ರಾಯರ ದರ್ಶನಕ್ಕೆ ಹೋದವರ ಮನೆಯಲ್ಲಿ ಚಿನ್ನ ಕದ್ದು, ಧರ್ಮಸ್ಥಳ ಮಂಜುನಾಥನ ಮುಂದೆ ಅರೆಸ್ಟ್​ ಆದ ಕಳ್ಳ

ಬೆಂಗಳೂರು ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಕಳ್ಳರು ಮನೆ ಕೆಲಸದವರ ಮಾತು ನಂಬಿ ಸುಬ್ರಮಣ್ಯ ನಗರದಲ್ಲಿನ ಮನೆಯೊಂದರಲ್ಲಿ ಕಳ್ಳತನ ಮಾಡಿದ್ದಾರೆ. ಕಳ್ಳತನ ಮಾಡಿ ಧರ್ಮಸ್ಥಳ ಮಂಜುನಾಥನ ದರ್ಶನಕ್ಕೆ ತೆರಳಿದ್ದಾರೆ. ಮುಂದೇನಾಯ್ತು ಈ ಸ್ಟೋರಿ ಓದಿ.

ರಾಯರ ದರ್ಶನಕ್ಕೆ ಹೋದವರ ಮನೆಯಲ್ಲಿ ಚಿನ್ನ ಕದ್ದು, ಧರ್ಮಸ್ಥಳ ಮಂಜುನಾಥನ ಮುಂದೆ ಅರೆಸ್ಟ್​ ಆದ ಕಳ್ಳ
ಕಳ್ಳರು
Follow us
Prajwal Kumar NY
| Updated By: ವಿವೇಕ ಬಿರಾದಾರ

Updated on:Oct 01, 2024 | 1:55 PM

ಬೆಂಗಳೂರು, ಅಕ್ಟೋಬರ್​ 01: ಕಳ್ಳತನ ಮಾಡಿದ 12 ಗಂಟೆಯಲ್ಲೇ ಸುಬ್ರಮಣ್ಯ ನಗರ ಪೊಲೀಸರು (Police) ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿ ಸನ್ಯಾಸಿಮಠ ನಂದೀಶ್ ಮತ್ತು ನಂದೀಶ್ ಪ್ರತಾಪ್ ಬಂಧಿತ ಆರೋಪಿಗಳು. ಆರೋಪಿಗಳು ಕಳ್ಳತನಕ್ಕೆ ಮಾಡಿದ ಪ್ಲ್ಯಾನ್​ ತೇಟ್​ ನಾಟಕದ ಕಥೆಯಂತಿದೆ. ಹೌದು.. ಪ್ರವಾಸಕ್ಕೆ ತೆರಳುವ ಮನೆಗಳನ್ನೇ ಟಾರ್ಗೆಟ್​ ಮಾಡಿ ಆರೋಪಿಗಳು ಕಳ್ಳತನ ಮಾಡುತ್ತಿದ್ದರು.

ಸುಬ್ರಮಣ್ಯ ನಗರದ ಮನೆಯೊಂದರಲ್ಲಿ ಕೆಲಸ ಮಾಡುತ್ತಿದ್ದವರಿಗೆ ಆರೋಪಿ ಸನ್ಯಾಸಿಮಠ ನಂದೀಶ್​​ ಸಂಬಂಧಿಕನಾಗಿದ್ದಾನೆ. “ತಮ್ಮ ಮನೆಯ ಮಾಲೀಕರು ಮಂತ್ರಾಲಯಕ್ಕೆ ಹೋಗುತ್ತಿದ್ದಾರೆ” ಎಂದು ಮನೆ ಕೆಲಸದವರು ಮಾತನಾಡಿಕೊಳ್ಳುತ್ತಿದ್ದರು. ಇವರ ಮಾತನ್ನು ಪಕ್ಕದಲ್ಲೇ ನಿಂತು ಸನ್ಯಾಸಿಮಠ ನಂದೀಶ್​ ಕದ್ದು ಕೇಳಿಸಿಕೊಂಡಿದ್ದನು. ಈ ವಿಚಾರವನ್ನ ಸನ್ಯಾಸಿಮಠ ನಂದೀಶ್​ ತನ್ನ ಸ್ನೇಹಿತರಿಗೆ ಹೇಳಿ, ಕಳ್ಳತನಕ್ಕೆ ಪ್ಲಾನ್ ಮಾಡಿದ್ದಾನೆ.

ಇದನ್ನೂ ಓದಿ: ಪುರಷನ ಜತೆ ರಾತ್ರಿ ಲಾಡ್ಜ್​ಗೆ ಬಂದಿದ್ದ ಮಹಿಳೆ ಬೆಳಗ್ಗೆ ಶವವಾಗಿ ಪತ್ತೆ!

ಮನೆಯವರು ಮಂತ್ರಾಲಯಕ್ಕೆ ಯಾವಾಗ ಹೋಗುತ್ತಾರೆ ಅಂತ ಮನೆ ಬಳಿ ನಿತ್ಯ ಪರೆಡ್​ ಮಾಡಿದ್ದಾನೆ. ಒಂದು ದಿನ ಮನೆಯವರು ಮಂತ್ರಾಲಯಕ್ಕೆ ಹೋಗಿದ್ದಾರೆ. ಇತ್ತ ಕಳ್ಳರು, ಮನೆಯ ಹಿಂಬದಿ ಕಿಟಕಿಯನ್ನು ಗ್ಯಾಸ್ ಕಟರ್​ನಿಂದ ಕಟ್ ಮಾಡಿ ಮನೆಯೊಳಗೆ ನುಗಿದ್ದಾರೆ. ಬಳಿಕ, ಮನೆಯಲ್ಲಿದ್ದ 1ಕೆಜಿ 800 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ. ಕದ್ದ ಎಲ್ಲ ಚಿನ್ನವನ್ನು ಸನ್ಯಾಸಿಮಠ ನಂದೀಶ್​ ತನ್ನ ರೂಂನಲ್ಲಿ ಇಟ್ಟಿದ್ದನು. ಬಳಿಕ, ಚಿನ್ನ ಕದ್ದ ಖುಷಿಯಲ್ಲಿ ಧರ್ಮಸ್ಥಳಕ್ಕೆ ಹೋಗಿದ್ದಾನೆ.

ಮನೆ ಮಾಲೀಕರು ಮಂತ್ರಾಲಯದಿಂದ ವಾಪಸು ಬಂದು ನೋಡಿದಾಗ, ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆ ಮಾಲೀಕರು ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಪೊಲೀಸರು ತನಿಖೆಗೆ ಇಳಿದಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಆಧಾರಿಸಿ ಪೊಲೀಸರು ಆರೋಪಿಗಳ ಬೆನ್ನು ಹತ್ತಿದ್ದಾರೆ. ಸನ್ಯಾಸಿಮಠ ನಂದೀಶ್​ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದು ಹೊರ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಬಳಿಕ, ಇನ್ನೋರ್ವ ಆರೋಪಿ ನಂದೀಶ್​ ಪ್ರತಾಪ್​ನನ್ನು ಬಂಧಿಸಿದ್ದಾರೆ. ಬಂಧಿತರಿಂದ ಪೊಲೀಸರು 1ಕೆಜಿ 800 ಗ್ರಾಂ ಚಿನ್ನ ಸೇರಿದಂತೆ 18 ಸಾವಿರ ರೂ. ನಗದು ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:51 pm, Tue, 1 October 24

ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ನಮ್ಮಣ್ಣ ಹುಟ್ಟೇ ಇರಲಿಲ್ಲ ಅಂತ ಸರ್ಕಾರ ಹೇಳಬಹುದು: ಸಚಿನ್ ಸಹೋದರಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಹುಲಿ ಹಿಂಸ್ರಪಶುವಾದರೂ ತನ್ನ ಮರಿಗಳ ವಿಷಯದಲ್ಲಿ ಮಮತಾಮಯಿ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ
ಐಶ್ವರ್ಯಾಗೆ ಲೈನ್ ಹೊಡೀತಿದ್ರಾ ಧನರಾಜ್? ಪತ್ನಿಗೆ ಮೂಡಿದೆ ಅನುಮಾನ