ಸ್ಮಶಾನದಲ್ಲಿ ವಿಚಿತ್ರ ರಂಗೋಲಿಯ ಚಿತ್ತಾರ! ಅದ ಕಂಡು ಬೆಚ್ಚಿಬಿದ್ದ ಸ್ಥಳೀಯರು

ಆಂಧ್ರ ಪ್ರದೇಶದಲ್ಲಿ ದಾರುಣ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಮಶಾನದಲ್ಲಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯ ವಿವರಗಳು ಈ ಕೆಳಗಿನಂತಿವೆ.

ಸ್ಮಶಾನದಲ್ಲಿ ವಿಚಿತ್ರ ರಂಗೋಲಿಯ ಚಿತ್ತಾರ! ಅದ ಕಂಡು ಬೆಚ್ಚಿಬಿದ್ದ ಸ್ಥಳೀಯರು
ಸ್ಮಶಾನದಲ್ಲಿ ವಿಚಿತ್ರ ರಂಗೋಲಿಯ ಚಿತ್ತಾರ! ಅದ ಕಂಡು ಬೆಚ್ಚಿಬಿದ್ದ ಸ್ಥಳೀಯರು
Follow us
TV9 Web
| Updated By: ಸಾಧು ಶ್ರೀನಾಥ್​

Updated on: Aug 24, 2022 | 4:12 PM

Andhra Pradesh Crime News: ಈ ಜಗತ್ತಿನಲ್ಲಿ ಮೂಢನಂಬಿಕೆಗಳು.. ಕೆಲವರ ಮೆದುಳಿನಲ್ಲಿ ಭದ್ರವಾಗಿ ಬೇರೂರಿ ಕುಳಿತುಬಿಟ್ಟಿದೆ. ವಾಮಾಚಾರ ಮತ್ತು ಮಾಟಮಂತ್ರದ ಹೆಸರಿನಲ್ಲಿ ದೆವ್ವಗಳನ್ನು ಸೃಷ್ಟಿಸುತ್ತಾರೆ. ಅದಕ್ಕೂ ಮುನ್ನ ಜೀವಂತವಾಗಿರುವವರ ಪ್ರಾಣ ಹಿಂಡಲು, ಜೀವ ತೆಗೆಯಲು ಕೂಡ ಹಿಂದೆ ಸರಿಯುವುದಿಲ್ಲ. ನರಬಲಿಯಂತಹ ಅನೇಕ ಘಟನೆಗಳನ್ನು ನಾವು ಆಗಾಗ ನೋಡಿದ್ದೇವೆ. ಇತ್ತೀಚೆಗೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ಇಂತಹದ್ದೇ ಘಟನೆಯೊಂದು ಬೆಳಕಿಗೆ ಬಂದಿದೆ.

ಸಾಮಾನ್ಯವಾಗಿ ಯಾರಾದರೂ ಸತ್ತ ನಂತರ, ಅವರನ್ನು ಅಂತ್ಯಕ್ರಿಯೆಗಾಗಿ ಶಾಸ್ತ್ರೋಕ್ತವಾಗಿ ಸ್ಮಶಾನಕ್ಕೆ ಕರೆದೊಯ್ಯಲಾಗುತ್ತದೆ. ಆದರೆ ಒಬ್ಬ ಜೀವಂತ ವ್ಯಕ್ತಿಯನ್ನೇ ಸ್ಮಶಾನಕ್ಕೆ ಕರೆದೊಯ್ದು ಕೊಲ್ಲಲ್ಪಡಲಾಗಿದೆ. ಇದೆಲ್ಲಾ ನಡೆದಿರುವುದು ಗುಪ್ತ ನಿಧಿಗಾಗಿ! ಈ ದುಷ್ಕೃತ್ಯದ ಬಗ್ಗೆ ಸ್ಥಳೀಯರು ಮತ್ತಷ್ಟು ಮಾಹಿತಿ ನೀಡಿದ್ದಾರೆ. ಮರವಪಲ್ಲಿ ಹೊಂಡದ ಬಳಿ ಈ ಘಟನೆ ನಡೆದಿದೆ. ಮೃತನನ್ನು ನಾಗಾರ್ಜುನ ರೆಡ್ಡಿ ಎಂದು ಗುರುತಿಸಲಾಗಿದೆ. ಅವರನ್ನು ಅಮಾನುಷವಾಗಿ ಕಲ್ಲಿನಿಂದ ಹೊಡೆದು ಕೊಂದಿದ್ದಾರೆ. ಈ ಕೊಲೆ ನಡೆದ ಸ್ಥಳದ ಬಳಿ ವಿಚಿತ್ರವಾಗಿ ದೈವಿಕ ಚಿತ್ತಾರಗಳು ಮತ್ತು ತಾಂತ್ರಿಕ ಪೂಜೆಯ ಕುರುಹುಗಳಿವೆ. ಅಲೌಕಿಕ ಶಕ್ತಿ ಮತ್ತು ಗುಪ್ತ ನಿಧಿಗಾಗಿ ಈ ಕೊಲೆ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪೊಲೀಸರು ಸ್ಥಳಕ್ಕೆ ಬಂದು, ಶ್ವಾನದಳದ ಸಹಾಯದಿಂದ ವಿವರ ಸಂಗ್ರಹಿಸಿದ್ದಾರೆ. ಸಂಪೂರ್ಣ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದಿರುವ ಪೊಲೀಸರು ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

To read more in Telugu click here 

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ