ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧದ ಶಂಕೆ; ಪತ್ನಿಯನ್ನ ನಡು ಬೀದಿಯಲ್ಲಿ ಕೊಚ್ಚಿ ಕೊಲೆಗೈದ ಪತಿ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 17, 2023 | 3:36 PM

ಅಲಕಾಪುರ ಗ್ರಾಮದ ಪತಿ ಅಂಜುಮನ್ ಖಾನ್, ಕೊಲೆ ಮಾಡಿ ನಂತರ ಗೌರಿಬಿದನೂರು ಗ್ರಾಮಾಂತರ ಠಾಣೆಗೆ ತೆರಳಿ ಶರಣಾಗಿದ್ದಾನೆ. ಜೊತೆಗೆ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಾನೆ. ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧದ ಶಂಕೆ; ಪತ್ನಿಯನ್ನ ನಡು ಬೀದಿಯಲ್ಲಿ ಕೊಚ್ಚಿ ಕೊಲೆಗೈದ ಪತಿ
ಆರೋಪಿ ಪತಿ
Follow us on

ಚಿಕ್ಕಬಳ್ಳಾಪುರ, ಸೆ.17: ಅಕ್ರಮ ಸಂಬಂಧದ ಶಂಕೆ ಹಿನ್ನಲೆ ಪತಿಯೇ ನಡು ಬೀದಿಯಲ್ಲಿ ಚಾಕುವಿನಿಂದ ಪತ್ನಿಯ ಕತ್ತು ಸೀಳಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಅಲಕಾಪುರ ಕ್ರಾಸ್ ಎಸ್​ಡಿಎಂ ವೈನರಿ ಕಾರ್ಖಾನೆ ಬಳಿ ನಡೆದಿದೆ. ಹಿಂದೂಪುರ ಮೂಲದ ಶಾನಜ್ (28)ಕೊಲೆಯಾದ ಮಹಿಳೆ. ಅಲಕಾಪುರ ಗ್ರಾಮದ ಪತಿ ಅಂಜುಮನ್ ಖಾನ್, ಕೊಲೆ ಮಾಡಿ ನಂತರ ಗೌರಿಬಿದನೂರು ಗ್ರಾಮಾಂತರ ಠಾಣೆಗೆ ತೆರಳಿ ಶರಣಾಗಿದ್ದಾನೆ. ಜೊತೆಗೆ ಪತ್ನಿ ಬೇರೊಬ್ಬ ಪುರುಷನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಕೊಲೆ ಮಾಡಿರುವುದಾಗಿ ಪೊಲೀಸರ ಬಳಿ ಹೇಳಿಕೆ ನೀಡಿದ್ದಾನೆ. ಸ್ಥಳಕ್ಕೆ ಮಂಚೇನಹಳ್ಳಿ ಠಾಣೆಯ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಬಾಗಲಕೋಟೆ: ಜಿಲ್ಲೆಯ ಇಳಕಲ್ ತಾಲ್ಲೂಕಿನ ಮುರುಡಿ ಗ್ರಾಮದ‌ ಶರಣಪ್ಪ ರಾಜೂರ ಅವರ ಹೊಲದ ಬಳಿ ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಅಂದಾಜು 35 ರಿಂದ 40 ವರ್ಷದ ಮಹಿಳೆಯ ಶವ ಎಂದು ಗುರುತಿಸಲಾಗಿದ್ದು, ಮೊದಲು ಹೊಡೆದು ಬಳಿಕ ಮೈಮೇಲೆ ಪೆಟ್ರೋಲ್ ಅಥವಾ ಸೀಮೆ ಎಣ್ಣೆ ಸುರಿದು ದುಷ್ಕರ್ಮಿಗಳು ಸುಟ್ಟಿದ್ದಾರೆ. ಈ ಕುರಿತು ಅಮೀನಗಢ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಮಹಿಳೆ ಯಾರು? ಎಲ್ಲಿಯವಳು ಎಂಬ ಬಗ್ಗೆ ಪೊಲೀಸರು ತನಿಖೆ‌ ನಡೆಸಿದ್ದಾರೆ.

ಇದನ್ನೂ ಓದಿ:ಗುಂಡು ಹಾರಿಸಿ ಪತ್ನಿಯನ್ನೇ ಕೊಲೆ ಮಾಡಿದ ಪತಿ; ಹೆತ್ತಮ್ಮನನ್ನು ಕಳೆದುಕೊಂಡು ತಬ್ಬಲಿಯಾದ ನಾಲ್ವರು ಮಕ್ಕಳು

ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವು

ಬೆಂಗಳೂರು ಗ್ರಾಮಾಂತರ: ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಲೆಯರಹಳ್ಳಿಯಲ್ಲಿ ನಡೆದಿದೆ. ಕೋಳಿ ಫಾರಂನಲ್ಲಿ ರಾತ್ರಿ ಮಲಗಿದ್ದವರು ಬೆಳಗ್ಗೆ ಎನ್ನುವಷ್ಟರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನೇಪಾಳ ಮೂಲದ ಕಾಲೆ ಸರೆರಾ(60), ಲಕ್ಷ್ಮೀ ಸರೇರಾ(50) ಉಷಾ ಸರೇರಾ(40), ಪೊಲ್ ಸರೇರಾ(16) ಮೃತ ದುರ್ದೈವಿಗಳು‌. 8 ದಿನಗಳ ಹಿಂದೆಯಷ್ಟೇ ಕೆಲಸ ಅರಸಿ ಈ ನೇಪಾಳಿ ಕುಟುಂಬ ಬಂದಿದ್ದರು. ರಾತ್ರಿ ಶೆಡ್ ಬಾಗಿಲು ಹಾಕಿಕೊಂಡು ಮಲಗಿದ್ದ ಕುಟುಂಬಸ್ಥರು, ಇಂದು ಬೆಳಗ್ಗೆ ಸ್ಥಳೀಯರು ಹೋಗಿ ನೋಡಿದಾಗ ಶವವಾಗಿ ಪತ್ತೆಯಾಗಿದ್ದು, ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ