24

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ