ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟ ಪತ್ನಿಯ ಅಂತ್ಯಸಂಸ್ಕಾರಕ್ಕೂ ಪತಿ​ ಬಂದಿಲ್ಲ. ಈ ಹಿನ್ನಲೆ ಕಾದು ಸುಸ್ತಾದ ಗ್ರಾಮಸ್ಥರು ಶವವನ್ನು ಮನೆಯ ಎದುರೇ ಇಟ್ಟು, ತಮ್ಮ ಮನೆಯ ಕಡೆ ನಡೆದಿದ್ದಾರೆ. ಇದರಿಂದ ಗಂಡನೇ ಕೊಲೆ ಮಾಡಿ ಬಾವಿಗೆ ಬಿಸಾಡಿರುವ ಶಂಕೆ ವ್ಯಕ್ತಿಯಾಗಿದೆ.

ತುಮಕೂರು: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವು, ಅತ್ಯಸಂಸ್ಕಾರಕ್ಕೂ ಬಾರದ ಪತಿ ಮೇಲೆ ಅನುಮಾನ
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 30, 2023 | 6:13 PM

ತುಮಕೂರು, ಆ.30: ಅನುಮಾನಸ್ಪದವಾಗಿ ವಿವಾಹಿತ ಮಹಿಳೆ ಸಾವನ್ನಪ್ಪಿದ ಘಟನೆ ತುಮಕೂರು (Tumakuru) ಜಿಲ್ಲೆಯ ಕೊರಟಗೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ. ಕಲಾವತಿ(26) ಮೃತ ಮಹಿಳೆ. ಇನ್ನು ಪತಿ ಸೋಮಶೇಖರ್ ಎಂಬಾತನೇ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪತ್ನಿ ಕಲಾವತಿಯನ್ನು ಕೊಲೆ ಮಾಡಿದ್ದಾನೆ ಎಂದು ಮೃತ ಮಹಿಳೆ ಕುಟುಂಬಸ್ಥರಿಂದ ಆರೋಪ ಕೇಳಿಬಂದಿದೆ. ಮನೆ ಪಕ್ಕದ ಶೆಡ್​ನಲ್ಲಿ ಸೋಮಶೇಖರ್ ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದನಂತೆ. ಇದೇ ವಿಚಾರವಾಗಿ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿದ್ದು, ಈ ಹಿನ್ನಲೆ ಪತಿ ಸೋಮಶೇಖರ್​ ಪತ್ನಿಯನ್ನು ಬಾವಿಗೆ ತಳ್ಳಿ ಕೊಲೆಗೈದಿದ್ದಾನೆ ಎಂದು ಆರೋಪಿಸಲಾಗಿದೆ.

ಪತ್ನಿ ಕಲಾವತಿ ಅಂತ್ಯಸಂಸ್ಕಾರಕ್ಕೂ ಬಾರದ ಪತಿ ಸೋಮಶೇಖರ್

ಹೌದು, ಅನುಮಾನಸ್ಪದವಾಗಿ ಮೃತಪಟ್ಟ ಪತ್ನಿಯ ಅಂತ್ಯಸಂಸ್ಕಾರಕ್ಕೆ ಪತಿ ಸೋಮಶೇಖರ್​ ಬಂದಿಲ್ಲ. ಕಾದು ಸುಸ್ತಾದ ಗ್ರಾಮಸ್ಥರು ಶವವನ್ನು ಮನೆಯ ಎದುರೇ ಇಟ್ಟು, ತಮ್ಮ ಮನೆಯ ಕಡೆ ನಡೆದಿದ್ದಾರೆ. ಇದರಿಂದ ಗಂಡನೇ ಕೊಲೆ ಮಾಡಿ ಬಾವಿಗೆ ಬಿಸಾಡಿರುವ ಶಂಕೆ ವ್ಯಕ್ತಿಯಾಗಿದೆ. ಅನ್ಯ ಸ್ತ್ರೀಯನ್ನು ತಂದಿಟ್ಟುಕೊಂಡಿದ್ದ ಕಾರಣಕ್ಕೆ ಪದೇ ಪದೇ ಗಂಡ ಹೆಂಡತಿಯ ನಡುವೆ ಗಲಾಟೆ ನಡೆಯುತ್ತಿತ್ತು. ನಿನ್ನೆಯೂ ಇದೇ ವಿಚಾರಕ್ಕೆ ಗಲಾಟೆ ನಡೆದು ಗಂಡನೇ ಹೆಂಡತಿಯನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಆರೋಪದ ಕೇಳಿಬಂದಿದೆ.

ಇದನ್ನೂ ಓದಿ:ಕರೇಕಟ್ಟೆ ಗ್ರಾಮದಲ್ಲಿ ಜನ ನೋಡುತ್ತಿದ್ದಂತೆ ರಸ್ತೆಯಲ್ಲಿ ಮಲಗಿದ್ದ ಶ್ವಾನಗಳ ಮೇಲೆ ಕಾರ್ ಹಾಯಿಸಿಕೊಂಡು ಹೋದ ದುಷ್ಟ, ಒಂದು ಸಾವು

ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡು ದಂಪತಿ ಸಾವು

ಮಂಡ್ಯ: ಸಾಲಭಾಧೆ ಹಿನ್ನೆಲೆ ಮನೆಯಲ್ಲಿಯೇ ವಿಷ ಸೇವಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ. ರಾಜೇಶ್(45), ಸುಧಾ(40) ಆತ್ಮಹತ್ಯೆ ಮಾಡಿಕೊಂಡ ಮೃತ ದಂಪತಿ. ಈ ಸಂಬಂಧ ಮಳವಳ್ಳಿ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಶುರು ಮಾಡಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ