ತಮಿಳುನಾಡು: ಬಿರಿಯಾನಿ ವಿಚಾರವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

ಬಿರಿಯಾನಿ ವಿಚಾರವಾಗಿ ನಡೆದ ಜಗಳದಲ್ಲಿ 22 ವರ್ಷದ ಯುವಕನ ಕೊಲೆಯಾಗಿರುವ ಘಟನೆ ತಮಿಳುನಾಡಿನ ಚೆನ್ನೈನ ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಬಾಲಾಜಿ ಎಂದು ಗುರತಿಸಲಾಗಿದ್ದು, ಇವರು ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎಂದು ಹೇಳಲಾಗಿದೆ.

ತಮಿಳುನಾಡು: ಬಿರಿಯಾನಿ ವಿಚಾರವಾಗಿ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2023 | 12:25 PM

ಚೆನ್ನೈ: ಬಿರಿಯಾನಿ ವಿಚಾರವಾಗಿ ನಡೆದ ಜಗಳದಲ್ಲಿ 22 ವರ್ಷದ ಯುವಕನ ಕೊಲೆಯಾಗಿರುವ ಘಟನೆ ತಮಿಳುನಾಡಿನ ಚೆನ್ನೈನ ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ನಡೆದಿದೆ. ಮೃತರನ್ನು ಬಾಲಾಜಿ ಎಂದು ಗುರತಿಸಲಾಗಿದ್ದು, ಇವರು ಚೆನ್ನೈನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಎಂದು ಹೇಳಲಾಗಿದೆ. ಈ ಯುವಕ ರಾತ್ರಿ ಊಟ ಮಾಡಲು ಮಣ್ಣೂರುಪೇಟೆ ಬಸ್ ನಿಲ್ದಾಣದ ಬಳಿ ಸ್ನೇಹಿತರೊಂದಿಗೆ ಬಂದು ಬೀದಿಬದಿಯ ಸ್ಟಾಲ್​​ ಒಂದರಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದಾನೆ, ಇದೇ ಸಮಯಕ್ಕೆ ಮದ್ಯಪಾನ ಮಾಡಿರುವ ಮೂವರು ವ್ಯಕ್ತಿಗಳು ಅದೇ ಸ್ಟಾಲ್​​​ಗೆ ಬಂದು, ಅವರು ಕೂಡ ಆರ್ಡರ್ ಮಾಡಿದ್ದಾರೆ. ಸ್ಟಾಲ್​​ ಮಾಲೀಕ ಮೊದಲು ಆರ್ಡರ್ ಮಾಡಿದವರಿಗೆ ಬಿರಿಯಾನಿ ನೀಡಿದ್ದಾನೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಈ ಮೂವರು ಕುಡುಕರು ಬಾಲಾಜಿಗೆ ರಾಡ್​​ನಿಂದ ಹೊಡೆದು ಕೊಂದಿದ್ದಾರೆ.

ಕುಡಿದ ಅಮಲಿನಲ್ಲಿದ್ದ ವ್ಯಕ್ತಿಗಳು ಬಾಲಾಜಿ ಮೇಲೆ ಹಲ್ಲೆ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಯುವಕನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಜೈಲಿನಿಂದ ಹೊರಬಂದ ಬೆನ್ನಲ್ಲೇ ರೌಡಿಶೀಟರ್​ ಕೊಲೆ: ದುಷ್ಕರ್ಮಿಗಳು ಪರಾರಿ

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂರತೆ ಚೆನ್ನೈ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.  

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್