BJP Leader Killed in Tamil Nadu: ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ ಮುಖಂಡನ ಹತ್ಯೆ

ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದರು

BJP Leader Killed in Tamil Nadu: ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ ಮುಖಂಡನ ಹತ್ಯೆ
ಬಿಜೆಪಿ
Follow us
ನಯನಾ ರಾಜೀವ್
|

Updated on: Apr 28, 2023 | 9:58 AM

ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದರು.  ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು.

ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್‌ ಬಳಿ ಕಾರು ಬಂದಾಗ ಏಕಾಏಕಿ ಶಂಕರ್‌ ಅವರ ಕಾರನ್ನು ಅಡ್ಡಗಟ್ಟಿದ ಆಗಂತುಕರು ಕಾರಿನ ಮೇಲೆ ಕಂಟ್ರಿ ಬಾಂಬ್‌ ಎಸೆದಿದ್ದಾರೆ. ಇದರಿಂದ ಗಾಬರಿಗೊಂಡ ಶಂಕರ್ ಕಾರು ನಿಲ್ಲಿಸಿ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ, ಗ್ಯಾಂಗ್ ಆತನನ್ನು ಹಿಂಬಾಲಿಸಿ ಕೊಂದು ಹಾಕಿ, ನಂತರ ಪರಾರಿಯಾಗಿದ್ದಾರೆ. ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ಛತ್ತೀಸಗಡ ಬಾಂಬ್ ದಾಳಿ ಪ್ರಕರಣ: ಹಾವೇರಿಯ ಸಿಆರ್​ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವು

ಮಾಹಿತಿ ಪಡೆದ ನಸರತ್‌ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ