ತಮಿಳುನಾಡಿನಲ್ಲಿ ನಡುರಸ್ತೆಯಲ್ಲೇ ಬಿಜೆಪಿ(BJP) ಮುಖಂಡನನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿ ಮನೆಗೆ ತೆರಳುತ್ತಿರುವಾಗ ನಡುರಸ್ತೆಯಲ್ಲಿ ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರಿನ ಮೇಲೆ ಬಾಂಬ್ ದಾಳಿ ನಡೆಸಿದ್ದರು. ಮೃತರನ್ನು ಪಿಪಿಜಿ ಶಂಕರ್ ಎಂದು ಗುರುತಿಸಲಾಗಿದೆ. ಅವರು ಪೆರಂಬೂರು ಪಕ್ಕದ ವಲರಪುರಂ ಪಂಚಾಯತ್ ಅಧ್ಯಕ್ಷರಾಗಿದ್ದರು. ತಮಿಳುನಾಡು ಬಿಜೆಪಿಯ ಎಸ್‌ಸಿ-ಎಸ್‌ಟಿ ವಿಭಾಗದ ರಾಜ್ಯ ಖಜಾಂಚಿಯೂ ಆಗಿದ್ದರು.
ಪೂನಮಲ್ಲೆ ಹೆದ್ದಾರಿಯ ನಸರತ್‌ಪೇಟೆ ಸಿಗ್ನಲ್ ಬಳಿ ಕಾರು ಬಂದಾಗ ಏಕಾಏಕಿ ಶಂಕರ್ ಅವರ ಕಾರನ್ನು ಅಡ್ಡಗಟ್ಟಿದ ಆಗಂತುಕರು ಕಾರಿನ ಮೇಲೆ ಕಂಟ್ರಿ ಬಾಂಬ್ ಎಸೆದಿದ್ದಾರೆ. ಇದರಿಂದ ಗಾಬರಿಗೊಂಡ ಶಂಕರ್ ಕಾರು ನಿಲ್ಲಿಸಿ ಅಲ್ಲಿಂದ ಓಡಿ ಹೋಗಿದ್ದಾರೆ. ಆದರೆ, ಗ್ಯಾಂಗ್ ಆತನನ್ನು ಹಿಂಬಾಲಿಸಿ ಕೊಂದು ಹಾಕಿ, ನಂತರ ಪರಾರಿಯಾಗಿದ್ದಾರೆ. ಶಂಕರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮತ್ತಷ್ಟು ಓದಿ: ಛತ್ತೀಸಗಡ ಬಾಂಬ್ ದಾಳಿ ಪ್ರಕರಣ: ಹಾವೇರಿಯ ಸಿಆರ್ಪಿಎಫ್ ಯೋಧ ಚಿಕಿತ್ಸೆ ಫಲಿಸದೆ ಸಾವು
ಮಾಹಿತಿ ಪಡೆದ ನಸರತ್‌ಪೇಟ್ ಪೊಲೀಸರು ಸ್ಥಳಕ್ಕೆ ಧಾವಿಸಿ ಶಂಕರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ.
ಘಟನೆ ನಡೆದ ಪ್ರದೇಶದಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಶಂಕರ್ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಸೇರಿದಂತೆ 15ಕ್ಕೂ ಹೆಚ್ಚು ಪ್ರಕರಣಗಳಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸುದ್ದಿಯನ್ನು ಇಂಗ್ಲಿಷ್ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ
ಕ್ರೈಂ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ