ಶಂಕಿತ ಉಗ್ರ ತಾಲಿಬ್ ಬಂಧನ ಪ್ರಕರಣ: ವಿಎಚ್​ಪಿಯಿಂದ ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ ಪ್ರಕರಣ ಸಂಬಂಧ ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ದೂರು ನೀಡಿದೆ. ಶಂಕಿತನಿಗೆ ಆಶ್ರಯ ನೀಡಿದವರ ಹಾಗೂ ಸಿಮ್ ಕಾರ್ಡ್​ ನೀಡಿದವರ ವಿರುದ್ಧ ಕ್ರಮಕ್ಕೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಶಂಕಿತ ಉಗ್ರ ತಾಲಿಬ್ ಬಂಧನ ಪ್ರಕರಣ: ವಿಎಚ್​ಪಿಯಿಂದ ಪೊಲೀಸ್ ಆಯುಕ್ತರಿಗೆ ದೂರು
ಶಂಕಿತ ಉಗ್ರ ತಾಲಿಬ್ ಹುಸೇನ್
Follow us
TV9 Web
| Updated By: Rakesh Nayak Manchi

Updated on: Jun 09, 2022 | 3:01 PM

ಬೆಂಗಳೂರು: ನಗರದಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಬಂಧನ ಪ್ರಕರಣ (Suspected Talib detention case) ಸಂಬಂಧ ನಗರ ಪೊಲೀಸ್ ಆಯುಕ್ತ ಪ್ರತಾಪ್​ ರೆಡ್ಡಿಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ (VHP) ದೂರು (complaint) ನೀಡಿದೆ. ತಾಲೀಬ್ ಹುಸೇನ್ ನೆಲೆಸಿದ್ದ ಮಸೀದಿಯನ್ನು ಸೀಜ್ ಮಾಡಬೇಕು, ಸಿಮ್ ಕಾರ್ಡ್ ನೀಡಿದವರಿಗೆ ಹಾಗೂ ಆತನಿಗೆ ಆಶ್ರಯ ಕಲ್ಪಿಸಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ವಿಎಚ್​ಪಿ ಮುಖಂಡರಾದ ತೇಜಸ್ ಗೌಡ, ಗೋವರ್ಧನ್ ಹಾಗೂ ಶಿವಕುಮಾರ್ ಅವರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಟಿಫಿನ್ ಬಾಕ್ಸ್ ಬಾಂಬ್ ರೆಡಿ ಮಾಡಿದ್ದ ಆರೋಪ: ಶಂಕಿತ ಉಗ್ರ ತಾಲಿಬ್ ನಡೆಸಿದ್ದ ಉಗ್ರಗಾಮಿ ಚಟುವಟಿಕೆಗಳ ವಿವರ ಇಲ್ಲಿದೆ

ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಏನೇನು ಭಯೋತ್ಪಾದಕ ಚಟುವಟಿಕೆಗಳು ನಡೆದಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಬೇಕು. ಹಿಂದೂಗಳ ಹಬ್ಬದಲ್ಲಿ ಅನುಮತಿ ಪಡೆಯಲು ಸಾಕಷ್ಟು ಒದ್ದಾಡಬೇಕು. ಆದರೆ ಮುಸ್ಲಿಮರ ಹಬ್ಬಗಳಲ್ಲಿ ಯಾವುದೇ ಅನುಮತಿ ಪಡೆಯದೆ ಆಚರಣೆ ಮಾಡಲಾಗುತ್ತಿದೆ. ರಂಜಾನ್ ಹಬ್ಬದಂದು ನಿಯಮ‌ ಉಲ್ಲಂಘನೆ ಬಗ್ಗೆಯೂ ಸೂಕ್ತ ತನಿಖೆ ನಡೆಸಬೇಕು ಎಂದು ಮನಿವಿ ಮಾಡಿದ್ದಾರೆ.

ನಮಾಜ್ ಮಾಡಬೇಡಿ ಎಂದು ಹೇಳುತ್ತಿಲ್ಲ, ಅದೆಲ್ಲವೂ ನಿಗದಿತ ಸ್ಥಳಗಳಲ್ಲಿ ಮಾಡಿಕೊಳ್ಳಲಿ. ಸಾರ್ವಜನಿಕರಿಗೆ ತೊಂದರೆ ನೀಡಿ ಹಬ್ಬ ಆಚರಣೆ ಮಾಡುವುದು ಬೇಡ. ರಂಜಾನ್ ದಿನವೂ ಕೂಡ ಯಾವುದೆ ಅನುಮತಿ ಪಡೆಯದೆ ರಸ್ತೆಗಳನ್ನ ಬ್ಲಾಕ್ ಮಾಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ತಿಂಗಳ ಬಕ್ರೀದ್ ವೇಳೆ ಅನುಮತಿ ಇಲ್ಲದೆ ರಸ್ತೆಗಳನ್ನ ಬ್ಲಾಕ್ ಮಾಡಿಸಬೇಡಿ‌ ಎಂದು ಹಿಂದೂ ಸಂಘಟನೆಯ ಮುಖಂಡ ಗೋವರ್ಧನ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಕ್ರೈಂ: ನೈಟಿ ಹಾಕಿಕೊಂಡ ಬಂದು ಮಣಪ್ಪುರಂ ಫೈನಾನ್ಸ್​ ಕಂಪನಿ ಅಂಗಡಿ ದೋಚಲು ಯತ್ನಿಸಿದ್ದವರ ಸೆರೆ, ಬೈಕ್​ಗಳ ಡಿಕ್ಕಿ-ದಂಪತಿ ಸೇರಿ ಮೂವರ ಸಾವು

ಲೌಡ್ ಸ್ಪೀಕರ್​ಗೆ ಅನುಮತಿ ಕೊಡಬೇಡಿ. ಕಾಯ್ದೆಯಲ್ಲಿ ಏನಿದೆಯೋ ಹಾಗೆ ಅನಮತಿ ನೀಡಬೇಕು. ಈಗಾಗಲೆ ಧ್ವನಿವರ್ಧಕಗಳಿಗೆ ಪೊಲೀಸ್ ಇಲಾಖೆ ಅನುಮತಿ ನೀಡುತ್ತಿದೆ. ಆದೇಶದ ಪ್ರಕಾರ ಅನುಮತಿಯನ್ನ ನೀಡಲಿ. ಡೆಸಿಬಲ್ ಎಷ್ಟಿರಬೇಕು ಅದರ ಎತ್ತರ ಎಷ್ಟು ಎಂಬುದರ ಬಗ್ಗೆ ಈಗಾಗಲೆ ನ್ಯಾಯಾಲಯ ಸೂಚನೆ ನೀಡಿದೆ. ಅದರಂತೆ ಅನುಮತಿ ನೀಡಲಿ ಎಂದು ಹೇಳಿದ್ದಾರೆ.

ಏನಿದು ಪ್ರಕರಣ? 

ಜಮ್ಮು ಕಾಶ್ಮೀರದಿಂದ ಬೆಂಗಳೂರಿನ ಶ್ರೀರಾಮಪುರಕ್ಕೆ ಬಂದ ತಾಲಿಬ್, ತನ್ನ ಹೆಸರು ಬದಲಾಯಿಸಿಕೊಂಡು ಮಸೀದಿ ಪಕ್ಕ ಯಾರಿಗೂ ಅನುಮಾನ ಬಾರದಂತೆ ಪತ್ನಿ ಹಾಗೂ ಮೂವರು ಮಕ್ಕಳೊಂದಿಗೆ ನೆಲೆಸಿದ್ದನು.  ಈತ ಮಸೀದಿಯಲ್ಲಿ ಪಾಠ ಪ್ರವಚನ ಮಾಡುತ್ತಿದ್ದ ಶಂಕೆಯೂ ವ್ಯಕ್ತವಾಗಿದ್ದು, ಓಕಳಿಪುರಂ ನಿವಾಸಿಯಾದ ಮೌಸೀನ್ ಎಂಬಾತ ತಾಲೀಬ್​ಗೆ ಸಿಮ್ ಕಾರ್ಡ್​ ಕೊಡಿಸಿದ್ದಾನೆ ಎನ್ನಲಾಗುತ್ತಿದೆ. ಮಂಗಳವಾರ ಜಮ್ಮು ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ ಕಾರ್ಯಾಚರಣೆ ನಡೆಸಿ ಅರೆಸ್ಟ್ ಮಾಡಿ ಕೊಂಡೊಯ್ದಿದ್ದಾರೆ.

ಇದನ್ನೂ ಓದಿ: Bengaluru News: ಬೆಂಗಳೂರಿನಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ ಅರೆಸ್ಟ್

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ