AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಾನ್ಶಿಯರ್ ಜತೆ ಲವ್ವಿಡವ್ವಿ: ಹೋಟೆಲ್​ ನಡೆಸುತ್ತಿದ್ದ ಗಂಡನನ್ನೇ ಮುಗಿಸಿದ್ದ ಕೊಲೆಗಾತಿ ಪತ್ನಿ ಸಿಕ್ಕಿಬಿದ್ಲು

ತಮ್ಮ ಲವ್ವಿಡವ್ವಿಗೆ ಅಡ್ಡಿಯಾಗಿದ್ದಾನೆಂದು ಕಟ್ಟಿಕೊಂಡ ಗಂಡನನ್ನೇ ಕೊಲೆ ಮಾಡಿಸಿ ನಾಟಕವಾಡಿದ್ದ ಕೊಲೆಗಾತಿ ಇದೀಗ ಪೊಲೀಸರ ಕೈಗೆ ಸಿಕ್ಕಿಬಿದಿದ್ದಾಳೆ.

ಫೈನಾನ್ಶಿಯರ್ ಜತೆ ಲವ್ವಿಡವ್ವಿ: ಹೋಟೆಲ್​ ನಡೆಸುತ್ತಿದ್ದ ಗಂಡನನ್ನೇ ಮುಗಿಸಿದ್ದ ಕೊಲೆಗಾತಿ ಪತ್ನಿ ಸಿಕ್ಕಿಬಿದ್ಲು
ಸಾಂದರ್ಭಿಕ ಚಿತ್ರ
Jagadisha B
| Edited By: |

Updated on:Jul 03, 2023 | 8:35 AM

Share

ಬೆಂಗಳೂರು: ಬೆಂಗಳೂರಿನ (Bengaluru) ತಲಘಟ್ಟಪುರದಲ್ಲಿ ಜೂ.28ರಂದು ನಡೆದಿದ್ದ ಅರುಣ್​ ಕುಮಾರ್ ಎನ್ನುವ ವ್ಯಕ್ತಿ ಕೊಲೆ ಪ್ರಕರಣವನ್ನು ಪೊಲೀಸರು 40 ಗಂಟೆಗಳಲ್ಲಿ ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅರುಣ್​ ಕುಮಾರ್​ನನ್ನು ಕೊಲೆ ಮಾಡಿದ್ದು ಬೇರೆ ಯಾರು ಅಲ್ಲ ಕಟ್ಟಿಕೊಂಡಿದ್ದ ಹೆಂಡತಿ (Wife). ಹೌದು…ರಂಜಿತಾ ಎನ್ನುವಾಕೆ ತನ್ನ ಪ್ರಿಯಕರನೊಂದಿಗೆ (Lover) ಸೇರಿಕೊಂಡು ಪತಿ ಅರುಣ್​ ಕುಮಾರ್​ನನ್ನು ಕೊಲೆ ಮಾಡಿದ್ದಾಳೆ. ಈ ಸಂಬಂಧ ಇದೀಗ ತಲಘಟ್ಟಪುರ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಪತ್ನಿ ರಂಜಿತಾ, ಪ್ರಿಯಕರ ಗಣೇಶ್, ಶರತ್ ಶಿವಾನಂದ, ದೀಪು ಬಂಧಿತ ಆರೋಪಿಗಳು.

ಇದನ್ನೂ ಓದಿ: ಬೇರೆಯವನ ಜತೆ ಸಂಬಂಧ ಇದ್ರೆ ಡೈವರ್ಸ್ ಕೊಟ್ಟು ಹೋಗಿ, ಆದ್ರೆ ಗಂಡಂದಿರನ್ನು ಕೊಲೆ ಮಾಡ್ಬೇಡಿ: ಮಹಿಳೆಯರಲ್ಲಿ ವಿಶಿಷ್ಟ ಮನವಿ

ಆರೋಪಿ ಗಣೇಶ್​, ರಂಜಿತಾ ನಡುವೆ ಅಕ್ರಮ ಸಂಬಂಧ ಇತ್ತು. ಆದ್ರೆ, ತಮ್ಮಿಬ್ಬರ ಲವ್ವಿಡವ್ವಿಗೆ ಪತಿ ಅರುಣ್​ ಕುಮಾರ್ ಅಡ್ಡಿಯಾಗಿದ್ದ. ಈ ಹಿನ್ನೆಲೆಯಲ್ಲಿ ರಂಜಿತಾ ಜೂ.28ರಂದು ಪ್ರಿಯಕರ ಜತೆ ಸೇರಿ ಪತಿ ಅರುಣ್​ನನ್ನು ಕೊಲೆ ಮಾಡಿಸಿದ್ದಳು ಎಂದು ಪೊಲೀಸ್ ತನಿಖೆ ವೇಳೆ ಬೆಳಕಿಗೆ ಬಂದಿದೆ. ಜೂ.28ರಂದು ಅರುಣ್ ಕುಮಾರ್ ಕೊಲೆಯಾಗಿತ್ತು. ಈ ಬಗ್ಗೆ ಬೆಂಗಳೂರಿನ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೆನ್ನತ್ತಿದ್ದ ಪೊಲೀಸರಿಗೆ ಕೊಲೆಯಾದ ವ್ಯಕ್ತಿಯ ಪತ್ನಿ ಮೇಲೆ ಅನುಮಾನ ಬಂದಿದ್ದು, ಕೂಡಲೇ ಆಕೆಯನ್ನು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬಟಾಬಯಲಾಗಿದೆ.

ದಕ್ಷಿಣ ವಿಭಾಗದ ಡಿಸಿಪಿ  ಹೇಳಿದ್ದೇನು?

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣಕಾಂತ್ ಪ್ರತಿಕ್ರಿಯಿಸಿದ್ದು, ಜೂನ್ 28ರ ಬೆಳಗ್ಗೆ 7 ಗಂಟೆಗೆ ಹತ್ಯೆ ಬಗ್ಗೆ ಮಾಹಿತಿ ಬಂದಿತ್ತು. ಹತ್ಯೆಯಾದ ವ್ಯಕ್ತಿ 27 ವರ್ಷದ ಅರುಣ್ ಕುಮಾರ್ ಎಂದು ಪತ್ತೆ ಮಾಡಲಾಗಿತ್ತು. ಮಾಹಿತಿ ಬಂದ 40 ಗಂಟೆಯಲ್ಲಿ ಪ್ರಕರಣವನ್ನ ಬೇಧಿಸಲಾಗಿದೆ. ಅರುಣ್ ಕುಮಾರ್ ಹೆಂಡತಿ ಹಾಗೂ ಆಕೆಯ ಜೊತೆ ಇನ್ನೂ ನಾಲ್ಕು ಜನ ಪುರುಷರು ಸೇರಿ ಕೊಲೆ ಮಾಡಿದ್ದಾರೆ. ಅರುಣ್ ಕುಮಾರ್ ಆರ್ ಆರ್ ನಗರದ ಜೆಎಸ್ ಎಸ್ ಕಾಲೇಜು ಬಳಿ ಇರುವ ಗೌಡರ ಮನೆ ಬೀಗರ ಊಟ ಹೋಟೆಲ್ ನಡೆಸುತ್ತಿದ್ದ. ಖಾರದ ಪುಡಿ ಎರಚಿ ಬೀಯರ್ ಬಾಟಲ್, ಲಾಂಗ್ ನಿಂದ ಹೊಡೆದು ಕೊಲೆ ಮಾಡಲಾಗಿದೆ. ಮೊದಲೇ ಪ್ಲಾನ್ ಕೊಲೆ ಮಾಡಿದ್ದಾರೆ. ಘಟನಾ ಸ್ಥಳದಲ್ಲಿ ಖಾರದಪುಡಿ ಹಾಕಿ ಹೋಗಿದ್ದಾರೆ. ಆರೋಪಿಗಳ ಪೈಕಿ ಒಬ್ಬ ಫೈನಾನ್ಸಿರ್ ಇದ್ದಾನೆ. ಆತನಿಗೂ ಕೊಲೆಯಾದ ಅರುಣ್ ಪತ್ನಿಗೂ ಪರಿಚಯವಿತ್ತು. ಕೊಲೆಗೆ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದರು.

ಇನ್ನಷ್ಟು ಅಪರಾಧ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:31 am, Mon, 3 July 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ