ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮನೋಜ್(18) ಮೃತ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ, ಡಿಸೆಂಬರ್ 24: ಜಿಲ್ಲೆಯ ಮೂಡಬಿದ್ರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆ ಹಾಸ್ಟೆಲ್ನಲ್ಲಿ ವಿದ್ಯಾರ್ಥಿ (Student) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಮನೋಜ್(18) ಮೃತ ದ್ವಿತೀಯ ಪಿಯುಸಿ ವಿದ್ಯಾರ್ಥಿ. ಗದಗ ಜಿಲ್ಲೆ ಮುಂಡರಗಿ ತಾಲೂಕಿನ ತರ್ಚಿಹಾಳ ಗ್ರಾಮದ ಮಲ್ಲಪ್ಪನವರ ಎಂಬುವವರ ಪುತ್ರ. ತಾವು ಬರುವವರೆಗೆ ಶವ ಸ್ಥಳಾಂತರಿಸದಂತೆ ಪೋಷಕರು ಆಗ್ರಹಿಸಿದ್ದಾರೆ. ಸದ್ಯ ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆಗೂ ಮುನ್ನ ಏನಾಗಿತ್ತೆಂದು ತಿಳಿಯಲು ಸಿಸಿಟಿವಿ ದೃಶ್ಯ ಪರಿಶೀಲನೆ ಮಾಡಲಾಗುತ್ತಿದೆ.
ಪೆಟ್ರೋಲ್ ಟ್ಯಾಂಕರ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಸಾವು
ಬಳ್ಳಾರಿ: ಪಾದಚಾರಿಗಳ ಮೇಲೆ ಪೆಟ್ರೋಲ್ ಟ್ಯಾಂಕರ್ ಹರಿದು ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಗರದ ಮೋತಿ ವೃತ್ತದಲ್ಲಿ ನಡೆದಿದೆ. ರಫಿಯಾಬೇಗಂ(26) ಮೃತ ಮಹಿಳೆ. ಮತ್ತೋರ್ವ ಮಹಿಳೆ ಸಬೀನಾ ತೊಡೆ ಮೇಲೆ ಪೆಟ್ರೋಲ್ ಟ್ಯಾಂಕರ್ ಹರಿದಿದೆ.
ಇದನ್ನೂ ಓದಿ: ಹಾವೇರಿ: ಹೆತ್ತವರ ಕಣ್ಣು ಮುಂದೆಯೇ ಹರಿತು ಮಗಳ ನೆತ್ತರು!ಕೊಲೆ ಮಾಡಿದ ಪತಿಗೆ ಗ್ರಾಮಸ್ಥರಿಂದ ಧರ್ಮದೇಟು
ಗಾಯಾಳು ಸಬೀನಾರನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಭೀಕರ ದೃಶ್ಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದ್ದು, ಬಳ್ಳಾರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮೆಟ್ಟುಬಂಡೆ ಹೆದ್ದಾರಿ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕೋಲಾರ: ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೋಲಾರ ತಾಲೂಕಿನ ಮೆಟ್ಟುಬಂಡೆ ರಾಷ್ಟ್ರೀಯ ಹೆದ್ದಾರಿ ಬಳಿ ನಡೆದಿದೆ. ಕೋಲಾರ ಹೊರವಲಯದ ಟಮಕ ನಿವಾಸಿ ಮಲ್ಲಿಕಾರ್ಜುನ್ (37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ: ಸ್ಥಳದಲ್ಲೇ ಬೈಕ್ ಸವಾರ ಸಾವು
ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಕ್ರಾಸ್ ಹತ್ತಿರ ನಡೆದಿದೆ. ದಂಡೋತಿ ಗ್ರಾಮದ ಪ್ರಕಾಶ್ (24 ) ಮೃತಪಟ್ಟ ದುರ್ದೈವಿ.
ಇದನ್ನೂ ಓದಿ: ನಕಲಿ ಆಧಾರ್ ಕಾರ್ಡ್ ಬಳಸಿ ಭಾರತಕ್ಕೆ ಎಂಟ್ರಿ: ಬೆಂಗಳೂರಲ್ಲಿ ಮೂವರು ಅಕ್ರಮ ಬಾಂಗ್ಲಾ ವಲಸಿಗರ ಬಂಧನ
ದಂಡೋತಿ ಗ್ರಾಮದಿಂದ ಚಿತ್ತಾಪುರಕ್ಕೆ ಬರುವಾಗ ಅವಘಡ ಸಂಭವಿಸಿದೆ. ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರೀಶಿಲನೆ ಮಾಡಿದ್ದು, ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.