8ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯ ಆರೋಪ

ಜಬ್ಬನಹಳ್ಳಿಯ ಏಕಲವ್ಯ ವಸತಿ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿ ಅಭಿಲಾಷ್ (13) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾನೆ. ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ. ಶಾಲಾ ಆಡಳಿತ ಮಂಡಳಿ ಮತ್ತು ವಾರ್ಡನ್‌ಗಳ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದೆ ಎಂದು ಆರೋಪಿಸಲಾಗಿದೆ.

8ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯ ಆರೋಪ
8ನೇ ತರಗತಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯ ಆರೋಪ
Edited By:

Updated on: Nov 04, 2024 | 10:27 PM

ತುಮಕೂರು, ನವೆಂಬರ್​ 04: ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ (death) ಘಟನೆ ನಡೆದಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್(13) ಮೃತ ವಿದ್ಯಾರ್ಥಿ. ಸದ್ಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ವಸತಿ ಶಾಲೆ ಪ್ರಿನ್ಸಿಪಾಲ್, ವಾರ್ಡನ್ ನಿರ್ಲಕ್ಷ್ಯದಿಂದ ಸಾವನ್ನಪ್ಪಿರುವುದಾಗಿ ಆರೋಪಿಸಲಾಗಿದೆ. ಮೃತ ವಿದ್ಯಾರ್ಥಿ ಅಭಿಲಾಷ್, ಶಕುನಿ ತಿಮ್ಮನಹಳ್ಳಿಯ ನಿವಾಸಿ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಾರು, 2 ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ-ಸವಾರ ಸ್ಥಳದಲ್ಲೇ ಸಾವು

ಕೋಲಾರ: ಕಾರು ಮತ್ತು 2 ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಚಲ್ದಿಗಾನಹಳ್ಳಿ ಬಳಿ ನಡೆದಿದೆ. ಕೊಡಿಚೆರುವು ಗ್ರಾಮ ಪಂಚಾಯತಿ ಮಾಜಿ ಸದಸ್ಯ ನಾರಾಯಣಸ್ವಾಮಿ(55) ಮತ್ತು ಜೆಡಿಎಸ್ ಮುಖಂಡ ಕೆ.ವಿ.ನಾರಾಯಣಸ್ವಾಮಿ(55) ಮೃತ ದುರ್ದೈವಿ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ಹೇಯ ಕೃತ್ಯ: ಮೈಸೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಅಪಘಾತದಲ್ಲಿ ಕಾರು, 2 ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಕಾರಿನಲ್ಲಿ ತೆರಳುತ್ತಿದ್ದವರಿಗೂ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಶ್ರೀನಿವಾಸಪುರ ಟೌನ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿ ಬಲಿ

ಮೈಸೂರು: ಕಾಡಾನೆ ದಾಳಿಗೆ ಅರಣ್ಯ ಸಿಬ್ಬಂದಿ ಬಲಿಯಾಗಿರುವಂತಹ ಘಟನೆ ಜಿಲ್ಲೆಯ ಹೆಚ್​.ಡಿ.ಕೋಟೆ ತಾಲೂಕಿನ ಗುಂಡ್ರೆ ಅರಣ್ಯ ವಲಯದಲ್ಲಿ ನಡೆದಿದೆ. ಹೊರಗುತ್ತಿಗೆ ಆಧಾರದಲ್ಲಿ ವಾಚರ್ ಆಗಿದ್ದ ಶಶಾಂಕ್(22) ಮೃತ ಸಿಬ್ಬಂದಿ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವು

ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದಾಗ ಶಶಾಂಕ್, ರಾಜು ಮೇಲೆ ದಾಳಿ ಮಾಡಿದ್ದು ಶಶಾಂಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಶಶಾಂಕ್ ಕಳೆದ 4 ತಿಂಗಳಿಂದ ಆನೆ ಕಾವಲು ಪಡೆಯ ವಾಚರ್ ಆಗಿದ್ದ. ಸದ್ಯ ಶಶಾಂಕ್ ಕುಟುಂಬಕ್ಕೆ ಶಾಸಕ ಅನಿಲ್ ಚಿಕ್ಕಮಾದು ಸಾಂತ್ವನ ಹೇಳಿದ್ದು, 5 ಲಕ್ಷ ರೂ. ಮೌಲ್ಯದ ಪರಿಹಾರದ ಚೆಕ್ ವಿತರಿಸಿದ್ದಾರೆ. ಕುಟುಂಬದ ಓರ್ವ ಸದಸ್ಯರಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.