AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suicide: ಹಿರಿಯ ಅಧಿಕಾರಿಯ ಮಾತಿನಿಂದ ಮನನೊಂದು ಗುಂಡು ಹಾರಿಸಿಕೊಂಡ ಸಬ್ ಇನ್ಸ್‌ಪೆಕ್ಟರ್

ಹಿರಿಯರಿಂದ ತನಗೆ ಅವಮಾನ ಮಾಡಿದರೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಇಂದು ಬೆಳಿಗ್ಗೆ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Suicide: ಹಿರಿಯ ಅಧಿಕಾರಿಯ ಮಾತಿನಿಂದ ಮನನೊಂದು ಗುಂಡು ಹಾರಿಸಿಕೊಂಡ ಸಬ್ ಇನ್ಸ್‌ಪೆಕ್ಟರ್
inspector shot himself on the advice of a senior officer
TV9 Web
| Edited By: |

Updated on:Sep 10, 2022 | 4:03 PM

Share

ಚಂಡೀಗಢ: ಪಂಜಾಬ್​ನಲ್ಲಿ ತನ್ನ ಹಿರಿಯರಿಂದ ತನಗೆ ಅವಮಾನ ಮಾಡಿದರೆ ಎಂದು ಆರೋಪಿಸಿ ಸಹಾಯಕ ಸಬ್ ಇನ್ಸ್‌ಪೆಕ್ಟರ್ ಇಂದು ಬೆಳಿಗ್ಗೆ ಪೊಲೀಸ್ ಠಾಣೆಯೊಳಗೆ ತನ್ನ ಸರ್ವಿಸ್ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ, ಅದರಲ್ಲಿ ಆ ಪೊಲೀಸ್ ತಾನು ಯಾಕೆ? ಆತ್ಮಹತ್ಯೆ ಮಾಡಿಕೊಳ್ಳತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

ಹೋಶಿಯಾರ್‌ಪುರದ ಹರಿಯಾಣಾ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಸತೀಶ್ ಕುಮಾರ್, ಗುರುವಾರ ತಪಾಸಣೆಯ ವೇಳೆ ತಾಂಡಾ ಪೊಲೀಸ್ ಠಾಣೆಯ ಠಾಣಾಧಿಕಾರಿ ಓಂಕಾರ್ ಸಿಂಗ್ ತನ್ನ ಮೇಲೆ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ನನ್ನನ್ನು ಹೀಗೆ ಅವಮಾನಿಸುವುದಕ್ಕಿಂತ ಸುಮ್ಮನೆ ಗುಂಡು ಹಾರಿಸಿದ್ದರೆ ಚೆನ್ನಾಗಿರುತ್ತಿತ್ತು’ ಎಂದು ಹೇಳಿದ್ದು ವಿಡಿಯೋದಲ್ಲಿ ಕೇಳಿ ಬಂದಿದೆ.

ಎಸ್‌ಎಚ್‌ಒ ಅವರ ಒಂದು ಉತ್ತರದಿಂದ ತೃಪ್ತರಾಗದ ಕಾರಣ ಇಡೀ ಘಟನೆ ಸಂಭವಿಸಿದೆ ಎಂದು ಕುಮಾರ್ ಆರೋಪಿಸಿದ್ದಾರೆ. ಮುಂದಿನ ದಿನ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳಲ್ಲಿ ವಿಚಾರಣೆಗೆ ನಿಗದಿಪಡಿಸಲಾದ ಪ್ರಕರಣಗಳ ಬಗ್ಗೆ ಅವರು ನನ್ನನ್ನು ಕೇಳಿದರು. ನಾನು ವ್ಯವಹರಿಸುತ್ತಿರುವ ಒಂದೇ ಒಂದು ಪ್ರಕರಣವಿದೆ ಮತ್ತು ಇತರ ಪ್ರಕರಣಗಳ ವಿವರಗಳನ್ನು ಸಂಬಂಧಪಟ್ಟವರಿಂದ ಕೇಳಬೇಕು ಎಂದು ನಾನು ಅವರಿಗೆ ಹೇಳಿದೆ. ನಂತರ ಅವರು ನನ್ನನ್ನು ಅವಮಾನಿಸಿದರು, ಅವರು ಮಾತು ಅಲ್ಲಿಗೆ ನಿಲ್ಲಲಿಲ್ಲ, ಅವರು ದಾಖಲೆ ಪುಸ್ತಕದಲ್ಲಿ ನನ್ನ ವಿರುದ್ಧ ದೂರು ದಾಖಲಿಸಿದ್ದಾರೆ.

ಘಟನೆಯ ನಂತರ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ ಎಂದು ಹೇಳಿದರು. ಎಸ್‌ಎಚ್‌ಒ ಅವರನ್ನು ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೋಶಿಯಾರ್‌ಪುರದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸರ್ತಾಜ್ ಸಿಂಗ್ ಚಾಹಲ್ ಅವರು ಕಿರಿಯ ಪೊಲೀಸರಿಗೆ ಯಾವುದೇ ಸಮಸ್ಯೆ ಎದುರಾದರೆ ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದ್ದಾರೆ.

Published On - 4:02 pm, Sat, 10 September 22

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ